ಡಾಲರ್ ಎದುರು ರೂಪಾಯಿ ಮತ್ತಷ್ಟು ದುರ್ಬಲ: ಚಿನ್ನ-ಬೆಳ್ಳಿ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ!
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,46,400 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,59,226 ರುಪಾಯಿ ಆಗಿದೆ.

ಮುಂಬೈ: ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಮತ್ತಷ್ಟು ದುರ್ಬಲ ಮತ್ತು ಫೆಡರಲ್ ರಿಸರ್ವ್ ಬ್ಯಾಂಕ್ ಬಡ್ಡಿದರ ಕಡಿತದ ನಿರೀಕ್ಷೆಗಳ ಮಧ್ಯೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಶುಕ್ರವಾರ ಚಿನ್ನ ಮತ್ತು ಬೆಳ್ಳಿ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ.
ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್(MCX)ನಲ್ಲಿ, ಬೆಳ್ಳಯ ಮಾರ್ಚ್ ಒಪ್ಪಂದವು 12,638 ರೂ. ಅಥವಾ ಸುಮಾರು ಶೇ. 4 ರಷ್ಟು ಏರಿಕೆಯಾಗಿ, ಪ್ರತಿ ಕೆಜಿಗೆ 3,39,927 ರೂ.ಗಳ ಹೊಸ ಗರಿಷ್ಠ ಮಟ್ಟವನ್ನು ತಲುಪಿದೆ. ಬುಧವಾರದ ಹಿಂದಿನ ವಹಿವಾಟಿನಲ್ಲಿ ಬೆಳ್ಳಿ ಪ್ರತಿ ಕೆಜಿಗೆ 3,35,521 ರೂ.ಗಳ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿತ್ತು.
ಇನ್ನೂ ಚಿನ್ನದ ಬೆಲೆ ಸಹ ಸತತ ಐದನೇ ದಿನವೂ ಹೆಚ್ಚಾಗಿದ್ದು, ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಫೆಬ್ರವರಿ ವಿತರಣೆಗೆ ಚಿನ್ನವು MCX ನಲ್ಲಿ 10 ಗ್ರಾಂಗೆ 2,885 ರೂ. ಅಥವಾ ಶೇಕಡಾ 1.84 ಏರಿಕೆಯಾಗಿ 1,59,226 ರೂ.ಗೆ ತಲುಪಿದೆ. ಗುರುವಾರ ಅದು 10 ಗ್ರಾಂಗೆ 1,56,341 ರೂ.ಗಳಲ್ಲಿ ಸ್ಥಿರವಾಗಿತ್ತು.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,46,400 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,59,226 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 34,000 ರುಪಾಯಿ ಇದೆ.
ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,46,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 34,000 ರುಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಬೆಳ್ಳಿ ಬೆಲೆ 36,000 ರೂ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



