ಗುಡ್ ನ್ಯೂಸ್: ಸತತ 4ನೇ ಬಾರಿಗೆ ವಾಣಿಜ್ಯ LPG ಸಿಲಿಂಡರ್ ಬೆಲೆ ಇಳಿಕೆ
ಜುಲೈ ಮೊದಲ ದಿನವೇ ದೇಶದ ಜನತೆಗೆ ಗುಡ್‌ನ್ಯೂಸ್ ಸಿಕ್ಕಿದೆ, ಸರ್ಕಾರಿ ತೈಲ ಮತ್ತು ಅನಿಲ ಮಾರುಕಟ್ಟೆ ಕಂಪನಿಗಳು ಸತತ ನಾಲ್ಕನೇ ಬಾರಿಗೆ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಸಿವೆ.

ಬೆಂಗಳೂರು: ಜುಲೈ ಮೊದಲ ದಿನವೇ ದೇಶದ ಜನತೆಗೆ ಗುಡ್‌ನ್ಯೂಸ್ ಸಿಕ್ಕಿದೆ, ಸರ್ಕಾರಿ ತೈಲ ಮತ್ತು ಅನಿಲ ಮಾರುಕಟ್ಟೆ ಕಂಪನಿಗಳು ಸತತ ನಾಲ್ಕನೇ ಬಾರಿಗೆ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಸಿವೆ.
ದೇಶದ ಅತಿದೊಡ್ಡ ತೈಲ ಮಾರುಕಟ್ಟೆ ಕಂಪನಯಾದ ಇಂಡಿಯನ್ ಆಯಿಲ್ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಸ್ವಲ್ಪ ಕಡಿಮೆ ಮಾಡಿದೆ. ದೇಶದ ಮೆಟ್ರೋ ನಗರಗಳಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ರೂ.31 ಇಳಿಕೆಯಾಗಿದೆ. ಹೊಸ ಬೆಲೆ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಆದರೆ, 14.2 ಕೆಜಿ ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆ ಬದಲಾಗಿಲ್ಲ.
ಜುಲೈ 1 ರಿಂದ ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ 1,756 ರೂಪಾಯಿಗೆ ಇಳಿಯಲಿದೆ. ಜೂನ್‌ನಲ್ಲಿ ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1,787 ರೂಪಾಯಿ ಇತ್ತು. ಇದೀಗ 31 ರೂಪಾಯಿ ಇಳಿಕೆಯಾಗಿದೆ.
ದೆಹಲಿಯಲ್ಲಿ ಪ್ರತಿ ಸಿಲಿಂಡರ್ ಬೆಲೆ 1,646 ರೂಪಾಯಿ ಇದೆ. ಅಂದರೆ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 30 ರೂಪಾಯಿ ಇಳಿಕೆಯಾಗಿದೆ. ಮುಂಬೈ ಮತ್ತು ಚೆನ್ನೈನಲ್ಲಿ 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಕ್ರಮವಾಗಿ ರೂ.1,598 ಮತ್ತು ರೂ.1,809.5ಕ್ಕೆ ಇಳಿದಿದೆ. ಸಬ್ಸಿಡಿ ರಹಿತ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಇನ್ನು ನಮ್ಮ ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಸಿಲಿಂಡರ್ ಬೆಲೆ ನೋಡುವುದಾದರೆ, 14.5 ಕೆಜಿಯ ಡೊಮೆಸ್ಟಿಕ್ ಸಿಲಿಂಡರ್ ಬೆಲೆ 905.5 ರೂಪಾಯಿ ಇದೆ. ವಾಣಿಜ್ಯ ಬಳಕೆಯ 14.5 ಕೆಜಿಯ ಸಿಲಿಂಡರ್ ಬೆಲೆ 1813 ರೂಪಾಯಿ ಇದೆ ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


