ವಾಣಿಜ್ಯ

Gold Rate Today: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಇಂದಿನ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ..

ದೇಶೀಯ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮುಖ್ಯವಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಗಳ ಮೇಲೆ ಅವಲಂಬಿತವಾಗಿವೆ. ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆಗಳು ಹೆಚ್ಚಾದರೆ, ಇಲ್ಲಿಯೂ ಹೆಚ್ಚಾಗುತ್ತವೆ. ಅಲ್ಲಿ ಕಡಿಮೆಯಾದರೆ, ದೇಶೀಯವಾಗಿಯೂ ಇಳಿಕೆ ಕಂಡುಬರುತ್ತದೆ.

Gold Rate Today: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಇಂದಿನ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ..
ಸಂಗ್ರಹ ಚಿತ್ರ
Published On :

ಬೆಂಗಳೂರು: ಜಾಗತಿಕ ಮಾರುಕಟ್ಟೆಯ ಏರುಪೇರಿನ ನಡುವೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಗುರುವಾರ ಕೊಂಚ ಏರಿಕೆ ಕಂಡು ಬಂದಿದೆ. ಗುರುವಾರ ದರಗಳೊಂದಿಗೆ ಹೋಲಿಸಿದರೆ ಇಂದು ಪ್ರತಿ ಗ್ರಾಂಗೆ ರೂ.16 ಏರಿಕೆಯಾಗಿದೆ.

ಆಭರಣ ಪ್ರಿಯರು ಹಾಗೂ ಹೂಡಿಕೆದಾರರು ಪ್ರತಿದಿನ ಮಾರುಕಟ್ಟೆಯತ್ತ ಕಣ್ಣಿಟ್ಟಿರುತ್ತಾರೆ. ವಿಶೇಷವಾಗಿ, ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಖರೀದಿಗೆ ಕಾದು ಕುಳಿತಿರುತ್ತಾರೆ.

ದೇಶೀಯ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮುಖ್ಯವಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಗಳ ಮೇಲೆ ಅವಲಂಬಿತವಾಗಿವೆ. ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆಗಳು ಹೆಚ್ಚಾದರೆ, ಇಲ್ಲಿಯೂ ಹೆಚ್ಚಾಗುತ್ತವೆ. ಅಲ್ಲಿ ಕಡಿಮೆಯಾದರೆ, ದೇಶೀಯವಾಗಿಯೂ ಇಳಿಕೆ ಕಂಡುಬರುತ್ತದೆ.

ಬೆಂಗಳೂರಿನ ಇಂದಿನ ಚಿನ್ನದ ದರ (ಮಾರ್ಚ್ 27) ಬೆಂಗಳೂರು ನಗರದಲ್ಲಿ 24 ಕ್ಯಾರಟ್ ಚಿನ್ನದ ದರ ಪ್ರತಿ ಗ್ರಾಂ 14,471ರೂ. ಆಗಿದ್ದು, 10 ಗ್ರಾಂಗೆ ರೂ.1,44,710 ದಾಖಲಾಗಿದೆ. 100 ಗ್ರಾಂಗೆ ರೂ.14,47,100 ದರ ದಾಖಲಾಗಿದೆ.

ಇದೇ ವೇಳೆ 22 ಕ್ಯಾರಟ್ ಚಿನ್ನದ ದರ ಪ್ರತಿ ಗ್ರಾಂ ರೂ.13,265 ಆಗಿದ್ದು, 10 ಗ್ರಾಂಗೆ ರೂ.1,32,650 ತಲುಪಿದೆ. 100 ಗ್ರಾಂಗೆ ರೂ.13,26,500 ದರವಾಗಿದೆ. ಬೆಲೆಯಲ್ಲಿ ಸಣ್ಣ ಪ್ರಮಾಣದ ಇಳಿಕೆ ಕಂಡುಬಂದಿದೆ. ಪ್ರತಿ 10 ಗ್ರಾಂ ಬೆಳ್ಳಿ ದರ 2,400 ರೂ.ಕ್ಕೆ ಇಳಿಕೆಯಾಗದಿದ್ದು, ಪ್ರತಿ ಕಿಲೋಗೆ ರೂ.2,40,000 ತಲುಪಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 1,44,860 ರೂ.ಗಳಿದ್ದರೆ, 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 1,32,800 ರೂ.ಗಳಿದೆ.

ಮುಂಬೈನಲ್ಲಿ 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 1,44,710 ರೂ.ಗಳಿದ್ದರೆ, 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 1,32,650 ರೂ.ಗಳಿದೆ.

ಅದೇ ರೀತಿ, ಚೆನ್ನೈನಲ್ಲಿ 10 ಗ್ರಾಂ ಚಿನ್ನದ ಬೆಲೆ 1,46,510 ರೂ.ಗಳಿದ್ದರೆ, 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 1,34,300 ರೂ.ಗಳಿದೆ.

ಹೈದರಾಬಾದ್‌ನಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,44,710 ಆಗಿದ್ದರೆ, 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,32,650 ನಲ್ಲಿ ಮುಂದುವರೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.