ವಾಣಿಜ್ಯ

ಇತಿಹಾಸದಲ್ಲೇ ಮೊದಲು: 700 ಬಿಲಿಯನ್ ಡಾಲರ್ ಗಡಿ ದಾಟಿದ ಭಾರತದ ವಿದೇಶೀ ವಿನಿಮಯ ಮೀಸಲು!

ಅಂದಾಜಿನ ಪ್ರಕಾರ, ಭಾರತದ ವಿದೇಶಿ ವಿನಿಮಯ ಮೀಸಲು ಈಗ ಒಂದು ವರ್ಷದ ಯೋಜಿತ ಆಮದು (imports)ಗಳನ್ನು ಸರಿದೂಗಿಸಲು ಸಾಕಾಗುತ್ತದೆ ಎಂದು ಹೇಳಲಾಗಿದೆ.

ಇತಿಹಾಸದಲ್ಲೇ ಮೊದಲು: 700 ಬಿಲಿಯನ್ ಡಾಲರ್ ಗಡಿ ದಾಟಿದ ಭಾರತದ ವಿದೇಶೀ ವಿನಿಮಯ ಮೀಸಲು!
ಸಾಂದರ್ಭಿಕ ಚಿತ್ರ
Published On :

ಮುಂಬೈ: ಭಾರತೀಯ ಷೇರುಮಾರುಕಟ್ಟೆಯ ಏರಿಳಿತದ ನಡುವೆಯೇ ಭಾರತದ ವಿದೇಶೀ ವಿನಿಮಯ ಮೀಸಲು ಹೊಸ ದಾಖಲೆ ಬರೆದಿದ್ದು, 700 ಬಿಲಿಯನ್ ಡಾಲರ್ ಗಡಿ ದಾಟಿದೆ.

ಹೌದು.. ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಸೆಪ್ಟೆಂಬರ್ 27 ರಂದು ಕೊನೆಗೊಂಡ ವಾರದಲ್ಲಿ, ಭಾರತದ ವಿದೇಶಿ ವಿನಿಮಯ ಮೀಸಲು 12.588 ಶತಕೋಟಿ ಡಾಲರ್ ಏರಿಕೆಯೊಂದಿಗೆ 704.885 ಶತಕೋಟಿ ಡಾಲರ್ ಗೆ ಏರಿಕೆಯಾಗಿದೆ.

ಕಳೆದ ವಾರ ಈ ಪ್ರಮಾಣ 692.296 ಬಿಲಿಯನ್ ಡಾಲರ್ ಆಗಿತ್ತು. ವಿದೇಶಿ ವಿನಿಮಯ ಮೀಸಲುಗಳ ಈ ಪ್ರಮಾಣ ದೇಶೀಯ ಆರ್ಥಿಕ ಚಟುವಟಿಕೆಯನ್ನು ಜಾಗತಿಕ ಆಘಾತಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ ಎಂದು ಹೇಳಲಾಗಿದೆ.

ಆರ್ ಬಿಐನ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದ ವಿದೇಶಿ ಕರೆನ್ಸಿ ಆಸ್ತಿಗಳು (foreign currency assets), ವಿದೇಶೀ ವಿನಿಮಯ ಮೀಸಲು(forex reserves)ಗಳ ಪ್ರಮಾಣ 616.154 ಶತಕೋಟಿ ಡಾಲರ್ ನಷ್ಟಿದೆ.

ಶುಕ್ರವಾರದ ಮಾಹಿತಿಯ ಪ್ರಕಾರ ಚಿನ್ನದ ನಿಕ್ಷೇಪಗಳು ಪ್ರಸ್ತುತ 65.796 ಶತಕೋಟಿ ಡಾಲರ್ ಮೌಲ್ಯದ್ದಾಗಿದೆ. ಅಂದಾಜಿನ ಪ್ರಕಾರ, ಭಾರತದ ವಿದೇಶಿ ವಿನಿಮಯ ಮೀಸಲು ಈಗ ಒಂದು ವರ್ಷದ ಯೋಜಿತ ಆಮದು (imports)ಗಳನ್ನು ಸರಿದೂಗಿಸಲು ಸಾಕಾಗುತ್ತದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.