ವಾಣಿಜ್ಯ

ಇತಿಹಾಸದಲ್ಲೇ ಮೊದಲ ಬಾರಿಗೆ ಡಾಲರ್ ಎದುರು 95ಕ್ಕೆ ಕುಸಿದ ರೂಪಾಯಿ ಮೌಲ್ಯ!

ಇಂದು ಮಧ್ಯಾಹ್ನ 3 ಗಂಟೆಯ ವೇಳೆಗೆ ಪ್ರತಿ ಡಾಲರ್‌ ಗೆ 95.13 ರೂ.ನಲ್ಲಿ ವ್ಯವಹಾರ ನಡೆಸುತ್ತಿತ್ತು. ಡಾಲರ್‌ ಮುಂದೆ ರೂಪಾಯಿ ಮೌಲ್ಯ 95 ಡಾಲರ್‌ಗೆ ಕುಸಿದಿರುವುದು ಇದೇ ಮೊದಲು.

ಇತಿಹಾಸದಲ್ಲೇ ಮೊದಲ ಬಾರಿಗೆ ಡಾಲರ್ ಎದುರು 95ಕ್ಕೆ ಕುಸಿದ ರೂಪಾಯಿ ಮೌಲ್ಯ!
ಡಾಲರ್ - ರೂಪಾಯಿ
Published On :

ಮುಂಬೈ: ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕದ ಡಾಲರ್ ಎದುರು ತೀವ್ರ ಕನಿಷ್ಠ ಮಟ್ಟಕ್ಕೆ ಕುಸಿದಿದ್ದು, ಸೋಮವಾರ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯವು 95ರ ಗಡಿ ದಾಟಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಎಲ್ಲಾ ಬ್ಯಾಂಕುಗಳು ರಾತ್ರಿಯಿಡೀ ಇರಿಸಬಹುದಾದ ನಿವ್ವಳ ಆರಂಭಿಕ ಸ್ಥಾನ, NOP-INR ಗರಿಷ್ಠ 100 ಮಿಲಿಯನ್ ಡಾಲರ್‌ಗೆ ಮಿತಿಗೊಳಿಸಬೇಕು ಎಂದು ನಿರ್ದೇಶನ ನೀಡಿತ್ತು.

ಪರಿಣಾಮ ಇಂದು ರೂಪಾಯಿ ಮೌಲ್ಯ ಬೆಳಗ್ಗೆ ಸುಮಾರು 1 ರೂಪಾಯಿ 30 ಪೈಸೆ ಏರಿಕೆಯಾಗಿ 93.59 ಕ್ಕೆ ತಲುಪಿತ್ತು. ಬೆಳಗ್ಗೆ ಏರಿಕೆಯಾಗಿದ್ದರೆ ನಂತರ ರೂಪಾಯಿ ಮೌಲ್ಯ ಕುಸಿಯಲು ಆರಂಭವಾಯಿತು.

ಮಧ್ಯಾಹ್ನ 3 ಗಂಟೆಯ ವೇಳೆಗೆ ಪ್ರತಿ ಡಾಲರ್‌ ಗೆ 95.13 ರೂ.ನಲ್ಲಿ ವ್ಯವಹಾರ ನಡೆಸುತ್ತಿತ್ತು. ಡಾಲರ್‌ ಮುಂದೆ ರೂಪಾಯಿ ಮೌಲ್ಯ 95 ಡಾಲರ್‌ಗೆ ಕುಸಿದಿರುವುದು ಇದೇ ಮೊದಲು.

ಈ ಭಾರಿ ಕುಸಿತಕ್ಕೆ ಪ್ರಮುಖವಾಗಿ ವಿದೇಶಿ ಪೋರ್ಟ್‌ಫೋಲಿಯೋ ಹೂಡಿಕೆದಾರರು ಭಾರತೀಯ ಮಾರುಕಟ್ಟೆಯಿಂದ ಸತತವಾಗಿ ಹಣವನ್ನು ಹಿಂತೆಗೆದುಕೊಳ್ಳುತ್ತಿರುವುದು (FPI Outflow) ಪ್ರಮುಖ ಕಾರಣವಾಗಿದೆ. ಇದರೊಂದಿಗೆ ಮಧ್ಯಪ್ರಾಚ್ಯ ಉದ್ವಿಗ್ನತೆಯಿಂದಾಗಿ ಕಚ್ಚಾ ತೈಲ ಬೆಲೆ ಏರಿಕೆಯಾಗಿರುವುದು ಭಾರತದ ಆಮದು ವೆಚ್ಚವನ್ನು ದುಬಾರಿಯಾಗಿಸಿದೆ. ರೂಪಾಯಿ ಮೌಲ್ಯದ ಇಳಿಕೆ ಮತ್ತು ಆಮದು ವೆಚ್ಚದ ಏರಿಕೆಯ 'ಡಬಲ್ ಎಫೆಕ್ಟ್'ನಿಂದಾಗಿ ಭಾರತದ ವಿದೇಶಿ ವಿನಿಮಯ ಮಾರುಕಟ್ಟೆಯ ಮೇಲೆ ಭಾರಿ ಒತ್ತಡ ಉಂಟಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.