ವಾಣಿಜ್ಯ

Indian Stock Market: Sensex 572 ಅಂಕ ಇಳಿಕೆ; ರಿಯಲ್ ಎಸ್ಟೇಟ್, ಮಾಧ್ಯಮ ಷೇರುಗಳ ಮೌಲ್ಯ ಇಳಿಕೆ

ಸೋಮವಾರ ಭಾರತೀಯ ಷೇರುಮಾರುಕಟ್ಟೆ ಗಣನೀಯ ಪ್ರಮಾಣದ ಕುಸಿತ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.

Indian Stock Market: Sensex 572 ಅಂಕ ಇಳಿಕೆ; ರಿಯಲ್ ಎಸ್ಟೇಟ್, ಮಾಧ್ಯಮ ಷೇರುಗಳ ಮೌಲ್ಯ ಇಳಿಕೆ
ಭಾರತೀಯ ಷೇರು ಮಾರುಕಟ್ಟೆ
Published On :

ಮುಂಬೈ: ಭಾರತೀಯ ಷೇರುಮಾರುಕಟ್ಟೆ ವಾರದ ಮೊದಲ ದಿನವೇ ಭಾರಿ ಕುಸಿತ ಕಂಡಿದ್ದು, ಷೇರುಮಾರುಕಟ್ಟೆಯ ಎರಡೂ ಸೂಚ್ಯಂಕಗಳು ಸೋಮವಾರ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.

ಸೋಮವಾರ ಭಾರತೀಯ ಷೇರುಮಾರುಕಟ್ಟೆ ಗಣನೀಯ ಪ್ರಮಾಣದ ಕುಸಿತ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.

ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.70ರಷ್ಟು ಇಳಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.63ರಷ್ಟು ಕುಸಿತ ದಾಖಲಿಸಿದೆ.

ಸೆನ್ಸೆಕ್ಸ್ ಇಂದು ಬರೊಬ್ಬರಿ 572.07 ಅಂಕಗಳ ಕುಸಿತದೊಂದಿಗೆ 80,891.02 ಅಂಕಗಳಿಗೆ ಇಳಿಕೆಯಾಗಿದ್ದರೆ, ನಿಫ್ಟಿ 156.10 ಅಂಕಗಳ ಇಳಿಕೆಯೊಂದಿಗೆ 24,680.90 ಅಂಕಗಳಿಗೆ ಕುಸಿತವಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.

ಇಂದಿನ ವಹಿವಾಟಿನಲ್ಲಿ ರಿಯಲ್ ಎಸ್ಟೇಟ್ ಮತ್ತು ಮಾಧ್ಯಮ ಕ್ಷೇತ್ರಗಳ ಷೇರುಗಳ ಮೌಲ್ಯ ಗಣನೀಯ ಕುಸಿತಕಂಡಿದ್ದು, ಬಂಡವಾಳ ಸರಕುಗಳು, ಲೋಹ, ದೂರಸಂಪರ್ಕ, ಪಿಎಸ್‌ಯು ಬ್ಯಾಂಕ್, ಖಾಸಗಿ ಬ್ಯಾಂಕ್ ಗಳ ಷೇರುಗಳ ಮೌಲ್ಯ ಕುಸಿತವಾಗಿದೆ.

ಯಾರಿಗೆ ಲಾಭ? ಯಾರಿಗೆ ನಷ್ಟ?

ಇಂದಿನ ವಹಿವಾಟಿನಲ್ಲಿ ನಿಫ್ಚಿಯಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಶ್ರೀರಾಮ್ ಫೈನಾನ್ಸ್, ಸಿಪ್ಲಾ, ಹೀರೋ ಮೋಟೋಕಾರ್ಪ್, HUL, SBI ಲೈಫ್ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದೆ. ಅಂತೆಯೇ ಕೋಟಕ್ ಮಹೀಂದ್ರಾ ಬ್ಯಾಂಕ್, ವಿಪ್ರೋ, ಬಜಾಜ್ ಫೈನಾನ್ಸ್, ಭಾರ್ತಿ ಏರ್‌ಟೆಲ್, ಇಂಡಸ್‌ಇಂಡ್ ಬ್ಯಾಂಕ್ ಸಂಸ್ಥೆಯ ಷೇರುಗಳು ನಷ್ಟ ಕಂಡಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.