ಚುನಾವಣಾ ಬಾಂಡ್ ನಿಷೇಧ: ಮಾಹಿತಿ ನೀಡಲು ಗಡುವು ವಿಸ್ತರಿಸುವಂತೆ ಕೋರಿ ಸುಪ್ರೀಂ ಮೆಟ್ಟಿಲೇರಿದ ಎಸ್‌ಬಿಐ
ಚುನಾವಣಾ ಬಾಂಡ್ ಗಳನ್ನು ನಿಷೇಧಿಸಿರುವ ಸುಪ್ರೀಂ ಕೋರ್ಟ್, ಮಾರ್ಚ್ 6 ರೊಳಗೆ ರಾಜಕೀಯ ಪಕ್ಷಗಳು ನಗದೀಕರಿಸಿದ ಪ್ರತಿ ಚುನಾವಣಾ ಬಾಂಡ್‌ಗಳ ವಿವರಗಳ ನೀಡುವಂತೆ ಎಸ್ ಬಿಐಗೆ ಸೂಚಿಸಿದೆ.

ನವದೆಹಲಿ: ಚುನಾವಣಾ ಬಾಂಡ್ ಗಳನ್ನು ನಿಷೇಧಿಸಿರುವ ಸುಪ್ರೀಂ ಕೋರ್ಟ್, ಮಾರ್ಚ್ 6 ರೊಳಗೆ ರಾಜಕೀಯ ಪಕ್ಷಗಳು ನಗದೀಕರಿಸಿದ ಪ್ರತಿ ಚುನಾವಣಾ ಬಾಂಡ್‌ಗಳ ವಿವರಗಳ ನೀಡುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ)ಗೆ ಸೂಚಿಸಿದೆ. ಆದರೆ ವಿವರ ನೀಡಲು ಜೂನ್ 30 ರವರೆಗೆ ಗಡುವು ವಿಸ್ತರಿಸಬೇಕು ಎಂದು ಕೋರಿ ಎಸ್ ಬಿಐ ಸೋಮವಾರ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದೆ.
ಉನ್ನತ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) "ಪ್ರತಿ ಸಿಲೋ" ದಿಂದ ಮಾಹಿತಿಯನ್ನು ಮರುಪಡೆಯುವುದು ಮತ್ತು ಒಂದು ಸಿಲೋದ ಮಾಹಿತಿಯನ್ನು ಇನ್ನೊಂದಕ್ಕೆ ಹೊಂದಿಸುವ ಪ್ರಕ್ರಿಯೆಗೆ ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ಪ್ರತಿಪಾದಿಸಿದೆ.
ದಾನಿಗಳ ಗುರುತನ್ನು ಅನಾಮಧೇಯವಾಗಿ ಇಡುವುದನ್ನು ಖಚಿತಪಡಿಸಿಕೊಳ್ಳಲು ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಚುನಾವಣಾ ಬಾಂಡ್‌ಗಳನ್ನು "ಡಿಕೋಡಿಂಗ್" ಮಾಡುವುದು ಮತ್ತು ನೀಡಿದ ದೇಣಿಗೆಗಳಿಗೆ ದಾನಿಗಳನ್ನು ಹೊಂದಿಸುವುದು ಸಂಕೀರ್ಣ ಪ್ರಕ್ರಿಯೆಯಾಗಿದೆ. ಹೀಗಾಗಿ ಮಾಹಿತಿ ನೀಡಲು ಜೂನ್ 30ರ ವರೆಗೆ ಸಮಯ ನೀಡುವಂತೆ ಎಸ್ ಬಿಐ ಕೇಳಿಕೊಂಡಿದೆ.
ರಾಜಕೀಯ ಪಕ್ಷಗಳು ನಗದಾಗಿ ಪರಿವರ್ತಿಸಿಕೊಂಡ ಪ್ರತಿಯೊಂದು ಚುನಾವಣಾ ಬಾಂಡ್ ಗಳ ಕುರಿತು ಎಸ್ ಬಿಐ ನಗದಿನ ದಿನಾಂಕ, ಮುಖಬೆಲೆ ಸೇರಿದಂತೆ ಪ್ರತಿಯೊಂದು ಮಾಹಿತಿಯನ್ನು ಬಹಿರಂಗಗಿಳಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



