Gold rate: ಚಿನ್ನದ ದರದಲ್ಲಿ ಸಾರ್ವಕಾಲಿಕ ದಾಖಲೆ! 10 ಗ್ರಾಂ ಚಿನ್ನದ ಬೆಲೆ ಎಷ್ಟು ಗೊತ್ತಾ?
ಹಬ್ಬಗಳು, ಮದುವೆ ಸೀಸನ್ ಆಗಿರುವುದರಿಂದ ಗ್ರಾಹಕರು ಚಿನ್ನ ಖರೀದಿಯಲ್ಲಿ ತೊಡಗಿರುವುದು ಮತ್ತು ಸಾಗರೋತ್ತರ ಮಾರುಕಟ್ಟೆಗಳಲ್ಲಿನ ಪ್ರವೃತ್ತಿಯು ಚಿನ್ನದ ಬೆಲೆಯನ್ನು ಈ ವರ್ಷದಲ್ಲಿ ಗರಿಷ್ಠ ಮಟ್ಟಕ್ಕೆ ಏರಿಸಿದೆ

ನವದೆಹಲಿ: ಮದುವೆ ಸೀಸನ್ ಶುರುವಾಗಿದ್ದು, ಆಭರಣ ಖರೀದಿ ಮುಂದುವರೆದಿರುವುದರಿಂದ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ 10 ಗ್ರಾಂ ಚಿನ್ನದ ಬೆಲೆ ರೂ.700 ಏರಿಕೆಯಾಗಿ, ಸಾರ್ವಕಾಲಿಕ ರೂ. 91,950 ಆಗಿದೆ ಎಂದು ಅಖಿಲ ಭಾರತ ಸರಾಫ್ ಸಂಘ ತಿಳಿಸಿದೆ.
ಇದಲ್ಲದೇ ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆ ಮತ್ತು ಅಮೆರಿಕದ ಆರ್ಥಿಕ ಕುಸಿತವೂ ಚಿನ್ನದ ಬೆಲೆ ಏರಿಕೆಗೆ ಕಾರಣವಾಗಿದೆ. ಶುದ್ಧ ಚಿನ್ನದ ಬೆಲೆ 10 ಗ್ರಾಂಗೆ 700 ರೂ. ಏರಿಕೆಯಾಗಿದ್ದು, 91, 950 ರೂ. ಆಗಿದೆ. ಮಂಗಳವಾರ 10 ಗ್ರಾಂ ಚಿನ್ನದ ಬೆಲೆ ರೂ.91, 250 ಆಗಿತ್ತು.
ಚಿನ್ನದ ಬೆಲೆ 10 ಗ್ರಾಂಗೆ 700 ರೂ. ಏರಿಕೆಯಾಗಿದ್ದು, 91, 950 ರೂ. ಆಗಿರುವುದು ಸಾರ್ವಕಾಲಿಕ ದಾಖಲೆಯಾಗಿದೆ.
ಈ ವರ್ಷದಲ್ಲಿ ಗರಿಷ್ಟ ಮಟ್ಟದ ಏರಿಕೆ: ಹಬ್ಬಗಳು, ಮದುವೆ ಸೀಸನ್ ಆಗಿರುವುದರಿಂದ ಗ್ರಾಹಕರು ಚಿನ್ನ ಖರೀದಿಯಲ್ಲಿ ತೊಡಗಿರುವುದು ಮತ್ತು ಸಾಗರೋತ್ತರ ಮಾರುಕಟ್ಟೆಗಳಲ್ಲಿನ ಪ್ರವೃತ್ತಿಯು ಚಿನ್ನದ ಬೆಲೆಯನ್ನು ಈ ವರ್ಷದಲ್ಲಿ ಗರಿಷ್ಠ ಮಟ್ಟಕ್ಕೆ ಏರಿಸಿದೆ ಎಂದು ವ್ಯಾಪಾರಿಗಳು ಹೇಳಿದ್ದಾರೆ.
ಬೆಳ್ಳಿ ದರವೂ ಏರಿಕೆ:
ಬೆಳ್ಳಿಯ ಬೆಲೆಯು ಸಹ ರೂ. 1,000 ಏರಿಕೆಯಾಗಿದ್ದು, ಪ್ರತಿ ಕೆಜಿ ಬೆಳ್ಳಿಯ ದರ ರೂ 1,03,500 ನಷ್ಟು ಗರಿಷ್ಠ ಮಟ್ಟವನ್ನು ತಲುಪಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



