Indian Stock Market: ಸತತ 2ನೇ ದಿನವೂ ಭಾರಿ ಕುಸಿತ; ಹೂಡಿಕೆದಾರರ 11 ಲಕ್ಷ ಕೋಟಿ ರೂ ನಷ್ಟ; ಕನಿಷ್ಠ ರೂಪಾಯಿ ಮೌಲ್ಯ ಮಟ್ಟಕ್ಕೆ
ಮಂಗಳವಾರ ಭಾರತೀಯ ಷೇರುಮಾರುಕಟ್ಟೆ ಭಾರಿ ಪ್ರಮಾಣದ ಕುಸಿತ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.

ಮುಂಬೈ: ಸತತ 2ನೇ ದಿನವೂ ಭಾರತೀಯ ಷೇರುಮಾರುಕಟ್ಟೆ ಭಾರಿ ಕುಸಿತ ಕಂಡಿದ್ದು, ಮಂಗಳವಾರ ಹೂಡಿಕೆದಾರರ ಬರೊಬ್ಬರಿ 11 ಲಕ್ಷ ಕೋಟಿ ರೂ ಹೂಡಿಕೆ ನಷ್ಟವಾಗಿದೆ.
ಮಂಗಳವಾರ ಭಾರತೀಯ ಷೇರುಮಾರುಕಟ್ಟೆ ಭಾರಿ ಪ್ರಮಾಣದ ಕುಸಿತ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ. ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.1.92ರಷ್ಟು ಇಳಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.1.83ರಷ್ಟು ಇಳಿಕೆ ದಾಖಲಿಸಿದೆ.
ಸೆನ್ಸೆಕ್ಸ್ ಇಂದು ಬರೊಬ್ಬರಿ 1,456.04 ಅಂಕಗಳ ಇಳಿಕೆಯೊಂದಿಗೆ 74,559.24 ಅಂಕಗಳಿಗೆ ಕುಸಿತವಾಗಿದ್ದರೆ, ನಿಫ್ಟಿ 436.30ಅಂಕಗಳ ಇಳಿಕೆಯೊಂದಿಗೆ 23,379.55 ಅಂಕಗಳಿಗೆ ಕುಸಿತವಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಐಟಿ, ರಿಯಾಲ್ಟಿ, ಗ್ರಾಹಕ ಬಾಳಿಕೆ ಬರುವ ಮತ್ತು ಹಣಕಾಸು ಷೇರುಗಳು ಭಾರಿ ಕುಸಿತ ಕಂಡಿವೆ.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಟೆಕ್ ಮಹೀಂದ್ರಾ, ಅದಾನಿ ಪೋರ್ಟ್ಸ್, ಎಚ್‌ಸಿಎಲ್ ಟೆಕ್, ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, ಟೈಟಾನ್ ಮತ್ತು ಭಾರತ್ ಎಲೆಕ್ಟ್ರಾನಿಕ್ಸ್ ಷೇರುಗಳು ನಷ್ಟ ಕಂಡಿದೆ. ಅಂತೆಯೇ ಇಂದಿನ ವಹಿವಾಟಿನಲ್ಲಿ ಲಾಭಾಂಶ ಗಳಿಸಿದ ಏಕೈಕ ಸಂಸ್ಥೆ ಎಂದರೆ ಎಸ್ ಬಿಎ ಮಾತ್ರ ಎಂದು ವರದಿಯಾಗಿದೆ.
ಹೂಡಿಕೆದಾರರ 11 ಲಕ್ಷ ಕೋಟಿ ರೂ. ನಷ್ಟ
ಸೋಮವಾರದ ವಹಿವಾಟು ಮುಕ್ತಾಯದ ವೇಳೆಗೆ, ಒಟ್ಟು ಬಿಎಸ್‌ಇ ಸೆನ್ಸೆಕ್ಸ್ ಮಾರುಕಟ್ಟೆ ಬಂಡವಾಳೀಕರಣವು 4,67,30,829 ರೂ.ಗಳಷ್ಟಿತ್ತು. ಆದರೆ, ಮಂಗಳವಾರದ ಮುಕ್ತಾಯದ ವೇಳೆಗೆ ಅದು 4,56,99,946 ರೂ.ಗಳಿಗೆ ಕುಸಿದಿದೆ. ಆ ಮೂಲಕ ಹೂಡಿಕೆದಾರರ 11 ಲಕ್ಷ ಕೋಟಿ ರೂ ಬಂಡವಾಳ ನಷ್ಟವಾಗಿದೆ.
ಕಚ್ಚಾತೈಲ ಬೆಲೆ ಏರಿಕೆ, ರೂಪಾಯಿ ಮೌಲ್ಯ ಕುಸಿತ
ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲವು ಬ್ಯಾರೆಲ್‌ಗೆ 2.75 ಪ್ರತಿಶತದಷ್ಟು ಏರಿಕೆಯಾಗಿ 107.1 ಡಾಲರ್‌ಗೆ ವಹಿವಾಟು ನಡೆಸುತ್ತಿದೆ. ಅಂತೆಯೇ ಮಂಗಳವಾರ ಯುಎಸ್ ಡಾಲರ್ ವಿರುದ್ಧ ರೂಪಾಯಿ ಮೌಲ್ಯ 35 ಪೈಸೆ ಕುಸಿತ ಕಂಡು 95.63 (ತಾತ್ಕಾಲಿಕ) ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ತಲುಪಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



