US-Iran ವಾರ್ ಎಫೆಕ್ಟ್: ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಹೆಚ್ಚಳ; ಜೂನ್ ನಂತರ ಸಾರ್ವಕಾಲಿಕ ಏರಿಕೆ!
ಯುನೈಟೆಡ್ ಸ್ಟೇಟ್ಸ್‌ನೊಂದಿಗಿನ ಯುದ್ಧ ಪುನರಾರಂಭವಾದ ನಂತರ ಇರಾನ್ ಮಂಗಳವಾರ ಮತ್ತೆ ಮಧ್ಯಪ್ರಾಚ್ಯದಲ್ಲಿ ತನ್ನ ದಾಳಿಯನ್ನು ಮತ್ತಷ್ಚು ಹೆಚ್ಚಿಸಿದೆ.

ಲಂಡನ್: ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ಮತ್ತೆ ಹೆಚ್ಚುತ್ತಿದ್ದು, ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ಮುಂದುವರೆದ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ(Crude Oil) ಬೆಲೆ ಭಾರಿ ಜಿಗಿತ ಕಂಡಿದೆ.
ಅಂತರರಾಷ್ಟ್ರೀಯ ಮಾನದಂಡವಾಗಿರುವ ಬ್ರೆಂಟ್ ಕಚ್ಚಾ ತೈಲ ಬೆಲೆಯು ಶೇ, 1.2 ರಷ್ಚು ಹೆಚ್ಚು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ಗೆ 92.09 ಡಾಲರ್‌ಗೆ(8,800 ರೂ.) ತಲುಪಿದೆ. ಇದು ಜೂನ್ ತಿಂಗಳ ಬಳಿಕ ದಾಖಲಾದ ಸಾರ್ವಕಾಲಿಕ ಹೆಚ್ಚಳವಾಗಿದೆ.
ಯುಎಸ್‌ನ ಪ್ರಮುಖ ತೈಲ ಮಾನದಂಡವಾದ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್(ಡಬ್ಲ್ಯೂಟಿಐ) ಬೆಲೆ ಸಹ ಶೇ. 1.1 ರಷ್ಟು ಏರಿಕೆಯಾಗಿ 85.23 ಡಾಲರ್ ಗೆ ತಲುಪಿದೆ.
ಯುನೈಟೆಡ್ ಸ್ಟೇಟ್ಸ್‌ನೊಂದಿಗಿನ ಯುದ್ಧ ಪುನರಾರಂಭವಾದ ನಂತರ ಇರಾನ್ ಮಂಗಳವಾರ ಮತ್ತೆ ಮಧ್ಯಪ್ರಾಚ್ಯದಲ್ಲಿ ತನ್ನ ದಾಳಿಯನ್ನು ಮತ್ತಷ್ಚು ಹೆಚ್ಚಿಸಿದೆ.
ಅಲ್ಲದೆ ಜಗತ್ತಿನ ಸುಮಾರು ಶೇ. 20 ರಷ್ಚು ತೈಲ ಸಾಗಣೆಯಾಗುವ ಪ್ರಮುಖ ಸಮುದ್ರ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ತೈಲ ಟ್ಯಾಂಕರ್‌ಗಳನ್ನು ತಡೆದು ದಾಳಿ ನಡೆಸಿದೆ.
ಅಮೆರಿಕದ ಸೇನಾ ನೆಲೆಗಳು ಹಾಗೂ ರೇಡಾರ್ ಕೇಂದ್ರಗಳನ್ನು ಗುರಿಯಾಗಿಸಿ ಇರಾನ್, ಸರಣಿ ದಾಳಿ ನಡೆಸಿದ್ದು, ಪ್ರತಿಯಾಗಿ ಅಮೆರಿಕ ಕೂಡ ಇರಾನ್ ಆಸ್ತಿಗಳ ಮೇಲೆ ಬಾಂಬ್ ದಾಳಿ ನಡೆಸಿದೆ. ಇದರಿಂದಾಗಿ ಜಾಗತಿಕ ತೈಲ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗುವ ಭೀತಿ ಎದುರಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



