ಮೂರನೇ ತ್ರೈಮಾಸಿಕದಲ್ಲಿ ನಿರೀಕ್ಷೆ ಮೀರಿ GDP ವೃದ್ಧಿ; ಶೇ. 8.4 ರಷ್ಟು ಬೆಳವಣಿಗೆ ದಾಖಲು
2023-24ನೇ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕ ಬೆಳವಣಿಗೆ(ಜಿಡಿಪಿ) ಎಲ್ಲರ ನಿರೀಕ್ಷೆಯನ್ನು ಮೀರಿ ಶೇ. 8.4 ರಷ್ಟು ಬೆಳವಣಿಗೆ ಸಾಧಿಸಿದೆ.

ನವದೆಹಲಿ: 2023-24ನೇ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕ ಬೆಳವಣಿಗೆ(ಜಿಡಿಪಿ) ಎಲ್ಲರ ನಿರೀಕ್ಷೆಯನ್ನು ಮೀರಿ ಶೇ. 8.4 ರಷ್ಟು ಬೆಳವಣಿಗೆ ಸಾಧಿಸಿದೆ.
ಕೇಂದ್ರ ಸರ್ಕಾರ ಗುರುವಾರ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ, ಅಕ್ಟೋಬರ್ನಿಂದ ಡಿಸೆಂಬರ್ವರೆಗಿನ ತ್ರೈಮಾಸಿಕ ಅವಧಿಯಲ್ಲಿ ದೇಶದ ಜಿಡಿಪಿ ಶೇ. 8.4ರಷ್ಟು ಬೆಳೆದಿದೆ.
ನಿನ್ನೆಯವರೆಗೂ ಹಲವು ಆರ್ಥಿಕ ತಜ್ಞರು ಈ ಕ್ವಾರ್ಟರ್ನಲ್ಲಿ ಶೇ. 6ರಿಂದ 7ರಷ್ಟು ಜಿಡಿಪಿ ಬೆಳವಣಿಗೆ ಸಾಧಿಸಿಬಹುದು ಎಂದು ಅಂದಾಜು ಮಾಡಿದ್ದರು. ಆರ್ಬಿಐ ಮಾಡಿದ ಅಂದಾಜು ಕೂಡ ಶೇ. 7ರ ಆಸುಪಾಸು ಇತ್ತು. ಆದರೆ ಭಾರತದ ನೈಜ ಜಿಡಿಪಿ ವೃದ್ಧಿ ಈಗ ಎಲ್ಲರನ್ನೂ ಅಚ್ಚರಿಗೊಳಿಸುವಷ್ಟು ಹೆಚ್ಚಿನ ಮಟ್ಟದಲ್ಲಿ ಇದೆ.
ಈ ಹಣಕಾಸು ವರ್ಷದ ಮೊದಲ ಕ್ವಾರ್ಟರ್ ಆದ ಏಪ್ರಿಲ್ನಿಂದ ಜೂನ್ವರೆಗಿನ ಅವಧಿಯಲ್ಲಿ ಜಿಡಿಪಿ ಶೇ. 7.8ರಷ್ಟು ಬೆಳೆದಿತ್ತು. ಎರಡನೇ ಕ್ವಾರ್ಟರ್ನಲ್ಲಿ ಶೇ. 7.6 ರಷ್ಟು ಬೆಳೆದಿದೆ. ಮೂರನೇ ಕ್ವಾರ್ಟರ್ ಇನ್ನೂ ಹೆಚ್ಚಿನ ಅಚ್ಚರಿ ಮೂಡಿಸಿದೆ. ಒಟ್ಟಾರೆ ಈ ಹಣಕಾಸು ವರ್ಷದ ಮೊದಲ ಮೂರು ಕ್ವಾರ್ಟರ್ ಅವಧಿಯಲ್ಲಿ ಜಿಡಿಪಿ ಬೆಳವಣಿಗೆ ಸರಾಸರಿಯಾಗಿ ಶೇ. 7.93ರಷ್ಟು ಇದೆ. ಅಂದರೆ ಶೇ. 8ಕ್ಕೆ ಸಮೀಪ ಇದೆ.
2023-24ರ ಮೂರನೇ ಕ್ವಾರ್ಟರ್ನಲ್ಲಿ ಜಿಡಿಪಿ 43.72 ಲಕ್ಷ ಕೋಟಿ ರೂ ಇದೆ. ಹಿಂದಿನ ವರ್ಷದ ಇದೇ ಕ್ವಾರ್ಟರ್ನಲ್ಲಿ 40.35 ಲಕ್ಷ ಕೋಟಿ ರೂ ಇತ್ತು. ಈ ಬಾರಿ ಶೇ. 8.4ರಷ್ಟು ಹೆಚ್ಚಾಗಿದೆ ಎಂದು ಸರ್ಕಾರ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



