Indian Stock Market: Sensex-Nifty ಅಲ್ಪ ಇಳಿಕೆ; ಟಾಟಾ ಷೇರುಗಳ ಮೇಲೆ ಒತ್ತಡ
ಸೆನ್ಸೆಕ್ಸ್ ಇಂದು 187.90ಅಂಕಗಳ ಕುಸಿತದೊಂದಿಗೆ 77,966.35 ಅಂಕಗಳಿಗೆ ಇಳಿಕೆಯಾಗಿದ್ದರೆ, ನಿಫ್ಟಿ 35.75 ಅಂಕಗಳ ಇಳಿಕೆಯೊಂದಿಗೆ 24,435.95 ಅಂಕಗಳಿಗೆ ಇಳಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.

ಮುಂಬೈ: ಭಾರತೀಯ ಷೇರುಮಾರುಕಟ್ಟೆ ಬುಧವಾರ ಮತ್ತೆ ಅಲ್ಪ ಪ್ರಮಾಣದ ಕುಸಿತ ಕಂಡಿದ್ದು, ಷೇರುಮಾರುಕಟ್ಟೆ ಉಭಯ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿವೆ.
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.24ರಷ್ಟು ಇಳಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.15ರಷ್ಟು ಕುಸಿತ ದಾಖಲಿಸಿದೆ. ಸೆನ್ಸೆಕ್ಸ್ ಇಂದು 187.90ಅಂಕಗಳ ಕುಸಿತದೊಂದಿಗೆ 77,966.35 ಅಂಕಗಳಿಗೆ ಇಳಿಕೆಯಾಗಿದ್ದರೆ, ನಿಫ್ಟಿ 35.75 ಅಂಕಗಳ ಇಳಿಕೆಯೊಂದಿಗೆ 24,435.95 ಅಂಕಗಳಿಗೆ ಇಳಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಆಟೋ ವಲಯದ ಷೇರುಗಳ ಮೌಲ್ಯದಲ್ಲಿ ಗಣನೀಯ ಕುಸಿತವಾಗಿದ್ದರೆ, , ಐಟಿ ಮತ್ತು ಎಫ್‌ಎಂಸಿಜಿ ವಲಯಗಳ ಸೂಚ್ಯಂಕಗಳು ಇಳಿಕೆ ದಾಖಲಿಸಿದವು. ಸೆನ್ಸೆಕ್ಸ್‌ನ ಪ್ರಮುಖ ಷೇರುಗಳ ಪೈಕಿ ಟಿಸಿಎಸ್ ಅತ್ಯಧಿಕವಾಗಿ ಶೇ.3.71ರಷ್ಟು ಕುಸಿತ ಕಂಡಿತು.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಮಹೀಂದ್ರಾ ಆ್ಯಂಡ್ ಮಹೀಂದ್ರಾ, ಟಾಟಾ ಸ್ಟೀಲ್, ಲಾರ್ಸನ್ ಆ್ಯಂಡ್ ಟೂಬ್ರೊ, ಎಟರ್ನಲ್ ಮತ್ತು ಇನ್ಫೋಸಿಸ್ ಸಂಸ್ಥೆಗಳ ಷೇರುಗಳು ಅತಿಹೆಚ್ಚು ನಷ್ಟ ಅನುಭವಿಸಿದವು.
ಉಳಿದಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಭಾರ್ತಿ ಏರ್‌ಟೆಲ್, ಅಲ್ಟ್ರಾಟೆಕ್ ಸಿಮೆಂಟ್ ಮತ್ತು ಪವರ್ ಗ್ರಿಡ್ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿವೆ.
ಟಾಟಾ ಗ್ರೂಪ್ ಷೇರುಗಳ ಮೇಲೆ ಒತ್ತಡ
ಕಚ್ಚಾ ತೈಲದ ಬೆಲೆ ಏರಿಕೆ ಹಾಗೂ ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರನ್ ಅವರು ತಮ್ಮ ಪ್ರಸ್ತುತ ಅಧಿಕಾರಾವಧಿ 2027ರ ಫೆಬ್ರವರಿ 20ರಂದು ಮುಕ್ತಾಯಗೊಂಡ ಬಳಿಕ ಮರುನೇಮಕ ಬಯಸುವುದಿಲ್ಲ ಎಂದು ಘೋಷಿಸಿದ ಬೆನ್ನಲ್ಲೇ ಟಾಟಾ ಗ್ರೂಪ್ ಷೇರುಗಳಲ್ಲಿ ಮಾರಾಟದ ಒತ್ತಡ ಹೆಚ್ಚಾಗಿದೆ.
ಇದರ ಪರಿಣಾಮ ಹೂಡಿಕೆದಾರರ ಭಾವನೆ ದುರ್ಬಲಗೊಂಡಿದ್ದು, ಟಿಸಿಎಸ್ ಷೇರುಗಳ ಮೌಲ್ಯದಲ್ಲೂ ಕುಸಿತ ಕಂಡಿದೆ.
ಜಾಗತಿಕ ತೈಲ ಬೆಲೆ ಸೂಚ್ಯಂಕವಾಗಿರುವ ಬ್ರೆಂಟ್ ಕಚ್ಚಾ ತೈಲದ ಬೆಲೆ ಶೇ.0.17ರಷ್ಟು ಇಳಿಕೆಯಾಗಿ ಪ್ರತಿ ಬ್ಯಾರೆಲ್‌ಗೆ 88.76 ಅಮೆರಿಕನ್ ಡಾಲರ್‌ಗೆ ತಲುಪಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



