Indian Stock Market: ಸತತ 2ನೇ ದಿನವೂ ಷೇರುಮಾರುಕಟ್ಟೆ ಕುಸಿತ; Sensex 57 ಅಂಕ ಇಳಿಕೆ!
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.070ರಷ್ಟು ಇಳಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.13ರಷ್ಟು ಇಳಿಕೆ ದಾಖಲಿಸಿದೆ.

ಮುಂಬೈ: ಸತತ 2ನೇ ದಿನವೂ ಭಾರತೀಯ ಷೇರುಮಾರುಕಟ್ಟೆ ಅಲ್ಪ ಇಳಿಕೆ ಕಂಡಿದ್ದು, ಮಂಗಳವಾರ ಷೇರುಮಾರುಕಟ್ಟೆ ಸೂಚ್ಯಂಕಗಳು ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.070ರಷ್ಟು ಇಳಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.13ರಷ್ಟು ಇಳಿಕೆ ದಾಖಲಿಸಿದೆ. ಸೆನ್ಸೆಕ್ಸ್ ಇಂದು 57.87ಅಂಕಗಳ ಇಳಿಕೆಯೊಂದಿಗೆ 82,102.10 ಅಂಕಗಳಿಗೆ ಕುಸಿತವಾಗಿದ್ದರೆ, ನಿಫ್ಟಿ 32.85 ಅಂಕಗಳ ಇಳಿಕೆಯೊಂದಿಗೆ 23,163.10 ಅಂಕಗಳಿಗೆ ಇಳಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಬ್ಯಾಂಕಿಂಗ್ ಕ್ಷೇತ್ರ ಐಟಿ, ಬಂಡವಾಳ ಸರಕುಗಳು ಮತ್ತು ಕೈಗಾರಿಕಾ ವಲಯಗಳ ಷೇರುಗಳ ಮೌಲ್ಯದಲ್ಲಿ ಬದಲಾವಣೆ ಕಂಡುಬಂದಿದೆ.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಜೆಎಸ್‌ಡಬ್ಲ್ಯೂ ಸ್ಟೀಲ್, ಇಂಡಸ್‌ಇಂಡ್ ಬ್ಯಾಂಕ್ ಮತ್ತು ಬಜಾಜ್ ಫೈನಾನ್ಸ್ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದೆ. ಅಂತೆಯೇ ಟ್ರೆಂಟ್ ಮತ್ತು ಅಲ್ಟ್ರಾಟೆಕ್ ಸಿಮೆಂಟ್ ಸಂಸ್ಥೆಯ ಷೇರುಗಳು ನಷ್ಟ ಕಂಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



