ವಿಮಾನದಲ್ಲಿ ಪ್ರಯಾಣಿಕರಿಗೆ ಅಸುರಕ್ಷಿತ ಆಹಾರ ಪೂರೈಕೆ: ಇಂಡಿಗೋಗೆ ನೋಟಿಸ್
ಪ್ರಯಾಣಿಕರೊಬ್ಬರಿಗೆ ಅಸುರಕ್ಷಿತ ಆಹಾರವನ್ನು ನೀಡಿದ್ದಕ್ಕಾಗಿ ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ಶೋಕಾಸ್ ನೋಟಿಸ್ ನೀಡಿದೆ.

ನವದೆಹಲಿ: ವಿಮಾನದಲ್ಲಿ ಪ್ರಯಾಣಿಕರೊಬ್ಬರಿಗೆ ಅಸುರಕ್ಷಿತ ಆಹಾರವನ್ನು ನೀಡಿದ್ದಕ್ಕಾಗಿ ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ಶೋಕಾಸ್ ನೋಟಿಸ್ ನೀಡಿದೆ.
ವಿಮಾನದಲ್ಲಿ ನೀಡಲಾದ ಸ್ಯಾಂಡ್‌ವಿಚ್‌ನಲ್ಲಿ ಹುಳು ಕಂಡುಬಂದ ಕೆಲವು ದಿನಗಳ ನಂತರ ಪ್ರಾಧಿಕಾರ ಈ ಕ್ರಮ ಕೈಗೊಂಡಿದೆ. ಬುಧವಾರ ಏರ್‌ಲೈನ್ ಶೋಕಾಸ್ ನೋಟಿಸ್ ಸ್ವೀಕರಿಸಿದ್ದು, ಪ್ರೋಟೋಕಾಲ್ ಪ್ರಕಾರ ಪ್ರತಿಕ್ರಿಯೆ ನೀಡುವುದಾಗಿ ಹೇಳಿದೆ.
ಡಿಸೆಂಬರ್ 29 ರಂದು ದೆಹಲಿಯಿಂದ ಮುಂಬೈಗೆ ತೆರಳುತ್ತಿದ್ದ 6E 6107 ವಿಮಾನದಲ್ಲಿ ಈ ಘಟನೆ ನಡೆದಿತ್ತು. ಪ್ರಯಾಣಿಕರು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡ ನಂತರ ವಿಮಾನಯಾನ ಸಂಸ್ಥೆ ಕ್ಷಮೆಯಾಚಿಸಿದೆ.
ವಿಮಾನದಲ್ಲಿ ಪ್ರಯಾಣಿಕರಿಗೆ ಅಸುರಕ್ಷಿತ ಆಹಾರ ನೀಡುವುದಕ್ಕಾಗಿ ಆಹಾರ ಸುರಕ್ಷತೆ ಮತ್ತು ಮಾನದಂಡಗಳ (ಎಫ್‌ಎಸ್‌ಎಸ್) ಕಾಯ್ದೆಯ ಪ್ರಕಾರ ಪರವಾನಗಿಯನ್ನು ಅಮಾನತುಗೊಳಿಸಲು ಅಥವಾ ರದ್ದುಗೊಳಿಸಲು ಏಕೆ ಪರಿಗಣಿಸಬಾರದು ಎಂದು ಜನವರಿ 2 ರಂದು ನೀಡಲಾಗಿರುವ ನೋಟಿಸ್ ನಲ್ಲಿ ಹೇಳಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಲು ವಿಮಾನಯಾನ ಸಂಸ್ಥೆಗೆ ಏಳು ದಿನಗಳ ಕಾಲಾವಕಾಶ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


