ಪುನರ್ರಚನೆಯ ಭಾಗವಾಗಿ 3,500 ನೌಕರರನ್ನು ವಜಾಗೊಳಿಸಿದ Paytm
Paytm ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸುತ್ತಿದೆ ಮತ್ತು ಕೆಲಸ ಕಳೆದುಕೊಂಡ ನೌಕರರು ಬೇರೆ ಕಡೆ ಕೆಲಸ ಪಡೆಯಲು ಔಟ್‌ಪ್ಲೇಸ್‌ಮೆಂಟ್ ಬೆಂಬಲವನ್ನು ನೀಡುತ್ತಿದೆ ಎಂದು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.

ನವದೆಹಲಿ: Paytm ಬ್ರಾಂಡ್‌ನ ಮಾಲೀಕರಾಗಿರುವ ಫಿನ್‌ಟೆಕ್ ಸಂಸ್ಥೆ One97 ಕಮ್ಯುನಿಕೇಷನ್ಸ್ ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸುತ್ತಿದೆ ಮತ್ತು ಕೆಲಸ ಕಳೆದುಕೊಂಡ ನೌಕರರ ಬೇರೆ ಕಡೆ ಕೆಲಸ ಪಡೆಯಲು ಔಟ್‌ಪ್ಲೇಸ್‌ಮೆಂಟ್ ಬೆಂಬಲವನ್ನು ನೀಡುತ್ತಿದೆ ಎಂದು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.
ಮಾರ್ಚ್ 2024ರ ತ್ರೈಮಾಸಿಕದಲ್ಲಿ Paytmನ ಸೇಲ್ಸ್ ವಿಭಾಗದ ಸುಮಾರು 3,500 ಸಿಬ್ಬಂದಿಯನ್ನು ಕೆಲಸದಿಂದ ತೆಗೆದು ಹಾಕಿದೆ. ಪೇಟಿಎಂನಲ್ಲಿ 40,000ಕ್ಕೂ ಹೆಚ್ಚು ಉದ್ಯೋಗಿಗಳಿದ್ದು, ಈಗ 3,500 ಮಂದಿಯ ಲೇ ಆಫ್ ನಂತರ ಸಿಬ್ಬಂದಿ ಸಂಖ್ಯೆ 36,521 ಕ್ಕೆ ಇಳಿದಿದೆ.
ಭಾರತೀಯ ರಿಸರ್ವ್ ಬ್ಯಾಂಕ್, ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ಗೆ ನಿರ್ಬಂಧ ವಿಧಿಸಿದ್ದು, ಒನ್97 ಕಮ್ಯೂನಿಕೇಶನ್ಸ್ನ ವಿವಿಧ ಬಿಸಿನೆಸ್ಗಳಿಗೆ ಹೊಡೆತ ಬಿದ್ದಂತಾಗಿದೆ. ನಷ್ಟದ ಪ್ರಮಾಣವೂ ಹೆಚ್ಚುತ್ತಿದೆ. ಜನವರಿಯಿಂದ ಮಾರ್ಚ್ವರೆಗಿನ ಕ್ವಾರ್ಟರ್ನಲ್ಲಿ ಪೇಟಿಎಂಗೆ ಆದ ನಷ್ಟ 550 ಕೋಟಿ ರೂ. ಈ ನಷ್ಟವನ್ನು ಕಡಿಮೆ ಮಾಡಬೇಕೆಂದರೆ ಸಂಸ್ಥೆಯ ಸಿಬ್ಬಂದಿ ವರ್ಗದ ಮರುರಚನೆ ಮಾಡಬೇಕಾಗುತ್ತದೆ. ಉದ್ಯೋಗಿಗಳ ಸಂಖ್ಯೆ ಮೊಟಕುಗೊಳಿಸುವುದು ಅನಿವಾರ್ಯವಾಗಿದೆ.
ಕಂಪನಿಯ ಮಾನವ ಸಂಪನ್ಮೂಲ ತಂಡಗಳು ಪ್ರಸ್ತುತ ನೇಮಕ ಮಾಡುತ್ತಿರುವ 30ಕ್ಕೂ ಹೆಚ್ಚು ಕಂಪನಿಗಳೊಂದಿಗೆ ಸಕ್ರಿಯವಾಗಿ ಸಹಕರಿಸುತ್ತಿವೆ ಮತ್ತು ಉದ್ಯೋಗಿಗಳಿಗೆ ಬೇರೆಡೆ ಕೆಲಸ ಕೊಡಿಸಲು ಸಹಾಯ ಮಾಡುತ್ತಿವೆ ಎಂದು ಪಿಟಿಐ ವರದಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



