ವಾಣಿಜ್ಯ

ಅಶಿಸ್ತಿನ ವರ್ತನೆ: ಈ ವರ್ಷ 51 ಪ್ರಯಾಣಿಕರನ್ನು ನೋ-ಫ್ಲೈ ಪಟ್ಟಿಗೆ ಸೇರಿಸಿದ ಏರ್‌ಲೈನ್ಸ್

ಕಳೆದ ಐದು ವರ್ಷಗಳಲ್ಲಿ ಒಟ್ಟು 300 ಪ್ರಯಾಣಿಕರನ್ನು ನೋ-ಫ್ಲೈ ಲಿಸ್ಟ್‌ನಲ್ಲಿ ಇರಿಸಲಾಗಿದೆ.

ಅಶಿಸ್ತಿನ ವರ್ತನೆ: ಈ ವರ್ಷ 51 ಪ್ರಯಾಣಿಕರನ್ನು ನೋ-ಫ್ಲೈ ಪಟ್ಟಿಗೆ ಸೇರಿಸಿದ ಏರ್‌ಲೈನ್ಸ್
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಈ ವರ್ಷ ಜುಲೈ 1 ರವರೆಗೆ ಅಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ 51 ಪ್ರಯಾಣಿಕರನ್ನು ವಿಮಾನಯಾನ ಸಂಸ್ಥೆಗಳ ನೋ-ಫ್ಲೈ ಪಟ್ಟಿಗೆ ಸೇರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಸೋಮವಾರ ತಿಳಿಸಿದೆ.

ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್​​(DGCA) ಅಶಿಸ್ತಿನ ವರ್ತನೆ ತೋರಿದ ಪ್ರಯಾಣಿಕರನ್ನು ನಿರ್ವಹಿಸಲು ನಿಯಮಾವಳಿಗಳನ್ನು ಹೊಂದಿದೆ. ಆ ಪ್ರಕಾರ ಅಶಿಸ್ತಿನ ಪ್ರಯಾಣಿಕರನ್ನು ನೋ-ಫ್ಲೈ ಪಟ್ಟಿಗೆ ಸೇರಿಸಲಾಗುತ್ತದೆ ಎಂದು ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಅವರು ರಾಜ್ಯಸಭೆಗೆ ಮಾಹಿತಿ ನೀಡಿದರು.

ಕಳೆದ ಐದು ವರ್ಷಗಳಲ್ಲಿ ಒಟ್ಟು 300 ಪ್ರಯಾಣಿಕರನ್ನು ನೋ-ಫ್ಲೈ ಲಿಸ್ಟ್‌ನಲ್ಲಿ ಇರಿಸಲಾಗಿದೆ. ಈ ವರ್ಷ ಜುಲೈ 1 ರವರೆಗೆ 51 ಜನರನ್ನು ಈ ಪಟ್ಟಿಗೆ ಸೇರಿಸಲಾಗಿದೆ. 2023 ರಲ್ಲಿ, 110 ಪ್ರಯಾಣಿಕರನ್ನು ನೋ-ಫ್ಲೈ ಪಟ್ಟಿಗೆ ಸೇರಿಸಲಾಗಿತ್ತು ಮತ್ತು 2022 ಹಾಗೂ 2021 ರಲ್ಲಿ ಕ್ರಮವಾಗಿ 63 ಮತ್ತು 66 ಪ್ರಯಾಣಿಕರನ್ನು ನೋ-ಫ್ಲೈ ಪಟ್ಟಿಗೆ ಸೇರಿಸಲಾಗಿದೆ ಎಂದು ಮಾಹಿತಿ ನೀಡಿದರು.

ವಿಮಾನದ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ವಿಮಾನದಲ್ಲಿ ಕಾನೂನುಬಾಹಿರ/ವಿಚ್ಛಿದ್ರಕಾರಕ ನಡವಳಿಕೆಯನ್ನು ನಿರ್ವಹಿಸಲು ಮತ್ತು ವಿಮಾನದ / ವ್ಯಕ್ತಿಗಳ/ ಆಸ್ತಿ / ಉತ್ತಮ ಸುವ್ಯವಸ್ಥೆ ಮತ್ತು ಶಿಸ್ತು ಖಚಿತಪಡಿಸಿಕೊಳ್ಳಲು ಸಾಕಷ್ಟು ನಿಯಂತ್ರಣ ಚೌಕಟ್ಟುಗಳು ಜಾರಿಯಲ್ಲಿವೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.