Sensex 485, Nifty 173 ಅಂಕ ಏರಿಕೆ; ಟೈಟನ್ ಷೇರು ಮೌಲ್ಯ ಶೇ.3%, ಅಲ್ಟ್ರಾಟೆಕ್ ಷೇರು ಮೌಲ್ಯ ಶೇ.2%ರಷ್ಟು ಏರಿಕೆ!
ಸೋಮವಾರದ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.58ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.68ರಷ್ಟು ಏರಿಕೆ ದಾಖಲಿಸಿದೆ.

ಮುಂಬೈ: ಭಾರತೀಯ ಷೇರುಮಾರುಕಟ್ಟೆ ಸೋಮವಾರ ಉತ್ತಮ ವಹಿವಾಟು ನಡೆಸಿದ್ದು, ಷೇರುಮಾರುಕಟ್ಟೆಯ ಉಭಯ ಸೂಚ್ಯಂಕಗಳು ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಸೋಮವಾರದ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.58ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.68ರಷ್ಟು ಏರಿಕೆ ದಾಖಲಿಸಿದೆ.
ಸೆನ್ಸೆಕ್ಸ್ ಇಂದು 485.35 ಅಂಕಗಳ ಏರಿಕೆಯೊಂದಿಗೆ 84,065.75 ಅಂಕಗಳಿಗೆ ಏರಿಕೆಯಾಗಿದ್ದರೆ, ನಿಫ್ಟಿ 173.60 ಅಂಕಗಳ ಏರಿಕೆಯೊಂದಿಗೆ 25,867.30 ಅಂಕಗಳಿಗೆ ಏರಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಐಟಿ, ಬ್ಯಾಂಕಿಂಗ್, ಬಂಡವಾಳ ಸರಕುಗಳು ಮತ್ತು ಕೈಗಾರಿಕಾ ವಲಯಗಳ ಷೇರುಗಳು ಉತ್ತಮ ವಹಿವಾಟು ನಡೆಸಿ ಲಾಭಾಂಶ ಗಳಿಸಿವೆ.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಟೈಟನ್ ಸಂಸ್ಥೆಯ ಷೇರು ಮೌಲ್ಯ ಸುಮಾರು ಶೇಕಡಾ 3 ರಷ್ಟು ಮತ್ತು ಅಲ್ಟ್ರಾಟೆಕ್ ಸಂಸ್ಥೆಯ ಷೇರು ಮೌಲ್ಯ ಸುಮಾರು ಶೇಕಡಾ 2 ರಷ್ಟು ಏರಿಕೆಯಾಗಿದೆ.
ಉಳಿದಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಟೈಟಾನ್, ಅಲ್ಟ್ರಾಟೆಕ್ ಸಿಮೆಂಟ್, ಟಾಟಾ ಸ್ಟೀಲ್, ಎಟರ್ನಲ್, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ಕೋಟಕ್ ಮಹೀಂದ್ರಾ ಬ್ಯಾಂಕ್, ಇಂಡಿಗೊ, ಟ್ರೆಂಟ್, ಮಹೀಂದ್ರಾ & ಮಹೀಂದ್ರಾ, ಲಾರ್ಸೆನ್ & ಟೂಬ್ರೊ, ಸನ್ ಫಾರ್ಮಾಸ್ಯುಟಿಕಲ್ಸ್ ಮತ್ತು ಏಷ್ಯನ್ ಪೇಂಟ್ಸ್ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದೆ.
ಅಂತೆಯೇ ಮ್ಯಾಕ್ಸ್ ಹೆಲ್ತ್ ಕೇರ್ ಇನ್ಸ್ಟಿಟ್ಯೂಟ್ ಮತ್ತು ಐಟಿಸಿ ಸಂಸ್ಥೆಯ ಷೇರುಗಳು ನಷ್ಟ ಕಂಡಿವೆ. ಮಾರುಕಟ್ಟೆ ವಿಸ್ತಾರವು ಸಕಾರಾತ್ಮಕವಾಗಿದ್ದು, 2736 ಷೇರುಗಳು ಮುನ್ನಡೆ ಸಾಧಿಸಿದವು. 941 ಷೇರುಗಳು ಕುಸಿದವು ಮತ್ತು 153 ಷೇರುಗಳ ಮೌಲ್ಯದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಏಷ್ಯನ್ ಮಾರುಕಟ್ಟೆಗಳಲ್ಲಿ ಮಿಶ್ರವಹಿವಾಟು
ಭಾರತ ಹೊರತು ಪಡಿಸಿದರೆ ಏಷ್ಯಾದ ಮಾರುಕಟ್ಟೆಗಳು ಇಂದು ಮಿಶ್ರ ಫಲಿತಾಂಶ ಕಂಡಿವೆ. ಸಿಯೋಲ್ ಮತ್ತು ಟೋಕಿಯೊ ಸಕಾರಾತ್ಮಕವಾಗಿ ಕೊನೆಗೊಂಡರೆ, ಶಾಂಘೈ ಮತ್ತು ಹಾಂಗ್ ಕಾಂಗ್ ರಜಾದಿನಗಳಿಗೆ ಮುಚ್ಚಲ್ಪಟ್ಟಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



