ಭಾರತದ ಆರ್ಥಿಕ ಬೆಳವಣಿಗೆ ತುಂಬಾ ದುರ್ಬಲವಾಗಿದೆ: ಆರ್ ಬಿಐ ಎಂಪಿಸಿ ಸದಸ್ಯ
ಭಾರತದ ಆರ್ಥಿಕ ಬೆಳವಣಿಗೆಯು 'ಬಹಳ ದುರ್ಬಲವಾಗಿದೆ' ಎಂದು ತೋರುತ್ತಿದೆ. ಹೀಗಾಗಿ ಆರ್ಥಿಕ ಬೆಳವಣಿಗೆ ದರ ನಿರೀಕ್ಷೆಗಿಂತ ಕಡಿಮೆಯಾಗಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿಐ) ಹಣಕಾಸು ನೀತಿ ಸಮಿತಿ...

ನವದೆಹಲಿ: ಭಾರತದ ಆರ್ಥಿಕ ಬೆಳವಣಿಗೆಯು 'ಬಹಳ ದುರ್ಬಲವಾಗಿದೆ' ಎಂದು ತೋರುತ್ತಿದೆ. ಹೀಗಾಗಿ ಆರ್ಥಿಕ ಬೆಳವಣಿಗೆ ದರ ನಿರೀಕ್ಷೆಗಿಂತ ಕಡಿಮೆಯಾಗಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿಐ) ಹಣಕಾಸು ನೀತಿ ಸಮಿತಿ(ಎಂಪಿಸಿ)ಯ ಸದಸ್ಯ ಜಯಂತ್ ಆರ್ ವರ್ಮಾ ಅವರು ಭಾನುವಾರ ಹೇಳಿದ್ದಾರೆ.
ಭಾರತದಲ್ಲಿ 2022-23 ರಲ್ಲಿ ಹಣದುಬ್ಬರವು ಅಧಿಕವಾಗಿದೆ. ಆದರೆ 2023-24 ರಲ್ಲಿ ಅದು ಗಮನಾರ್ಹವಾಗಿ ಕಡಿಮೆಯಾಗುತ್ತದೆ ಎಂದು ವರ್ಮಾ ತಿಳಿಸಿದ್ದಾರೆ.
"ಆದಾಗ್ಯೂ, ದೇಶದ ಆರ್ಥಿಕ ಬೆಳವಣಿಗೆಯು ಬಹಳ ದುರ್ಬಲವಾಗಿ ಕಂಡುಬರುತ್ತಿದೆ ಮತ್ತು ವಿತ್ತೀಯ ಬಿಗಿಗೊಳಿಸುವಿಕೆಯು ಬೇಡಿಕೆಯನ್ನು ಕುಗ್ಗಿಸುತ್ತಿದೆ" ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.
ಹೆಚ್ಚಿನ ಬಡ್ಡಿದರಗಳು ಖಾಸಗಿ ಬಂಡವಾಳ ಹೂಡಿಕೆಯನ್ನು ಹೆಚ್ಚು ಕಷ್ಟಕರವಾಗಿಸುತ್ತಿದೆ ಎಂದ ವರ್ಮಾ, ಸರ್ಕಾರವು ಹಣಕಾಸಿನ ಬಲವರ್ಧನೆಯ ಕ್ರಮದಲ್ಲಿದೆ ಆರ್ಥಿಕತೆಗೆ ಬೆಂಬಲವನ್ನು ಕಡಿಮೆ ಮಾಡುತ್ತಿದೆ ಎಂದಿದ್ದಾರೆ.
ಭಾರತೀಯ ರಿಸರ್ವ್ ಬ್ಯಾಂಕ್ 2023- 24ರಲ್ಲಿ ಭಾರತ ಶೇಕಡಾ 6.4 ರಷ್ಟು ಆರ್ಥಿಕ ಬೆಳವಣಿಗೆ ದಾಖಲಿಸಲಿದೆ ಎಂದು ಅಂದಾಜಿಸಿದೆ. ರಾಷ್ಟ್ರೀಯ ಅಂಕಿಅಂಶ ಕಚೇರಿಯ(NSO) ಮೊದಲ ಮುಂಗಡ ಅಂದಾಜಿನ ಪ್ರಕಾರ 2022-23 ರಲ್ಲಿ ಒಟ್ಟು ನಿವ್ವಳ ಆಂತರಿಕ ಉತ್ಪಾದನೆ (ಜಿಡಿಪಿ)ಯ ಬೆಳವಣಿಗೆ ದರ ಶೇ.7ರಷ್ಟು ಆಗಲಿದೆ ಎಂದು ನಿರೀಕ್ಷಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


