ಭಾರತದಲ್ಲಿ EV ವಾಹನ ತಯಾರಿಸಲು ಟೆಸ್ಲಾಗೆ ಆಸಕ್ತಿ ಇಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ
"ಟೆಸ್ಲಾ ಕಂಪನಿ ಭಾರತದಲ್ಲಿ ಶೋ ರೂಂಗಳನ್ನು ಪ್ರಾರಂಭಿಸಲು ಮಾತ್ರ ಹೆಚ್ಚು(ಆಸಕ್ತಿ) ಹೊಂದಿದೆ. ಅವರು ಭಾರತದಲ್ಲಿ ಉತ್ಪಾದನೆ ಆರಂಭಿಸಲು ಆಸಕ್ತಿ ಹೊಂದಿಲ್ಲ"

ನವದೆಹಲಿ: ಜಾಗತಿಕ ವಿದ್ಯುತ್ ಚಾಲಿತ ವಾಹನ ದೈತ್ಯ ಟೆಸ್ಲಾ, ಭಾರತದಲ್ಲಿ ಕಾರುಗಳನ್ನು ಉತ್ಪಾದಿಸಲು ಆಸಕ್ತಿ ಹೊಂದಿಲ್ಲ. ಆದರೆ ದೇಶದಲ್ಲಿ ಶೋ ರೂಂಗಳನ್ನು ಆರಂಭಿಸಲು ಉತ್ಸುಕವಾಗಿದೆ ಎಂದು ಕೇಂದ್ರ ಭಾರೀ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಸೋಮವಾರ ಹೇಳಿದ್ದಾರೆ.
ಟೆಸ್ಲಾ ಕಂಪನಿಯು ಸುಂಕ ತಪ್ಪಿಸಲು ಭಾರತದಲ್ಲಿ ಕಾರ್ಖಾನೆಯನ್ನು ಸ್ಥಾಪಿಸಿದರೆ, ಅದು ಅಮೆರಿಕಕ್ಕೆ "ಅನ್ಯಾಯ" ಮಾಡಿದಂತೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದರು.
"ಟೆಸ್ಲಾ ಕಂಪನಿ ಭಾರತದಲ್ಲಿ ಶೋ ರೂಂಗಳನ್ನು ಪ್ರಾರಂಭಿಸಲು ಮಾತ್ರ ಹೆಚ್ಚು(ಆಸಕ್ತಿ) ಹೊಂದಿದೆ. ಅವರು ಭಾರತದಲ್ಲಿ ಉತ್ಪಾದನೆ ಆರಂಭಿಸಲು ಆಸಕ್ತಿ ಹೊಂದಿಲ್ಲ" ಎಂದು ಕುಮಾರಸ್ವಾಮಿ ದೆಹಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಉತ್ತೇಜಿಸುವ ಯೋಜನೆಯ ಮಾರ್ಗಸೂಚಿಗಳನ್ನು ಅನಾವರಣಗೊಳಿಸುವುದಾಗಿ ಘೋಷಿಸಲು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಕುಮಾರಸ್ವಾಮಿ ಈ ಹೇಳಿಕೆ ನೀಡಿದ್ದಾರೆ.
"ಇಲ್ಲಿಯವರೆಗೆ ಅವರು(ಟೆಸ್ಲಾ) ಆಸಕ್ತಿ ತೋರಿಸಿಲ್ಲ. ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಯನ್ನು ಉತ್ತೇಜಿಸುವ ಯೋಜನೆಗಾಗಿ ಟೆಸ್ಲಾ ಪ್ರತಿನಿಧಿಯು ಮೊದಲ ಸುತ್ತಿನ ಪಾಲುದಾರರ ಚರ್ಚೆಗಳಲ್ಲಿ ಮಾತ್ರ ಭಾಗವಹಿಸಿದ್ದಾರೆ. ಕಂಪನಿಯ ಪ್ರತಿನಿಧಿಯು ಪಾಲುದಾರರ ಎರಡನೇ ಮತ್ತು ಮೂರನೇ ಸುತ್ತಿನ ಚರ್ಚೆಗಳಲ್ಲಿ ಭಾಗವಹಿಸಿಲ್ಲ" ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



