ಕಾರುಗಳಿಗೆ ಆರು ಏರ್‌ಬ್ಯಾಗ್ ಕಡ್ಡಾಯ ಇಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ
ಸರ್ಕಾರ ಕಾರುಗಳಿಗೆ ಆರು ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸುವುದಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಬುಧವಾರ ಹೇಳಿದ್ದಾರೆ.

ನವದೆಹಲಿ: ಸರ್ಕಾರ ಕಾರುಗಳಿಗೆ ಆರು ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸುವುದಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಬುಧವಾರ ಹೇಳಿದ್ದಾರೆ.
ಪ್ರಯಾಣಿಕರ ಸುರಕ್ಷತೆಗಾಗಿ 2023ರ ಅಕ್ಟೋಬರ್‌ನಿಂದ ಆರು ಏರ್‌ಬ್ಯಾಗ್‌ಗಳ ಸುರಕ್ಷತಾ ಮಾನದಂಡವನ್ನು ಜಾರಿಗೆ ತರಲು ಸರ್ಕಾರ ಕಳೆದ ವರ್ಷ ಪ್ರಸ್ತಾಪಿಸಿತ್ತು.
"ನಾವು ಕಾರುಗಳಿಗೆ ಆರು ಏರ್‌ಬ್ಯಾಗ್‌ಗಳ ನಿಯಮವನ್ನು ಕಡ್ಡಾಯಗೊಳಿಸಲು ಬಯಸುವುದಿಲ್ಲ" ಎಂದು ಗಡ್ಕರಿ ಅವರು ಇಂದು ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸ್ಪಷ್ಟಪಡಿಸಿದ್ದಾರೆ.
ಕಳೆದ ವರ್ಷ, ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ(MoRTH)ದ ಪ್ರಕಟಣೆಯಲ್ಲಿ ಮೋಟಾರು ವಾಹನದ ಪ್ರಯಾಣಿಕರ ಸುರಕ್ಷತೆಯನ್ನು ಹೆಚ್ಚಿಸಲು, ಕೇಂದ್ರ ಮೋಟಾರು ವಾಹನಗಳ ನಿಯಮಗಳಿಗೆ(CMVR) ತಿದ್ದುಪಡಿ ಮಾಡುವ ಮೂಲಕ ಸುರಕ್ಷತಾ ವೈಶಿಷ್ಟ್ಯಗಳನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿತ್ತು.
ಏಪ್ರಿಲ್ 1, 2021 ರಂದು ಮತ್ತು ನಂತರ ತಯಾರಿಸಲಾದ ವಾಹನಗಳಲ್ಲಿ ಎರಡೂ ಮುಂಭಾಗದ ಆಸನಗಳಿಗೆ ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


