ವಾಣಿಜ್ಯ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಅನಿಲ್ ಅಂಬಾನಿ, ಪತ್ನಿಗೆ EDಯಿಂದ ಹೊಸ ಸಮನ್ಸ್ ಜಾರಿ

ಬಾಲಿವುಡ್ ಮಾಜಿ ನಟಿ ಟೀನಾ ಅಂಬಾನಿ(68) ಅವರಿಗೆ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ತನಿಖಾ ಸಂಸ್ಥೆ ಸೂಚಿಸಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಮತ್ತೊಮ್ಮೆ ಸಮನ್ಸ್ ಜಾರಿ ಮಾಡಲಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಅನಿಲ್ ಅಂಬಾನಿ, ಪತ್ನಿಗೆ EDಯಿಂದ ಹೊಸ ಸಮನ್ಸ್ ಜಾರಿ
ಪುತ್ರನ ಜತೆ ಅನಿಲ್ ಅಂಬಾನಿ ಹಾಗೂ ಟೀನಾ
Published On :

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ವಾರ ವಿಚಾರಣೆಗೆ ಹಾಜರಾಗುವಂತೆ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಮತ್ತು ಅವರ ಪತ್ನಿ ಟೀನಾ ಅಂಬಾನಿಗೆ ಅವರಿಗೆ ಜಾರಿ ನಿರ್ದೇಶನಾಲಯ ಹೊಸ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಬಾಲಿವುಡ್ ಮಾಜಿ ನಟಿ ಟೀನಾ ಅಂಬಾನಿ(68) ಅವರಿಗೆ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ತನಿಖಾ ಸಂಸ್ಥೆ ಸೂಚಿಸಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಮತ್ತೊಮ್ಮೆ ಸಮನ್ಸ್ ಜಾರಿ ಮಾಡಲಾಗಿದೆ.

ಫೆಬ್ರವರಿ 17 ರಂದು ಟೀನಾ ಅಂಬಾನಿಗೆ ಮತ್ತು ಫೆಬ್ರವರಿ 18 ರಂದು ಅನಿಲ್ ಅಂಬಾನಿ(66) ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅನಿಲ್ ಅಂಬಾನಿ ಮತ್ತು ಟೀನಾ ಅಂಬಾನಿ ಅವರು ವಿಚಾರಣೆಗೆ ಹಾಜರಾದರೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಅವರ ಹೇಳಿಕೆಗಳನ್ನು ದಾಖಲಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸಮನ್ಸ್‌ಗೆ ಸಂಬಂಧಿಸಿದಂತೆ ರಿಲಯನ್ಸ್ ಗ್ರೂಪ್‌ನಿಂದ ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ರಿಲಯನ್ಸ್ ಗ್ರೂಪ್‌ನ ಹಲವು ಕಂಪನಿಗಳು ಮತ್ತು ಅವರ ಬ್ಯಾಂಕ್ ಸಾಲಗಳಿಗೆ ಸಂಬಂಧಿಸಿದ ತನಿಖೆಯ ಭಾಗವಾಗಿ ಅನಿಲ್ ಅಂಬಾನಿಯನ್ನು ಕಳೆದ ವರ್ಷ ಒಮ್ಮೆ ಇಡಿ ವಿಚಾರಣೆಗೆ ಒಳಪಡಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.