ವಾಣಿಜ್ಯ

ಮಧ್ಯಪ್ರಾಚ್ಯ ಉದ್ವಿಗ್ನ: ಗಗನಕ್ಕೇರಿದ ಕಚ್ಚಾ ತೈಲ ಬೆಲೆ; ಪ್ರತಿ ಬ್ಯಾರೆಲ್‌ಗೆ ದಾಖಲೆಯ 6,596 ರೂ ಗೆ ಹೆಚ್ಚಳ!

ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ, ಏಪ್ರಿಲ್ ವಿತರಣೆಗೆ ಕಚ್ಚಾ ತೈಲ ಬೆಲೆ 10,530 ಲಾಟ್‌ಗಳಲ್ಲಿ ಪ್ರತಿ ಬ್ಯಾರೆಲ್‌ಗೆ 504 ರೂ. ಅಥವಾ ಶೇ. 8.27 ರಷ್ಟು ಹೆಚ್ಚಾಗಿ 6,596 ರೂ.ಗೆ ವಹಿವಾಟು ನಡೆಸಿತು.

ಮಧ್ಯಪ್ರಾಚ್ಯ ಉದ್ವಿಗ್ನ: ಗಗನಕ್ಕೇರಿದ ಕಚ್ಚಾ ತೈಲ ಬೆಲೆ; ಪ್ರತಿ ಬ್ಯಾರೆಲ್‌ಗೆ ದಾಖಲೆಯ 6,596 ರೂ ಗೆ ಹೆಚ್ಚಳ!
ಸಾಂದರ್ಭಿಕ ಚಿತ್ರ
Published On :

ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸುತ್ತಿದ್ದು, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ ಹೆಚ್ಚುತ್ತಿದೆ. ಪರಿಣಾಮ ಸೋಮವಾರ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್ ಗೆ 504 ರೂ. ಏರಿಕೆಯಾಗಿ ಪ್ರತಿ ಬ್ಯಾರೆಲ್‌ಗೆ 6,596 ರೂ.ಗೆ ತಲುಪಿದೆ. ಇದು ಇದುವರೆಗಿನ ಗರಿಷ್ಠ ಮಟ್ಟವಾಗಿದೆ.

ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ, ಏಪ್ರಿಲ್ ವಿತರಣೆಗೆ ಕಚ್ಚಾ ತೈಲ ಬೆಲೆ 10,530 ಲಾಟ್‌ಗಳಲ್ಲಿ ಪ್ರತಿ ಬ್ಯಾರೆಲ್‌ಗೆ 504 ರೂ. ಅಥವಾ ಶೇ. 8.27 ರಷ್ಟು ಹೆಚ್ಚಾಗಿ 6,596 ರೂ.ಗೆ ವಹಿವಾಟು ನಡೆಸಿತು.

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಫ್ಯೂಚರ್ಸ್ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಹೆಚ್ಚಾಗಿವೆ ಎಂದು ವಿಶ್ಲೇಷಕರು ಹೇಳಿದ್ದಾರೆ.

ಜಾಗತಿಕವಾಗಿ, ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ ಕಚ್ಚಾ ತೈಲವು ಬ್ಯಾರೆಲ್‌ಗೆ ಶೇ 5.55 ಹೆಚ್ಚಳವಾಗಿ, 70.74 ಕ್ಕೆ ವಹಿವಾಟು ನಡೆಸುತ್ತಿದ್ದರೆ, ನ್ಯೂಯಾರ್ಕ್‌ನಲ್ಲಿ ಬ್ರೆಂಟ್ ಕಚ್ಚಾ ತೈಲವು ಶೇ. 5.86 ರಷ್ಟು ಏರಿಕೆಯಾಗಿ ಪ್ರತಿ ಬ್ಯಾರೆಲ್‌ಗೆ 77.14 ಡಾಲರ್‌ಗೆ ತಲುಪಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.