ವಾಣಿಜ್ಯ

ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರ ಶಾಕ್; ಇನ್ನುಮುಂದೆ ಉತ್ತಮ ಕ್ರೆಡಿಟ್ ಸ್ಕೋರ್ ಕಡ್ಡಾಯ!

ಆದಾಗ್ಯೂ, ಇದು ಅರ್ಜಿ ಸಲ್ಲಿಸಲು ಪೂರ್ವಭಾವಿ ಷರತ್ತು ಅಲ್ಲ ಮತ್ತು ಬ್ಯಾಂಕ್ ಖಾತೆ/ಕ್ರೆಡಿಟ್ ಇತಿಹಾಸವಿಲ್ಲದ ಅಭ್ಯರ್ಥಿಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರ ಶಾಕ್; ಇನ್ನುಮುಂದೆ ಉತ್ತಮ ಕ್ರೆಡಿಟ್ ಸ್ಕೋರ್ ಕಡ್ಡಾಯ!
ಬ್ಯಾಂಕಿಂಗ್ (ಸಾಂಕೇತಿಕ ಚಿತ್ರ) — online desk
Published On :

ನವದೆಹಲಿ: ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದ್ದು, ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಉದ್ಯೋಗ ಪಡೆಯಲು ಉತ್ತಮ ಕ್ರೆಡಿಟ್ ಸ್ಕೋರ್ ಕಾಯ್ದುಕೊಳ್ಳುವುದು ಕಡ್ಡಾಯ ಮಾಡಿದೆ. ಇದು ಸಾರ್ವಜನಿಕ ಹಣ ಹೊಂದಿರುವ ಉದ್ಯೋಗಿಗಳಲ್ಲಿ ಜವಾಬ್ದಾರಿಯುತ ಆರ್ಥಿಕ ನಡವಳಿಕೆಯನ್ನು ಉತ್ತೇಜಿಸುವ ಗುರಿ ಹೊಂದಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದೆ.

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ನಡೆಸುವ ಸಾಮಾನ್ಯ ನೇಮಕಾತಿ ಪ್ರಕ್ರಿಯೆ(CRP)ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು, ಬ್ಯಾಂಕುಗಳಿಗೆ ಸೇರುವ ಸಮಯದಲ್ಲಿ ಉತ್ತಮ ಕ್ರೆಡಿಟ್ ಸ್ಕೋರ್ ಕಾಯ್ದುಕೊಳ್ಳುವುದನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಕನಿಷ್ಠ ಕ್ರೆಡಿಟ್ ಸ್ಕೋರ್ ಬ್ಯಾಂಕುಗಳ ನೀತಿಯ ಪ್ರಕಾರ ಇರುತ್ತದೆ. ಇದನ್ನು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾಗುತ್ತದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಮಂಗಳವಾರ ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.

ಆದಾಗ್ಯೂ, ಇದು ಅರ್ಜಿ ಸಲ್ಲಿಸಲು ಪೂರ್ವಭಾವಿ ಷರತ್ತು ಅಲ್ಲ ಮತ್ತು ಬ್ಯಾಂಕ್ ಖಾತೆ/ಕ್ರೆಡಿಟ್ ಇತಿಹಾಸವಿಲ್ಲದ ಅಭ್ಯರ್ಥಿಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಈ ವಿಷಯದಲ್ಲಿ ಅಂತಿಮ ವಿವೇಚನೆಯು ಆಯ್ಕೆಯಾದ ಬ್ಯಾಂಕಿನ ಮೇಲಿದ್ದು, ಈ ಬ್ಯಾಂಕುಗಳ ವ್ಯವಹಾರ ಮತ್ತು ಸಾಮಾನ್ಯ ಮೇಲ್ವಿಚಾರಣೆ, ನಿರ್ದೇಶನ ಮತ್ತು ನಿರ್ವಹಣೆಯು ಅವುಗಳ ನಿರ್ದೇಶಕರ ಮಂಡಳಿ ನಿರ್ಧರಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.