ಶೇ.88 ರಷ್ಟು 2000 ರೂಪಾಯಿ ನೋಟುಗಳು ಬ್ಯಾಂಕ್ ಗಳಿಗೆ ವಾಪಸ್: ಆರ್ ಬಿಐ
ಮೇ ತಿಂಗಳಲ್ಲಿ ಹೆಚ್ಚಿನ ಮೌಲ್ಯದ ರೂ. 2,000 ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ ನಂತರ ರೂ 3.14 ಲಕ್ಷ ಕೋಟಿ ಮೌಲ್ಯದ ಶೇ. 88 ರಷ್ಟು ರೂ. 2,000 ನೋಟುಗಳು ಬ್ಯಾಂಕ್ ಗಳಿಗೆ ವಾಪಸ್ಸಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಮಂಗಳವಾರ ತಿಳಿಸಿದೆ.

ನವದೆಹಲಿ: ಮೇ ತಿಂಗಳಲ್ಲಿ ಹೆಚ್ಚಿನ ಮೌಲ್ಯದ ರೂ. 2,000 ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ ನಂತರ ರೂ 3.14 ಲಕ್ಷ ಕೋಟಿ ಮೌಲ್ಯದ ಶೇ. 88 ರಷ್ಟು ರೂ. 2,000 ನೋಟುಗಳು ಬ್ಯಾಂಕ್ ಗಳಿಗೆ ವಾಪಸ್ಸಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಮಂಗಳವಾರ ತಿಳಿಸಿದೆ.
ನಿನ್ನೆಯವರೆಗೂ ಚಲಾವಣೆಯಿಂದ ಮರಳಿ ಪಡೆದ 2,000 ರೂಪಾಯಿಗಳ ನೋಟುಗಳ ಒಟ್ಟು ಮೌಲ್ಯ 3.14 ಲಕ್ಷ ಕೋಟಿ ರೂಪಾಯಿ ಎಂದು ಆರ್‌ಬಿಐ ಹೇಳಿದೆ. ಮೇ 19 ರಿಂದ ಈ ನೋಟುಗಳನ್ನು ಹಿಂಪಡೆಯಲಾಗುತ್ತಿದ್ದು, ನಿನ್ನೆ ಬ್ಯಾಂಕ್ ವ್ಯವಹಾರ ಮುಕ್ತಾಯದ ವೇಳೆ ಶೇ. 88 ರಷ್ಟು ನೋಟುಗಳನ್ನು ಹಿಂಪಡೆಯಲಾಗಿದೆ.
ಈ ನೋಟುಗಳ ಪೈಕಿ ಶೇ. 87ರಷ್ಟು ಠೇವಣಿ ರೂಪದಲ್ಲಿ ಬಂದಿದ್ದು, ಉಳಿದ ಶೇ 13ರಷ್ಟು ಹಣವನ್ನು ಇತರೆ ಮುಖಬೆಲೆಯ ನೋಟುಗಳಿಗೆ ಬದಲಾಯಿಸಲಾಗಿದೆ.
ಈ ನೋಟುಗಳ ವಿನಿಮಯ ಅಥವಾ ಠೇವಣಿ ಮಾಡಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. ಅದಕ್ಕೂ ಮುಂಚಿತವಾಗಿ ಸಾರ್ವಜನಿಕರು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ರಿಸರ್ವ್ ಬ್ಯಾಂಕ್ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


