ಆಧಾರ್-ಪ್ಯಾನ್ ಜೋಡಣೆಗೆ ಕೊನೆಯ ದಿನ: ಜೂನ್ 30 ರವರೆಗೆ ವಿಸ್ತರಣೆ
ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯಾವಕಾಶ ನೀಡುವ ಸಲುವಾಗಿ, ಪ್ಯಾನ್ ಸಂಖ್ಯೆ ಮತ್ತು ಆಧಾರ್ ನ್ನು ಲಿಂಕ್ ಮಾಡುವ ದಿನಾಂಕವನ್ನು 2023ರ ಜೂನ್ 30 ರವರೆಗೆ ವಿಸ್ತರಣೆ ಮಾಡಲಾಗಿದೆ.

ನವದೆಹಲಿ: ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯಾವಕಾಶ ನೀಡುವ ಸಲುವಾಗಿ, ಪ್ಯಾನ್ ಸಂಖ್ಯೆ ಮತ್ತು ಆಧಾರ್ ಲಿಂಕ್ ಮಾಡುವ ದಿನಾಂಕವನ್ನು 2023ರ ಜೂನ್ 30 ರವರೆಗೆ ವಿಸ್ತರಣೆ ಮಾಡಲಾಗಿದೆ, ಆ ಮೂಲಕ ವ್ಯಕ್ತಿಗಳು ಯಾವುದೇ ಪರಿಣಾಮಗಳನ್ನು ಎದುರಿಸದೆ ತಮ್ಮ ಆಧಾರ್ ಅನ್ನು ಪ್ಯಾನ್-ಆಧಾರ್ ಲಿಂಕ್ ಮಾಡಲು ನಿಗದಿತ ಪ್ರಾಧಿಕಾರಕ್ಕೆ ತಿಳಿಸಬಹುದು.
2023ರ ಜುಲೈ 1 ರಿಂದ, ಲಿಂಕ್ ಮಾಡದ ಪಾನ್ ಸಂಖ್ಯೆಗೆ ಪರಿಣಾಮ ಎದುರಿಸಬೇಕಾಗಿದ್ದು ಅವು ನಿಷ್ಕ್ರಿಯಗೊಳ್ಳುತ್ತವೆ. ಒಂದು ಸಾವಿರ ರೂಪಾಯಿ ಶುಲ್ಕವನ್ನು ಪಾವತಿಸಿದ ನಂತರ ನಿಗದಿತ ಪ್ರಾಧಿಕಾರಕ್ಕೆ ಆಧಾರ್ ಗೆ ಮಾಹಿತಿ ನೀಡಿದಾಗ, 30 ದಿನಗಳಲ್ಲಿ ಪ್ಯಾನ್ ನ್ನು ಮತ್ತೆ ಕಾರ್ಯಗತಗೊಳಿಸಬಹುದು ಎಂದು ಆದಾಯ ತೆರಿಗೆ ಇಲಾಖೆ ಪ್ರಕಟಣೆ ತಿಳಿಸಿದೆ.
ಹಿಂದಿನ ಗಡುವು ಮಾರ್ಚ್ 31 ರಂದು ಎಂದು ತಿಳಿಸಲಾಗಿತ್ತು. ಆಧಾರ್-ಪ್ಯಾನ್ ಲಿಂಕ್ ಮಾಡಲು ವ್ಯಕ್ತಿಗಳು ತಮ್ಮ ಆಧಾರ್ ನ್ನು ಯಾವುದೇ ಪರಿಣಾಮಗಳನ್ನು ಎದುರಿಸದೆ ನಿಗದಿತ ಪ್ರಾಧಿಕಾರಕ್ಕೆ ಜೂನ್ 30ರ ರವರೆಗೆ ತಿಳಿಸಬಹುದು ಎಂದು ಅದು ಹೇಳಿದೆ.
ಆದಾಯ ತೆರಿಗೆ ಕಾಯಿದೆ, 1961 ರ ನಿಬಂಧನೆಗಳ ಅಡಿಯಲ್ಲಿ, ಜುಲೈ 1, 2017 ರಂತೆ PAN ನ್ನು ನಿಗದಿಪಡಿಸಿದ ಮತ್ತು ಆಧಾರ್ ಸಂಖ್ಯೆಯನ್ನು ಪಡೆಯಲು ಅರ್ಹರಾಗಿರುವ ಪ್ರತಿಯೊಬ್ಬ ವ್ಯಕ್ತಿಯು ಮಾರ್ಚ್ 31 ರಂದು ಅಥವಾ ಮೊದಲು ನಿಗದಿತ ಪ್ರಾಧಿಕಾರಕ್ಕೆ ತನ್ನ ಆಧಾರ್ ನ್ನು ತಿಳಿಸಬೇಕಾಗುತ್ತದೆ.
ಜುಲೈ 1, 2023 ರಿಂದ, ಅಗತ್ಯವಿರುವಂತೆ ತಮ್ಮ ಆಧಾರ್ ನ್ನು ತಿಳಿಸಲು ವಿಫಲರಾದ ತೆರಿಗೆದಾರರ PAN ನಿಷ್ಕ್ರಿಯಗೊಳ್ಳುತ್ತದೆ. ಇಲ್ಲಿಯವರೆಗೆ 51 ಕೋಟಿಗೂ ಹೆಚ್ಚು ಪ್ಯಾನ್‌ಗಳನ್ನು ಈಗಾಗಲೇ ಆಧಾರ್‌ನೊಂದಿಗೆ ಲಿಂಕ್ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


