ಲೋಕಸಭಾ ಚುನಾವಣೆ ನಡುವಲ್ಲೇ ಜನತೆಗೆ ಗುಡ್ ನ್ಯೂಸ್: ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆ
ದೇಶಾದ್ಯಂತ ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆ ಮುಂದುವರೆಯುತ್ತಿರುವ ನಡುವಲ್ಲೇ ಜನಸಾಮಾನ್ಯರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಸರ್ಕಾರಿ ತೈಲ ಮತ್ತು ಅನಿಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಸತತ ಎರಡನೇ ಬಾರಿಗೆ ಇಳಿಸಿವೆ.

ನವದೆಹಲಿ: ದೇಶಾದ್ಯಂತ ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆ ಮುಂದುವರೆಯುತ್ತಿರುವ ನಡುವಲ್ಲೇ ಜನಸಾಮಾನ್ಯರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಸರ್ಕಾರಿ ತೈಲ ಮತ್ತು ಅನಿಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಸತತ ಎರಡನೇ ಬಾರಿಗೆ ಇಳಿಸಿವೆ.
ಸರ್ಕಾರಿ ತೈಲ ಕಂಪನಿಗಳು ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಇಂದಿನಿಂದ ದೇಶದ ವಿವಿಧ ನಗರಗಳಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 19 ರೂ.ವರೆಗೆ ಇಳಿಕೆಯಾಗಿದೆ. ಆದಾಗ್ಯೂ, ಈ ಕಡಿತದ ಪ್ರಯೋಜನವು 19 ಕೆಜಿ ವಾಣಿಜ್ಯ LPG ಸಿಲಿಂಡರ್‌ಗಳ ಮೇಲೆ ಮಾತ್ರ ಲಭ್ಯವಿರುತ್ತದೆ. ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಈ ಬಾರಿಯೂ ಯಾವುದೇ ಬದಲಾವಣೆಯಾಗಿಲ್ಲ.
ಇತ್ತೀಚಿನ ಬೆಲೆ ಇಳಿಕೆಯ ನಂತರ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆ 1,745.50 ರೂ.ಗೆ ಇಳಿದಿದೆ. ಅದೇ ರೀತಿ ಇಂದಿನಿಂದ ಕೋಲ್ಕತ್ತಾದಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳು 1,859 ರೂ.ಗೆ ಲಭ್ಯವಾಗಲಿದೆ. ಮುಂಬೈನ ಜನರು ಈಗ ಈ ವಾಣಿಜ್ಯ ಸಿಲಿಂಡರ್‌ಗೆ ರೂ 1,698.50 ಪಾವತಿಸಬೇಕಾಗುತ್ತದೆ, ಆದರೆ, ಚೆನ್ನೈನಲ್ಲಿ ಅದರ ಬೆಲೆ ಈಗ ರೂ 1,911 ಆಗಿರುತ್ತದೆ.
ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 1,844.50 ರೂಪಾಯಿಗಳಿಂದ 1,825.50 ರೂಪಾಯಿಗೆ ತಗ್ಗಿದೆ. ಆದ್ರೆ ದೇಶೀಯ ಸಿಲಿಂಡರ್ ಬೆಲೆಯಲ್ಲಿ ವ್ಯತ್ಯಾಸವಾಗದೆ 805.50 ರೂಪಾಯಿಗಳಲ್ಲೇ ಉಳಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



