ಮತ್ತೆ ಗ್ರಾಹಕರಿಗೆ ಶಾಕ್: ಪೆಟ್ರೋಲ್, ಡೀಸೆಲ್ ದರ 90 ಪೈಸೆ ಹೆಚ್ಚಳ; 5 ದಿನದಲ್ಲಿ ಎರಡನೇ ಬಾರಿ ಏರಿಕೆ
ಇದಕ್ಕೂ ಮೊದಲು ಮೇ 15ರಂದು ಲೀಟರ್‌ಗೆ 3ರೂಪಾಯಿ ದರ ಏರಿಕೆ ಮಾಡಲಾಗಿತ್ತು.

ನವದೆಹಲಿ: ಇರಾನ್ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ ಸರ್ಕಾರ ಹೆಚ್ಚಿಸಿದ್ದು, ಇಂದು ಮಂಗಳವಾರ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ ಸುಮಾರು 90 ಪೈಸೆಯಷ್ಟು ಏರಿಸಿವೆ.
ದೆಹಲಿಯಲ್ಲಿ ಪೆಟ್ರೋಲ್ ದರವನ್ನು ಲೀಟರ್‌ಗೆ 97.77ರೂಪಾಯಿಯಿಂದ 98.64 ರೂಪಾಯಿಗೆ ಹೆಚ್ಚಿಸಲಾಗಿದ್ದು, ಡೀಸೆಲ್ ದರವು 90.67 ರೂಪಾಯಿಯಿಂದ 91.58 ರೂಪಾಯಿಗೆ ಏರಿಕೆಯಾಗಿದೆ.
ಇದಕ್ಕೂ ಮೊದಲು ಮೇ 15ರಂದು ಲೀಟರ್‌ಗೆ 3ರೂಪಾಯಿ ದರ ಏರಿಕೆ ಮಾಡಲಾಗಿತ್ತು.
ಮುಂಬೈನಲ್ಲಿ ಪೆಟ್ರೋಲ್ ದರವು 91 ಪೈಸೆ ಏರಿಕೆಯಾಗಿ ಲೀಟರ್‌ಗೆ 107.59 ರೂಪಾಯಿಗೆ ತಲುಪಿದರೆ, ಡೀಸೆಲ್ ದರವು 94 ಪೈಸೆ ಏರಿಕೆಯಾಗಿ 94.08 ರೂಪಾಯಿಗೆ ತಲುಪಿದೆ.
ಕೊಲ್ಕತ್ತಾದಲ್ಲಿ ಪೆಟ್ರೋಲ್ ದರದಲ್ಲಿ ಅತಿ ಹೆಚ್ಚು ಏರಿಕೆ ದಾಖಲಾಗಿದ್ದು, ದರವು 96 ಪೈಸೆ ಏರಿಕೆಯಾಗಿ ಲೀಟರ್‌ಗೆ 109.70 ರೂಪಾಯಿಗೆ ತಲುಪಿದೆ. ಅಲ್ಲಿನ ಡೀಸೆಲ್ ದರವು 94 ಪೈಸೆ ಏರಿಕೆಯಾಗಿ 96.07 ರೂಪಾಯಿಗೆ ತಲುಪಿದೆ.
ಚೆನ್ನೈನಲ್ಲಿ ಪೆಟ್ರೋಲ್ ದರವು 82 ಪೈಸೆ ಏರಿಕೆಯಾಗಿ ಲೀಟರ್‌ಗೆ 104.49 ರೂಪಾಯಿಗೆ ತಲುಪಿದರೆ, ಡೀಸೆಲ್ ದರವು 86 ಪೈಸೆ ಏರಿಕೆಯಾಗಿ 96.11 ರೂಪಾಯಿಗೆ ಏರಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



