ವಾಣಿಜ್ಯ

2000 ರೂ. ನೋಟು: ಸಾರ್ವಜನಿಕರ ಬಳಿಯೇ ಇದೆ 7,581 ಕೋಟಿ!

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2000 ಕೋಟಿ ರೂಪಾಯಿ ಮುಖಬೆಲೆಯ ನೋಟುಗಳ ಬಗ್ಗೆ ಇತ್ತೀಚಿನ ಮಾಹಿತಿಯನ್ನು ಹಂಚಿಕೊಂಡಿದೆ.

2000 ರೂ. ನೋಟು: ಸಾರ್ವಜನಿಕರ ಬಳಿಯೇ ಇದೆ 7,581 ಕೋಟಿ!
2000 ರೂ ಮುಖಬೆಲೆಯ ನೋಟುಗಳು — online desk
Published On :

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2000 ಕೋಟಿ ರೂಪಾಯಿ ಮುಖಬೆಲೆಯ ನೋಟುಗಳ ಬಗ್ಗೆ ಇತ್ತೀಚಿನ ಮಾಹಿತಿಯನ್ನು ಹಂಚಿಕೊಂಡಿದೆ.

2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಆರ್ ಬಿಐ (RBI) ಹಿಂಪಡೆದಿದ್ದು, ಸಾರ್ವಜನಿಕರ ಕೈಲಿದ್ದ ನೋಟುಗಳ ಪೈಕಿ ಈ ವರೆಗೂ ಶೇ.97.87 ರಷ್ಟು ನೋಟುಗಳು ಮರಳಿ ಆರ್ ಬಿಐ ವ್ಯಾಪ್ತಿಗೆ ಬಂದಿದೆ. 7,581 ಕೋಟಿ ರೂಪಾಯಿ ಮೌಲ್ಯದ ಮುಖಬೆಲೆಯ ನೋಟುಗಳು ಮಾತ್ರವೇ ಸಾರ್ವಜನಿಕರ ಬಳಿ ಇದೆ ಎಂದು ಆರ್ ಬಿಐ ತಿಳಿಸಿದೆ.

2023 ರ ಮೇ.19 ರಂದು ಆರ್ ಬಿಐ 2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯುವುದಾಗಿ ಹೇಳಿತ್ತು. ಚಲಾವಣೆಯಲ್ಲಿರುವ 2000 ರೂ.ಗಳ ನೋಟುಗಳ ಒಟ್ಟು ಮೌಲ್ಯವು 2023 ರ ಮೇ 19 ರಂದು ವ್ಯವಹಾರದ ಮುಕ್ತಾಯದ ವೇಳೆಗೆ 3.56 ಲಕ್ಷ ಕೋಟಿ ರೂಪಾಯಿಗಳಷ್ಟಿತ್ತು, ಜೂನ್ 28, 2024 ರಂದು ವ್ಯವಹಾರದ ಮುಕ್ತಾಯದ ವೇಳೆಗೆ 7,581 ಕೋಟಿ ರೂಪಾಯಿಗಳಿಗೆ ಇಳಿಕೆಯಾಗಿದೆ.

ಠೇವಣಿ ಮತ್ತು/ಅಥವಾ ರೂ 2000 ಬ್ಯಾಂಕ್ ನೋಟುಗಳ ವಿನಿಮಯದ ಸೌಲಭ್ಯವು ಅಕ್ಟೋಬರ್ 7, 2023 ರವರೆಗೆ ದೇಶದ ಎಲ್ಲಾ ಬ್ಯಾಂಕ್ ಶಾಖೆಗಳಲ್ಲಿ ಲಭ್ಯವಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.