ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.1.55ಕ್ಕೆ ಇಳಿಕೆ; 8 ವರ್ಷಗಳಲ್ಲೇ ಅತ್ಯಂತ ಕನಿಷ್ಠ
ಇದು ಜೂನ್ 2017 ರ ನಂತರ ದಾಖಲಾದ ಅತ್ಯಂತ ಕಡಿಮೆ ಚಿಲ್ಲರೆ ಹಣದುಬ್ಬರ ಎಂದು ರಾಷ್ಟ್ರೀಯ ಅಂಕಿಅಂಶ ಕಚೇರಿ(NSO) ಮಂಗಳವಾರ ಬಿಡುಗಡೆ ಮಾಡಿದ ಅಂಕಿಅಂಶಗಳು ತಿಳಿಸಿವೆ.

ನವದೆಹಲಿ: ಭಾರತದ ಚಿಲ್ಲರೆ ಹಣದುಬ್ಬರವು ಜುಲೈ 2025 ರಲ್ಲಿ ಶೇ. 1.55ಕ್ಕೆ ತೀವ್ರವಾಗಿ ಇಳಿದಿದ್ದು, ಇದು ಕಳೆದ ಎಂಟು ತಿಂಗಳಲ್ಲೇ ಅತ್ಯಂತ ಕನಿಷ್ಠ ಹಣದುಬ್ಬರವಾಗಿದೆ.
ಕಳೆದ ಜೂನ್‌ನಲ್ಲಿ ಶೇ. 2.10 ರಷ್ಟಿದ್ದ ಚಿಲ್ಲರೆ ಹಣದುಬ್ಬರ 55 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿಮೆಯಾಗಿದೆ. ಇದು ಜೂನ್ 2017 ರ ನಂತರ ದಾಖಲಾದ ಅತ್ಯಂತ ಕಡಿಮೆ ಚಿಲ್ಲರೆ ಹಣದುಬ್ಬರ ಎಂದು ರಾಷ್ಟ್ರೀಯ ಅಂಕಿಅಂಶ ಕಚೇರಿ(NSO) ಮಂಗಳವಾರ ಬಿಡುಗಡೆ ಮಾಡಿದ ಅಂಕಿಅಂಶಗಳು ತಿಳಿಸಿವೆ.
ತರಕಾರಿ ಬೆಲೆಗಳು ಸೇರಿದಂತೆ ಆಹಾರ ಪದಾರ್ಥಗಳಲ್ಲಿನ ತೀವ್ರ ಬೆಲೆ ಕುಸಿತ ಚಿಲ್ಲರೆ ಹಣದುಬ್ಬರ ಕಳೆದ ಎಂಟು ವರ್ಷಗಳಲ್ಲೇ ಕನಿಷ್ಠ ಮಟ್ಟಕ್ಕೆ ತಲುಪಲು ಕಾರಣವಾಗಿದೆ.
ಗ್ರಾಹಕ ಆಹಾರ ಬೆಲೆ ಸೂಚ್ಯಂಕ(CFPI) ಆಧಾರಿತ ಹಣದುಬ್ಬರ ಪ್ರಮಾಣವು ಜೂನ್ ನಲ್ಲಿ ಶೇ. 2.1 ರಷ್ಟು ಇತ್ತು. ಜುಲೈನಲ್ಲಿ 1.55 ರಷ್ಟು ಹಣದುಬ್ಬರವನ್ನು ದಾಖಲಿಸಿದೆ.
2017 ರ ಜೂನ್ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರವು ಶೇ. 1.46 ರಷ್ಟು ಇತ್ತು. ಅದರ ನಂತರ ಇದೇ ಮೊದಲ ಬಾರಿಗೆ ಕನಿಷ್ಠ ಪ್ರಮಾಣದ ಚಿಲ್ಲರೆ ಹಣದುಬ್ಬರ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



