ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಮಧ್ಯೆ ರೂಪಾಯಿ ಮೌಲ್ಯ ಮತ್ತೆ ಕುಸಿತ; ಇದು ಸಾರ್ವಕಾಲಿಕ ಪತನ!
ಸರ್ಕಾರ ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು ಹೆಚ್ಚಿಸಿ ರೂಪಾಯಿ ಮೌಲಿನ ಒತ್ತಡವನ್ನು ತಗ್ಗಿಸಿದ್ದರೂ, ಕಚ್ಚಾ ತೈಲ ಬೆಲೆ ಏರಿಕೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದ ರೂಪಾಯಿ ಮೇಲಿನ ಒತ್ತಡ ಹೆಚ್ಚಾಗಿದೆ.

ಮುಂಬೈ: ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕದ ಡಾಲರ್ ಎದುರು ಮತ್ತೆ ಕನಿಷ್ಠ ಮಟ್ಟಕ್ಕೆ ಕುಸಿದಿದ್ದು, ಬುಧವಾರ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯವು 95ರ ಗಡಿ ದಾಟಿದೆ.
ಕಚ್ಚಾ ತೈಲ ಬೆಲೆ ಏರಿಕೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಮಧ್ಯೆ ದೀರ್ಘಕಾಲದ ಜಾಗತಿಕ ವ್ಯಾಪಾರ ಅಡಚಣೆಯ ಆತಂಕದಿಂದಾಗಿ ಇಂದು ಸತತ ನಾಲ್ಕನೇ ಸೆಷನ್ಸ್ ನಲ್ಲೂ ದುರ್ಬಲಗೊಂಡ ರೂಪಾಯಿ, ಅಮೆರಿಕದ ಡಾಲರ್ ವಿರುದ್ಧ 95.80ರ ಕನಿಷ್ಠ ಮಟ್ಟವನ್ನು ತಲುಪಿದೆ.
ವಿದೇಶಿ ವಿನಿಮಯ ವಿಶ್ಲೇಷಕರ ಪ್ರಕಾರ, ಸರ್ಕಾರ ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು ಹೆಚ್ಚಿಸಿ ರೂಪಾಯಿ ಮೌಲಿನ ಒತ್ತಡವನ್ನು ತಗ್ಗಿಸಿದ್ದರೂ, ಕಚ್ಚಾ ತೈಲ ಬೆಲೆ ಏರಿಕೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದ ರೂಪಾಯಿ ಮೇಲಿನ ಒತ್ತಡ ಹೆಚ್ಚಾಗಿದೆ.
ಮೇ 13 ರಿಂದ ಜಾರಿಗೆ ಬರುವಂತೆ, ಅಮೂಲ್ಯ ಲೋಹಗಳ ವಿದೇಶಿ ಖರೀದಿಯನ್ನು ಕಡಿಮೆ ಮಾಡಲು ಮತ್ತು ದೇಶದ ವಿದೇಶಿ ವಿನಿಮಯ ಮೀಸಲು ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಸರ್ಕಾರ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು ಶೇಕಡಾ 6 ರಿಂದ 15 ಕ್ಕೆ ಹೆಚ್ಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



