ಏರ್ ಇಂಡಿಯಾಗೆ ಡಿಜಿಸಿಎ 10 ಲಕ್ಷ ರೂಪಾಯಿ ದಂಡ!
ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಮಂಗಳವಾರ ಪ್ರಯಾಣಿಕರ ನಿಬಂಧನೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ಟಾಟಾ ಒಡೆತನದ ಏರ್ ಇಂಡಿಯಾಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದೆ.

ನವದೆಹಲಿ: ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಮಂಗಳವಾರ ಪ್ರಯಾಣಿಕರ ನಿಬಂಧನೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ಟಾಟಾ ಒಡೆತನದ ಏರ್ ಇಂಡಿಯಾಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಈ ಸಂಬಂಧ ಡಿಜಿಸಿಎ, ಏರ್ ಇಂಡಿಯಾಗೆ 'ಶೋ-ಕಾಸ್' ನೋಟಿಸ್ ಸಹ ಜಾರಿಗೊಳಿಸಿದ್ದು, ನಾಗರಿಕ ವಿಮಾನಯಾನ ಅಗತ್ಯತೆಗಳ(ಸಿಎಆರ್) ನಿಬಂಧನೆಗಳನ್ನು ಅನುಸರಿಸದಿರುವ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.
ಪ್ರಯಾಣಿಕರ-ಕೇಂದ್ರಿತ CARS ನ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು, ಮೇ 2023 ರಿಂದ ನಿರಂತರವಾಗಿವಿವಿಧ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ನಿಗದಿತ ದೇಶೀಯ ವಿಮಾನಯಾನ ಸಂಸ್ಥೆಗಳ ತಪಾಸಣೆ ನಡೆಸಲಾಗಿದೆ. ತಪಾಸಣೆಯ ಸಮಯದಲ್ಲಿ, ಏರ್ ಇಂಡಿಯಾ ಸಿಎಆರ್‌ನ ನಿಬಂಧನೆಗಳನ್ನು ಅನುಸರಿಸುತ್ತಿಲ್ಲ ಎಂಬುದನ್ನು ಗಮನಿಸಲಾಗಿದೆ ಎಂದು ಡಿಜಿಸಿಎ ಪ್ರಕಟಣೆಯಲ್ಲಿ ತಿಳಿಸಿದೆ.
ಸಿಎಆರ್‌ನ ನಿಬಂಧನೆಗಳಿಗೆ ಅನುಸಾರವಾಗಿ ಪ್ರತಿಕ್ರಿಯಿಸುವಂತೆ ಡಿಜಿಸಿಎಂ, ಏರ್ ಇಂಡಿಯಾಗೆ ಶೋಕಾಸ್ ನೋಟಿಸ್ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


