ಏಪ್ರಿಲ್ 30 ರವರೆಗೆ ಟೆಲ್ ಅವಿವ್‌ಗೆ ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ
ಏರ್ ಇಂಡಿಯಾ ತನ್ನ ಗ್ರಾಹಕರು ಮತ್ತು ಸಿಬ್ಬಂದಿಯ ಸುರಕ್ಷತೆ ದೃಷ್ಟಿಯಿಂದ ಟೆಲ್ ಅವಿವ್‌ಗೆ ತೆರಳುವ ಮತ್ತು ಅಲ್ಲಿಂದ ಬರುವ ವಿಮಾನಗಳ ಸೇವೆಯನ್ನು ಏಪ್ರಿಲ್ 30 ರವರೆಗೆ ಸ್ಥಗಿತಗೊಳಿಸುವುದಾಗಿ ಶುಕ್ರವಾರ ಘೋಷಿಸಿದೆ.

ನವದೆಹಲಿ: ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಏರ್ ಇಂಡಿಯಾ ತನ್ನ ಗ್ರಾಹಕರು ಮತ್ತು ಸಿಬ್ಬಂದಿಯ ಸುರಕ್ಷತೆ ದೃಷ್ಟಿಯಿಂದ ಟೆಲ್ ಅವಿವ್‌ಗೆ ತೆರಳುವ ಮತ್ತು ಅಲ್ಲಿಂದ ಬರುವ ವಿಮಾನಗಳ ಸೇವೆಯನ್ನು ಏಪ್ರಿಲ್ 30 ರವರೆಗೆ ಸ್ಥಗಿತಗೊಳಿಸುವುದಾಗಿ ಶುಕ್ರವಾರ ಘೋಷಿಸಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಏರ್ ಇಂಡಿಯಾ, "ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಟೆಲ್ ಅವಿವ್‌ಗೆ ಮತ್ತು ಅಲ್ಲಿಂದ ಹೊರಡುವ ನಮ್ಮ ವಿಮಾನಗಳನ್ನು ಏಪ್ರಿಲ್ 30, 2024 ರವರೆಗೆ ಸ್ಥಗಿತಗೊಳಿಸಲಾಗುತ್ತದೆ" ಎಂದು ಹೇಳಿದೆ.
ಬುಕಿಂಗ್‌ಗಳನ್ನು ದೃಢೀಕರಿಸಿದ ತನ್ನ ಪ್ರಯಾಣಿಕರಿಗೆ, ದಿನಾಂಕ ಮರುಹೊಂದಿಸುವಿಕೆ ಮತ್ತು ರದ್ದತಿ ಶುಲ್ಕಗಳನ್ನು ಒಂದು ಬಾರಿ ಮನ್ನಾ ಮಾಡುವುದಾಗಿ ಏರ್ ಇಂಡಿಯಾ ತಿಳಿಸಿದೆ.
"ಏರ್ ಇಂಡಿಯಾದಲ್ಲಿ, ನಮ್ಮ ಗ್ರಾಹಕರು ಮತ್ತು ಸಿಬ್ಬಂದಿಯ ಸುರಕ್ಷತೆಯು ಮೊದಲ ಆದ್ಯತೆಯಾಗಿದೆ ಎಂದು ನಾವು ಪುನರುಚ್ಚರಿಸಲು ಬಯಸುತ್ತೇವೆ. ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು ನಮ್ಮ 24/7 ಸಂಪರ್ಕ ಕೇಂದ್ರಕ್ಕೆ 011-69329333 / 011-69329999 ಗೆ ಕರೆ ಮಾಡಿ ಅಥವಾ ನಮ್ಮ ವೆಬ್‌ಸೈಟ್ http:// ಗೆ ಭೇಟಿ ನೀಡಿ airindia.com," ಎಂದು ಏರ್ ಇಂಡಿಯಾ ಪೋಸ್ಟ್ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



