Trump ಒತ್ತಾಯಕ್ಕೆ ಮಣಿದ ಭಾರತ?: Harley Davidson ಬೈಕ್ ಗಳ ಮೇಲಿನ ಆಮದು ಸುಂಕ ಕಡಿತ!
ಈ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಭಾರತ ಸರ್ಕಾರ ಹಾರ್ಲೇ ಡೇವಿಡ್ ಸನ್ (Harley Davidson) ಬೈಕ್ ಗಳ ಮೇಲಿನ ಸುಂಕ ಕಡಿಮೆ ಮಾಡಿರುವುದು ಇಂಥಹದ್ದೊಂದು ಪ್ರಶ್ನೆಗೆ ಕಾರಣವಾಗಿದೆ.

ನವದೆಹಲಿ: ಅಮೇರಿಕಾ ಉತ್ಪನ್ನಗಳಿಗೆ ಹೆಚ್ಚಿನ ಆಮದು ಸುಂಕ ವಿಧಿಸುತ್ತಿರುವ ರಾಷ್ಟ್ರಗಳಿಗೆ ಪ್ರತೀಕಾರವಾಗಿ ದುಪ್ಪಟ್ಟು ತೆರಿಗೆ ವಿಧಿಸುವ ಡೊನಾಲ್ಡ್ ಟ್ರಂಪ್ ಆಕ್ರೋಶ ತಣ್ಣಗಾಗಿಸುವ ನಿಟ್ಟಿನಲ್ಲಿ ಭಾರತ ಹೆಜ್ಜೆ ಇಟ್ಟಿದೆಯೆ?
ಈ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಭಾರತ ಸರ್ಕಾರ ಹಾರ್ಲೇ ಡೇವಿಡ್ ಸನ್ (Harley Davidson) ಬೈಕ್ ಗಳ ಮೇಲಿನ ಸುಂಕ ಕಡಿಮೆ ಮಾಡಿರುವುದು ಇಂಥಹದ್ದೊಂದು ಪ್ರಶ್ನೆಗೆ ಕಾರಣವಾಗಿದೆ.
ಅಮೇರಿಕಾದಲ್ಲಿ ಡೊನಾಲ್ಡ್ ಟ್ರಂಪ್ 2 ನೇ ಅವಧಿಗೆ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದು, ಶೀಘ್ರವೇ ಪ್ರಧಾನಿ ನರೇಂದ್ರ ಮೋದಿ ಅಮೇರಿಕಾ ಪ್ರವಾಸ ಕೈಗೊಳ್ಳಲಿದ್ದಾರೆ. ಇದಕ್ಕೂ ಮೊದಲು ಭಾರತ ಸರ್ಕಾರ ತನ್ನ ಬಜೆಟ್ ನಲ್ಲಿ Harley Davidson ಬೈಕ್ ಗಳ ಆಮದು ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು (ಸೀಮಾ ಸುಂಕ) ಕಡಿತಗೊಳಿಸಿರುವುದನ್ನು Trump Tariff ಬೆದರಿಕೆಯನ್ನು ತಣ್ಣಗಾಗಿಸುವ ಉದ್ದೇಶ ಎಂದು ವಿಶ್ಲೇಷಿಸಲಾಗುತ್ತಿದೆ.
1600 ಸಿಸಿ ಮೀರದ ಎಂಜಿನ್ ಸಾಮರ್ಥ್ಯವಿರುವ ಮೋಟಾರ್‌ಸೈಕಲ್‌ಗಳಿಗೆ, ಸಿಬಿಯುಗಳ (ಸಂಪೂರ್ಣವಾಗಿ ನಿರ್ಮಿಸಲಾದ) ಮೇಲಿನ ಸುಂಕವನ್ನು ಶೇ. 50ರಿಂದ ಶೇ.40ಕ್ಕೆ ಇಳಿಸಲಾಗಿದೆ. 1600 ಸಿಸಿ ಮೀರದ ಎಂಜಿನ್ ಸಾಮರ್ಥ್ಯವಿರುವ ದೊಡ್ಡ ಮೋಟಾರ್‌ಸೈಕಲ್‌ಗಳಿಗೆ, ಸುಂಕ ಕಡಿತ ಪ್ರಮಾಣ ಹೆಚ್ಚಿವೆ.
ಕಾರುಗಳು ಮತ್ತು ಇತರ ಮೋಟಾರು ವಾಹನಗಳ ಆಮದಿನ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಸಹ ಕಡಿಮೆ ಮಾಡಲಾಗಿದ್ದರೂ, ಅವುಗಳ ಪರಿಣಾಮಕಾರಿ ಸುಂಕ ದರಗಳು ಬದಲಾಗುತ್ತವೆಯೇ ಎಂಬುದು ಸ್ಪಷ್ಟವಾಗಿಲ್ಲ.
ಭಾರತದಲ್ಲಿನ ಹೆಚ್ಚಿನ ಸುಂಕಗಳು ಇತ್ತೀಚೆಗೆ ಎರಡನೇ ಬಾರಿಗೆ ಗೆದ್ದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಸಮಾಧಾನಕ್ಕೆ ಕಾರಣವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




