ವಾಣಿಜ್ಯ

ನೈಂಟಿ ಹೊಡೆದ ರೂಪಾಯಿ! ಡಾಲರ್ ಎದುರು ದಾಖಲೆಯ ಕನಿಷ್ಠ ಮಟ್ಟಕ್ಕೆ ಕುಸಿದ ಭಾರತದ ಕರೆನ್ಸಿ

ಅಮೆರಿಕದ ಡಾಲರ್ ಎದುರು ರೂಪಾಯಿ ಅಪಮೌಲ್ಯ ಮುಂದುವರೆದಿದ್ದು, ಪ್ರತಿ ಡಾಲರ್ ಗೆ 90.25 ರೂ. ಗೆ ತಲುಪಿದೆ. ಇದು ಸಾರ್ವಕಾಲಿಕ ಕನಿಷ್ಠ ಮಟ್ಟವಾಗಿದೆ.

ನೈಂಟಿ ಹೊಡೆದ ರೂಪಾಯಿ! ಡಾಲರ್ ಎದುರು ದಾಖಲೆಯ ಕನಿಷ್ಠ ಮಟ್ಟಕ್ಕೆ ಕುಸಿದ ಭಾರತದ ಕರೆನ್ಸಿ
ಡಾಲರ್ - ರೂಪಾಯಿ
Published On :

ನವದೆಹಲಿ: ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಬುಧವಾರ ಮತ್ತೆ 29 ಪೈಸೆ ಕುಸಿದಿದ್ದು, ಇದರೊಂದಿಗೆ ಭಾರತದ ಕರೆನ್ಸಿ ಮೊದಲ ಬಾರಿಗೆ ನೈಂಟಿ ಕ್ರಾಸ್ ಮಾಡಿದೆ.

ಅಮೆರಿಕದ ಡಾಲರ್ ಎದುರು ರೂಪಾಯಿ ಅಪಮೌಲ್ಯ ಮುಂದುವರೆದಿದ್ದು, ಪ್ರತಿ ಡಾಲರ್ ಗೆ 90.25 ರೂ. ಗೆ ತಲುಪಿದೆ. ಇದು ಸಾರ್ವಕಾಲಿಕ ಕನಿಷ್ಠ ಮಟ್ಟವಾಗಿದೆ. ನಿನ್ನೆ ಡಾಲರ್ ಎದುರು ರೂಪಾಯಿ ಮೌಲ್ಯ 89.94 ರೂಪಾಯಿ ಇತ್ತು.

ಎಫ್‌ಐಐ ಹೊರಹರಿವು ಮತ್ತು ಬ್ಯಾಂಕುಗಳು ನಿರಂತರವಾಗಿ ಡಾಲರ್‌ಗಳನ್ನು ಖರೀದಿಸುತ್ತಿರುವುದು ರೂಪಾಯಿ ಮೌಲ್ಯ ಕುಸಿತಕ್ಕೆ ಕಾರಣ ಎನ್ನಲಾಗಿದೆ.

ದೇಶೀಯ ಷೇರು ಮಾರುಕಟ್ಟೆಗಳಲ್ಲಿನ ಕುಸಿತ ಮತ್ತು ಭಾರತ-ಅಮೆರಿಕ ವ್ಯಾಪಾರ ವಿಳಂಬ ಹಾಗೂ ವಿದೇಶಿ ಹೂಡಿಕೆದಾರರ ಹಣ ಹಿಂಪಡೆಯುವಿಕೆ ರೂಪಾಯಿ ದುರ್ಬಲಗೊಳ್ಳಲು ಪ್ರಮುಖ ಕಾರಣಗಳಾಗಿವೆ ಎಂದು ಫಾರೆಕ್ಸ್ ವ್ಯಾಪಾರಿಗಳು ತಿಳಿಸಿದ್ದಾರೆ.

ಚಿನ್ನ, ಬೆಳ್ಳಿ ಆಮದು ಹೆಚ್ಚಳದಿಂದ ಡಾಲರ್‌ಗಳ ಬೇಡಿಕೆ ಏರಿದೆ ಎಂದು ಹೇಳಲಾಗುತ್ತಿದೆ. ಇದು ದೇಶದ ಆರ್ಥಿಕತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಆತಂಕ ಹೆಚ್ಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.