ವಾಣಿಜ್ಯ

Indian Stock Market: ಮಿಶ್ರವಹಿವಾಟು, Sensex ಏರಿಕೆ, Nifty ರೆಡ್‌ ಮಾರ್ಕ್‌

ಇಂದಿನ ವಹಿವಾಟಿನಲ್ಲಿ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಶೇ.0.0019ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಶೇ.0.036ರಷ್ಟು ಕುಸಿತ ಕಂಡಿದೆ.

Indian Stock Market: ಮಿಶ್ರವಹಿವಾಟು, Sensex ಏರಿಕೆ, Nifty ರೆಡ್‌ ಮಾರ್ಕ್‌
ಭಾರತೀಯ ಷೇರು ಮಾರುಕಟ್ಟೆ
Published On :

ಮುಂಬೈ: ಮಂಗಳವಾರ ಭಾರತೀಯ ಷೇರುಮಾರುಕಟ್ಟೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸೆನ್ಸೆಕ್ಸ್ ಅಲ್ಪ ಏರಿಕೆ ಮತ್ತು ನಿಫ್ಟಿ ಅಲ್ಪ ಪ್ರಮಾಣದ ಇಳಿಕೆಯಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿದೆ.

ಇಂದಿನ ವಹಿವಾಟಿನಲ್ಲಿ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಶೇ.0.0019ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಶೇ.0.036ರಷ್ಟು ಕುಸಿತ ಕಂಡಿದೆ.

ಸೆನ್ಸೆಕ್ಸ್ ಇಂದು ಕೇವಲ 1.59 ಅಂಕಗಳ ಏರಿಕೆಯೊಂದಿಗೆ 81,510.05 ಅಂಕಗಳಿಗೆ ಏರಿದ್ದರೆ, ನಿಫ್ಟಿ 8.95 ಅಂಕಗಳ ಅಲ್ಪ ಕುಸಿತದೊಂದಿಗೆ 24,610.05 ಅಂಕಗಳಿಗೆ ಕುಸಿತವಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.

ಇಂದಿನ ವಹಿವಾಟಿನಲ್ಲಿ ಐಟಿ ವಲಯ ಮತ್ತು ಬ್ಯಾಂಕಿಂಗ್ ಷೇರುಗಳು ಹೆಚ್ಟಿನ ಲಾಭಾಂಶ ಕಂಡಿದ್ದು, ವೈಯಕ್ತಿಕ ಷೇರು ವಹಿವಾಟು ಪ್ರಮಾಣದಲ್ಲಿ ಹೆಚ್ಚಳವಾಗಿದೆ ಎಂದು ಹೇಳಲಾಗಿದೆ.

ಯಾರಿಗೆ ಲಾಭ? ಯಾರಿಗೆ ನಷ್ಟ?

ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಬಜಾಜ್ ಫಿನ್‌ಸರ್ವ್‌, ಎಚ್‌ಸಿಎಲ್ ಟೆಕ್, ಇನ್ಫೋಸಿಸ್, ಎಸ್‌ಬಿಐ, ಬಜಾಜ್ ಫೈನಾನ್ಸ್, ICICI ಬ್ಯಾಂಕ್ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದ್ದು, ಭಾರ್ತಿ ಏರ್‌ಟೆಲ್‌, ಅದಾನಿ ಪೋರ್ಟ್, ಎಕ್ಸಿಸ್ ಬ್ಯಾಂಕ್‌, ಟೆಕ್ ಮಹೀಂದ್ರಾ, RIL ಸಂಸ್ಥೆಯ ಷೇರುಗಳು ನಷ್ಟ ಅನುಭವಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.