ವಾಣಿಜ್ಯ

ಬದರಿನಾಥ್-ಕೇದಾರನಾಥ ದೇವಸ್ಥಾನಕ್ಕೆ 5 ಕೋಟಿ ರೂ. ದೇಣಿಗೆ ನೀಡಿದ ಮುಖೇಶ್ ಅಂಬಾನಿ

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರು ಗುರುವಾರ ಚಮೋಲಿ ಜಿಲ್ಲೆಯ ಬದರಿನಾಥ ದೇವಾಲಯ ಮತ್ತು ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ನಂತರ ಬದರಿನಾಥ್-ಕೇದಾರನಾಥ...

ಬದರಿನಾಥ್-ಕೇದಾರನಾಥ ದೇವಸ್ಥಾನಕ್ಕೆ 5 ಕೋಟಿ ರೂ. ದೇಣಿಗೆ ನೀಡಿದ ಮುಖೇಶ್ ಅಂಬಾನಿ
ಮುಖೇಶ್ ಅಂಬಾನಿ
Published On :

ಚಮೋಲಿ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರು ಗುರುವಾರ ಚಮೋಲಿ ಜಿಲ್ಲೆಯ ಬದರಿನಾಥ ದೇವಾಲಯ ಮತ್ತು ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ನಂತರ ಬದರಿನಾಥ್-ಕೇದಾರನಾಥ ದೇವಾಲಯ ಸಮಿತಿಗೆ 5 ಕೋಟಿ ರೂ. ದೇಣಿಗೆ ನೀಡಿದ್ದಾರೆ.

ಬದರಿನಾಥಕ್ಕೆ ಆಗಮಿಸಿದ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬವನ್ನು ಬದರಿನಾಥ್-ಕೇದಾರನಾಥ ದೇವಾಲಯ ಸಮಿತಿಯ ಉಪಾಧ್ಯಕ್ಷ ಕಿಶೋರ್ ಪವಾರ್ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ಮುಖೇಶ್ ಅಂಬಾನಿ ಅವರು ಕುಟುಂಬ ಸದಸ್ಯರೊಂದಿಗೆ ಇಂದು ಬದರಿನಾಥ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ದೇವರ ಆಶೀರ್ವಾದ ಪಡೆದ ನಂತರ ಮುಖೇಶ್ ಅಂಬಾನಿ ದೇವಸ್ಥಾನದ ಸಮಿತಿಗೆ 5 ಕೋಟಿ ರೂ. ಮೊತ್ತದ ಚೆಕ್ ಅನ್ನು ಬಿಕೆಟಿಸಿ ಅಧ್ಯಕ್ಷ ಅಜೇಂದ್ರ ಅಜಯ್ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬಿಕೆಟಿಸಿ ಉಪಾಧ್ಯಕ್ಷ ಕಿಶೋರ್ ಪವಾರ್ ಅವರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.