ಜಾಗತಿಕ ಪ್ರಕ್ಷುಬ್ಧತೆ ನಡುವೆಯೂ ಭಾರತದ ಆರ್ಥಿಕತೆ ಬಲಿಷ್ಠ: RBI ಗವರ್ನರ್ ಶಕ್ತಿಕಾಂತ್ ದಾಸ್
ಸ್ಥೂಲ ಆರ್ಥಿಕ ಮೂಲಭೂತ ಅಂಶಗಳು, ಸ್ಥಿರ ಹಣಕಾಸು ವ್ಯವಸ್ಥೆ ಮತ್ತು ಚೇತರಿಸಿಕೊಳ್ಳುವ ಬಾಹ್ಯ ವಲಯಗಳ ಕಾರಣದಿಂದಾಗಿ ಭಾರತದ ಆರ್ಥಿಕತೆ ಬಲಿಷ್ಠವಾಗಿದೆ ಆರ್ ಬಿಐ ಗವರ್ನರ್ ಹೇಳಿದ್ದಾರೆ.

ಮುಂಬೈ: ಜಾಗತಿಕ ಮಟ್ಟದಲ್ಲಿ ಪ್ರಕ್ಷುಬ್ಧತೆಯ ನಡುವೆಯೂ ಭಾರತದ ಆರ್ಥಿಕತೆ ಬಲಿಷ್ಠವಾಗಿದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.
ಸ್ಥೂಲ ಆರ್ಥಿಕ ಮೂಲಭೂತ ಅಂಶಗಳು, ಸ್ಥಿರ ಹಣಕಾಸು ವ್ಯವಸ್ಥೆ ಮತ್ತು ಚೇತರಿಸಿಕೊಳ್ಳುವ ಬಾಹ್ಯ ವಲಯಗಳ ಕಾರಣದಿಂದಾಗಿ ಭಾರತದ ಆರ್ಥಿಕತೆ ಬಲಿಷ್ಠವಾಗಿದೆ ಆರ್ ಬಿಐ ಗವರ್ನರ್ ಹೇಳಿದ್ದಾರೆ.
CNBC TV18 ಕಾರ್ಯಕ್ರಮವೊಂದರಲ್ಲಿ ತಮ್ಮ ಮುಖ್ಯ ಭಾಷಣ ಮಾಡಿದ ಅವರು, ವಿವೇಕಯುತ ಮತ್ತು ಪೂರ್ವಭಾವಿ ನೀತಿಯ ವಿಧಾನಗಳ ಮೂಲಕ "ದೇಶದ ಮೂಲಭೂತ ಅಂಶಗಳನ್ನು ಇನ್ನಷ್ಟು ಬಲಪಡಿಸಲು ಪ್ರತಿ ಅವಕಾಶವನ್ನು ಬಳಸಿಕೊಳ್ಳಲಾಗುತ್ತಿದೆ" ಎಂದು ಹೇಳಿದ್ದಾರೆ. ಆರ್ಥಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಗಮನಹರಿಸಲಾಗಿದೆ, ಇದು ಬೆಳವಣಿಗೆ ಮತ್ತು ಸಮೃದ್ಧಿಯನ್ನು ಉಂಟುಮಾಡುತ್ತದೆ ಎಂದು ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.
ಆರ್ಥಿಕ ಬೆಳವಣಿಗೆ ಕುಂಠಿತವಾಗುವ ಸೂಚನೆಗಳ ನಡುವೆ ಶಕ್ತಿಕಾಂತ್ ದಾಸ್ ಈ ಹೇಳಿಕೆ ನೀಡಿರುವುದು ಮಹತ್ವ ಪಡೆದುಕೊಂಡಿದೆ.
ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಕಾರ್ಪೊರೇಟ್ ಲಾಭದಾಯಕತೆ ಎರಡು ವರ್ಷಗಳಲ್ಲಿ ಅತ್ಯಂತ ಕಡಿಮೆಯಾಗಿದೆ, ಅನೇಕ ಪ್ರಮುಖ ವಲಯಗಳಿಗೆ ಆದಾಯದ ಬೆಳವಣಿಗೆಯು ಹಲವು ತ್ರೈಮಾಸಿಕಗಳಲ್ಲಿ ಕಡಿಮೆಯಾಗಿದೆ.
ಅಲ್ಲದೆ, ಅಕ್ಟೋಬರ್ ಹಣದುಬ್ಬರ ಆಹಾರದ ಬೆಲೆ ಏರಿಕೆಯ ಪರಿಣಾಮ, ಆರ್ಬಿಐ ಅಂದಾಜು ಮಟ್ಟವಿದ್ದ 6.2ಪ್ರತಿಶತಕ್ಕಿಂತ ಹೆಚ್ಚಾಗಿದೆ. ಇದೇ ಸಮಾರಂಭದಲ್ಲಿ, ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಮಾತನಾಡಿದ್ದು, "ಕೇಂದ್ರ ಬ್ಯಾಂಕ್ ಬಡ್ಡಿದರಗಳನ್ನು ಕಡಿತಗೊಳಿಸಬೇಕು ಎಂಬುದನ್ನು ನಾನು ನಂಬುತ್ತೇನೆ. ಬೆಳವಣಿಗೆಗೆ ಮತ್ತಷ್ಟು ಉತ್ತೇಜನದ ಅಗತ್ಯವಿದೆ. ಬಡ್ಡಿದರಗಳನ್ನು ನಿರ್ಧರಿಸುವಾಗ ಆಹಾರ ಹಣದುಬ್ಬರವನ್ನು ಪರಿಗಣಿಸುವುದು ಸಂಪೂರ್ಣವಾಗಿ ದೋಷಪೂರಿತ ಸಿದ್ಧಾಂತವಾಗಿದೆ ಎಂದು ಹೇಳಿದ್ದು ಇದು ತಮ್ಮ ವೈಯಕ್ತಿಕ ಅಭಿಪ್ರಾಯವಾಗಿದ್ದು ಸರ್ಕಾರದ ಅಭಿಪ್ರಾಯಗಳಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.
ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್ಬಿಐ ತನ್ನ ಆರ್ಥಿಕ ಬೆಳವಣಿಗೆಯ ಅಂದಾಜನ್ನು ಶೇ.7.2ಕ್ಕೆ ನಿಗದಿಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



