ನಿಮ್ಮಲ್ಲಿ 2000 ಮುಖಬೆಲೆಯ ನೋಟು ಇದೆಯೇ? ಇಂದೇ ಕೊನೆ ದಿನ, ಬ್ಯಾಂಕ್ ನಲ್ಲಿ ವಿನಿಮಯ ಮಾಡಿಕೊಳ್ಳಿ!
2000 ರೂಪಾಯಿ ಮುಖಬೆಲೆಯ ನೋಟು ಇಂದು ಸೆಪ್ಟೆಂಬರ್ 30 ಶನಿವಾರದ ನಂತರ ಅದರ ಮೌಲ್ಯವನ್ನು ಹೊಂದಿರುವುದಿಲ್ಲ. ಯಾವುದೇ ಬ್ಯಾಂಕ್‌ನಲ್ಲಿ ಅದನ್ನು ವಿನಿಮಯ ಮಾಡಿಕೊಳ್ಳದಿದ್ದರೆ ಅದು ಅಮಾನ್ಯವಾಗುತ್ತದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಸ್ಪಷ್ಟಪಡಿಸಿದೆ.

ನವದೆಹಲಿ: 2000 ರೂಪಾಯಿ ಮುಖಬೆಲೆಯ ನೋಟು ಇಂದು ಸೆಪ್ಟೆಂಬರ್ 30 ಶನಿವಾರದ ನಂತರ ಅದರ ಮೌಲ್ಯವನ್ನು ಹೊಂದಿರುವುದಿಲ್ಲ. ಯಾವುದೇ ಬ್ಯಾಂಕ್‌ನಲ್ಲಿ ಅದನ್ನು ವಿನಿಮಯ ಮಾಡಿಕೊಳ್ಳದಿದ್ದರೆ ಅದು ಅಮಾನ್ಯವಾಗುತ್ತದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಸ್ಪಷ್ಟಪಡಿಸಿದೆ.
ಕಾಲಮಿತಿಯಲ್ಲಿ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಬ್ಯಾಂಕ್ ನಲ್ಲಿ ವಿನಿಮಯ ಮಾಡಿಕೊಳ್ಳುವ ಪ್ರಕ್ರಿಯೆ ಪೂರ್ಣಗೊಳಿಸುವ ಉದ್ದೇಶಕ್ಕಾಗಿ ಮತ್ತು ಸಾರ್ವಜನಿಕರಿಗೆ ಸಾಕಷ್ಟು ಸಮಯವನ್ನು ಒದಗಿಸುವ ಉದ್ದೇಶಕ್ಕಾಗಿ RBI ಈ ಮೊದಲು ಸೆಪ್ಟೆಂಬರ್ 30ನ್ನು ಕೊನೆಯ ದಿನಾಂಕವಾಗಿ ನಿಗದಿಪಡಿಸಿತ್ತು.
ಆರ್‌ಬಿಐ ಮೇ ತಿಂಗಳಲ್ಲಿ ಹೆಚ್ಚಿನ ಮೌಲ್ಯದ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಲು ನಿರ್ಧರಿಸಿದ ನಂತರ 2000 ಮುಖಬೆಲೆಯ ಬ್ಯಾಂಕ್‌ನೋಟುಗಳಲ್ಲಿ ಸುಮಾರು ಶೇಕಡಾ 93ರಷ್ಟು ಬ್ಯಾಂಕಿಂಗ್ ವ್ಯವಸ್ಥೆಗೆ ಮರಳಿದೆ ಎಂದು ಹೇಳಿದೆ.
ಜನರು 2000 ಮುಖಬೆಲೆಯ ನೋಟುಗಳನ್ನು ಬ್ಯಾಂಕ್ ಶಾಖೆಗಳು ಮತ್ತು ಆರ್‌ಬಿಐನ ಪ್ರಾದೇಶಿಕ ಶಾಖೆಗಳಲ್ಲಿ ಬದಲಾಯಿಸಲು ಅಥವಾ ಠೇವಣಿ ಮಾಡಲು ಸೂಚಿಸಲಾಗಿದೆ. ಖಾತೆದಾರರಲ್ಲದವರು ಯಾವುದೇ ಬ್ಯಾಂಕ್ ಶಾಖೆಯಲ್ಲಿ ಒಮ್ಮೆಗೆ 20,000 ಮಿತಿಯವರೆಗೆ 2000 ಬ್ಯಾಂಕ್‌ನೋಟುಗಳನ್ನು ವಿನಿಮಯ ಮಾಡಿಕೊಳ್ಳಬಹುದು.
ಮೇ 19 ರಂದು, ಆರ್‌ಬಿಐ 2000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿತು ಆದರೆ ಅದು ಕಾನೂನುಬದ್ಧ ಟೆಂಡರ್ ಆಗಿ ಮುಂದುವರಿಯುತ್ತದೆ ಎಂದು ಹೇಳಿದೆ. ಆದರೆ, ತಕ್ಷಣವೇ ಜಾರಿಗೆ ಬರುವಂತೆ ಇಂತಹ ನೋಟುಗಳನ್ನು ನೀಡುವುದನ್ನು ನಿಲ್ಲಿಸುವಂತೆ ಆರ್‌ಬಿಐ ಬ್ಯಾಂಕ್‌ಗಳಿಗೆ ಸೂಚಿಸಿತ್ತು.
2000 ಮುಖಬೆಲೆಯ ಬ್ಯಾಂಕ್ ನೋಟನ್ನು ನವೆಂಬರ್ 2016 ರಲ್ಲಿ ದೇಶದಲ್ಲಿ ಚಲಾವಣೆಗೆ ಪರಿಚಯಿಸಲಾಯಿತು, ಪ್ರಾಥಮಿಕವಾಗಿ ಆ ಸಮಯದಲ್ಲಿ ಚಲಾವಣೆಯಲ್ಲಿದ್ದ ಎಲ್ಲಾ 500 ಮತ್ತು 1000 ಬ್ಯಾಂಕ್‌ನೋಟುಗಳ ವಹಿವಾಟನ್ನು ಹಿಂಪಡೆಯಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


