ಶೀಘ್ರದಲ್ಲೇ ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆ? ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?
ಈಗ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ಕುಸಿದಿವೆ. ಆದರೆ ಕಂಪನಿಗಳು ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಸಂದರ್ಭದಲ್ಲಿ ಖರೀದಿಸಿದ ಕಚ್ಚಾ ತೈಲವನ್ನು ಇನ್ನೂ ಸಂಸ್ಕರಿಸುತ್ತಿವೆ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ನವದೆಹಲಿ: ಅಮೆರಿಕ-ಇರಾನ್ ನಡುವಿನ 107 ದಿನಗಳ ಯುದ್ಧ ಕೊನೆಗೂ ಅಂತ್ಯವಾಗಿದ್ದು, ಉಭಯ ದೇಶಗಳು ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಹೀಗಾಗಿ ಶೀಘ್ರದಲ್ಲೇ ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆ ಸಾಧ್ಯತೆ ಇದೆ.
ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಜಾಗತಿಕ ಕಚ್ಚಾ ತೈಲ ಬೆಲೆಗಳು ಏರಿಕೆಯಾದಾಗ, ತೈಲ ಮಾರುಕಟ್ಟೆ ಕಂಪನಿಗಳು ತಮ್ಮ ಬೆಲೆಗಿಂತ ಕಡಿಮೆ ಬೆಲೆಗೆ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿಯನ್ನು ಮಾರಾಟ ಮಾಡಿದ್ದರಿಂದ, ಏಪ್ರಿಲ್ನಿಂದ ಜೂನ್ 30ರ ವರೆಗೆ 74,781 ಕೋಟಿ ರೂ. ನಷ್ಟ ಅನುಭವಿಸಿವೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಗುರುವಾರ ಹೇಳಿದ್ದಾರೆ.
ಈಗ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ಕುಸಿದಿವೆ. ಆದರೆ ಕಂಪನಿಗಳು ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಸಂದರ್ಭದಲ್ಲಿ ಖರೀದಿಸಿದ ಕಚ್ಚಾ ತೈಲವನ್ನು ಇನ್ನೂ ಸಂಸ್ಕರಿಸುತ್ತಿವೆ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗುತ್ತದೆಯೇ ಎಂದು ಕೇಳಿದಾಗ, ಮುಂದಿನ ಕೆಲವು ವಾರಗಳವರೆಗೆ ಕಚ್ಚಾ ತೈಲ ಬೆಲೆಗಳು ಹೀಗೆಯೇ ಕುಸಿದರೆ, ದೇಶದಲ್ಲಿನ ಇಂಧನ ದರಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ ಎಂದು ಪರೋಕ್ಷವಾಗಿ ಇಳಿಸುವ ಸೂಚನೆ ನೀಡಿದರು.
"ನಾವು ಎರಡು ತಿಂಗಳ ಹಿಂದೆ ಖರೀದಿಸಿದ ಕಚ್ಚಾ ಪೆಟ್ರೋಲಿಯಂ ಸ್ಟಾಕ್ ಅನ್ನು ಇಂದು ಬಳಸುತ್ತಿದ್ದೇವೆ(ಎರಡು ತಿಂಗಳ ಹಿಂದೆ ಇದ್ದ ಬೆಲೆಯಲ್ಲಿ). ಆ ಸಮಯದಲ್ಲಿ ಅಂತಾರಾಷ್ಟ್ರೀಯ ತೈಲ ಬೆಲೆ ಮತ್ತು ಸಾರಿಗೆ ವೆಚ್ಚಗಳು ಗಗನಕ್ಕೇರಿದ್ದವು ಮತ್ತು ಈಗಲೂ ಅದರ ಎಫೆಕ್ಟ್ ಮುಂದುವರೆದಿದೆ ಎಂದರು.
ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ ಶೇ.20 ರಷ್ಟು ಮತ್ತು ಭಾರತದ ನೆರೆಯ ರಾಷ್ಟ್ರಗಳಲ್ಲಿ ಶೇ.35 ರಷ್ಟು ಹೆಚ್ಚಿಸಲಾಗಿತ್ತು ಎಂದು ಎತ್ತಿ ತೋರಿಸಿದ ಸಚಿವರು. ಭಾರತದಲ್ಲಿ ಮಾತ್ರ ಬಿಕ್ಕಟ್ಟಿನ ಸಂದರ್ಭದಲ್ಲೂ ಪೆಟ್ರೋಲ್ ಬೆಲೆ ಏರಿಕೆ ಕೇವಲ ಶೇ.5.58 ರಷ್ಟಿತ್ತು ಎಂದಿದ್ದಾರೆ.
ಜಾಗತಿಕವಾಗಿ ತೈಲ ಪೂರೈಕೆಯಲ್ಲಿ ಸಾಕಷ್ಟು ವ್ಯತ್ಯಯ ಉಂಟಾದರೂ ಭಾರತದಲ್ಲಿ ಮಾತ್ರ ಇಂಧನ ಪೂರೈಕೆಯಲ್ಲಿ ಯಾವುದೇ ಅಡಚಣೆ ಎದುರಾಗಲಿಲ್ಲ ಎಂದು ಒತ್ತಿ ಹೇಳಿದರು. ವಿವಿಧ ದೇಶಗಳಿಂದ ಕಚ್ಚಾ ತೈಲ, ಪೆಟ್ರೋಲ್-ಡೀಸೆಲ್ ಮತ್ತು ಎಲ್‌ಪಿಜಿ ಅನಿಲವನ್ನು ಮುಂಚಿತವಾಗಿಯೇ ಶೇಖರಣೆ ಮಾಡಿಟ್ಟುಕೊಂಡಿದ್ದರಿಂದ ಪೂರೈಕೆ ನಿರಂತರವಾಗಿ ನಡೆಯುತ್ತಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



