Indian Stock Market: Sensex 135 ಅಂಕ ಇಳಿಕೆ; ರೂಪಾಯಿ ಮೌಲ್ಯ ಚೇತರಿಕೆ
ಸೆನ್ಸೆಕ್ಸ್ ಇಂದು 135.03ಅಂಕಗಳ ಇಳಿಕೆಯೊಂದಿಗೆ 75,183.36 ಅಂಕಗಳಿಗೆ ಇಳಿಕೆಯಾಗಿದ್ದರೆ, ನಿಫ್ಟಿ 4.30 ಅಂಕಗಳ ಇಳಿಕೆಯೊಂದಿಗೆ 23,654.70 ಅಂಕಗಳಿಗೆ ಕುಸಿತವಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.

ಮುಂಬೈ: ಮಧ್ಯ ಪ್ರಾಚ್ಯ ಸಂಘರ್ಷ ಮುಂದುವರೆದಿರುವಂತೆಯೇ ಭಾರತೀಯ ಷೇರುಮಾರುಕಟ್ಟೆ ಇಂದು ಅಲ್ಪ ಪ್ರಮಾಣದ ಕುಸಿತ ಕಂಡಿದ್ದು, ಗುರುವಾರವೂ ಷೇರುಮಾರುಕಟ್ಟೆ ಸೂಚ್ಯಂಕಗಳಾದ ನಿಫ್ಟಿ ಮತ್ತು ಸೆನ್ಸೆಕ್ಸ್ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.18ರಷ್ಟು ಇಳಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.018ರಷ್ಟು ಇಳಿಕೆ ದಾಖಲಿಸಿದೆ. ಸೆನ್ಸೆಕ್ಸ್ ಇಂದು 135.03ಅಂಕಗಳ ಇಳಿಕೆಯೊಂದಿಗೆ 75,183.36 ಅಂಕಗಳಿಗೆ ಇಳಿಕೆಯಾಗಿದ್ದರೆ, ನಿಫ್ಟಿ 4.30 ಅಂಕಗಳ ಇಳಿಕೆಯೊಂದಿಗೆ 23,654.70 ಅಂಕಗಳಿಗೆ ಕುಸಿತವಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಹೆಲ್ತ್ ಕೇರ್ ಮತ್ತು ಆಟೋ ವಲಯದ ಷೇರುಗಳ ಮೌಲ್ಯ ಭಾರಿ ಪ್ರಮಾಣದಲ್ಲಿ ಕುಸಿತವಾಗಿದ್ದು, ಇದಲ್ಲದೆ ಐಟಿ, ಫೈನಾನ್ಸ್ ಮತ್ತು ಎಫ್ ಎಂಸಿಜಿ ವಲಯದ ಷೇರುಗಳೂ ಕೂಡ ಕುಸಿತಕಂಡಿವೆ.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ನಿಫ್ಟಿಯಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ FSN ಇ-ಕಾಮರ್ಸ್ ವೆಂಚರ್ಸ್ ಲಿಮಿಟೆಡ್, ಇಂಟರ್‌ಗ್ಲೋಬ್ ಏವಿಯೇಷನ್ ಲಿಮಿಟೆಡ್, ಟ್ರೆಂಟ್ ಲಿಮಿಟೆಡ್, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್ ಮತ್ತು ಅದಾನಿ ಪೋರ್ಟ್ಸ್ ಮತ್ತು ಸ್ಪೆಷಲ್ ಎಕನಾಮಿಕ್ ಝೋನ್ ಲಿಮಿಟೆಡ್ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದೆ.
ಅಂತೆಯೇ ಬಜಾಜ್ ಫೈನಾನ್ಸ್, ಇನ್ಫೋಸಿಸ್, ಟೆಕ್ ಮಹೀಂದ್ರಾ, ಹಿಂದೂಸ್ತಾನ್ ಯೂನಿಲಿವರ್, ಬಜಾಜ್ ಫಿನ್‌ಸರ್ವ್, ಭಾರ್ತಿ ಏರ್‌ಟೆಲ್ ಮತ್ತು ಎನ್‌ಟಿಪಿಸಿ ಸಂಸ್ಥೆಯ ಷೇರುಗಳು ನಷ್ಟ ಕಂಡಿವೆ.
ರೂಪಾಯಿ ಮೌಲ್ಯ ಚೇತರಿಕೆ
ಇನ್ನು ದಾಖಲೆಯ ಮಟ್ಟಕ್ಕೆ ಕುಸಿದಿದ್ದ ರೂಪಾಯಿ ಮೌಲ್ಯ ಇಂದು 49 ಪೈಸೆಯಷ್ಟು ಏರಿಕೆಯಾಗಿದ್ದು, ಪ್ರತೀ ಡಾಲರ್ ಎದುರು 96.37ರೂಗೆ ಏರಿಕೆಯಾಗಿದೆ.
ಭೌಗೋಳಿಕ ರಾಜಕೀಯ ಘರ್ಷಣೆ ಕಡಿಮೆಯಾಗುವ ಲಕ್ಷಣಗಳು ಮತ್ತು ಕೇಂದ್ರೀಯ ಬ್ಯಾಂಕಿನ ಹಸ್ತಕ್ಷೇಪದ ಸಾಧ್ಯತೆಯ ನಡುವೆ ಕಚ್ಚಾ ತೈಲ ಬೆಲೆಗಳು ಏರಿಕೆಯಾದ ಮಟ್ಟದಿಂದ ಹಿಮ್ಮೆಟ್ಟಿದಾಗ, ಗುರುವಾರ (ಮೇ 21, 2026) ರೂಪಾಯಿ ಮೌಲ್ಯವು ಸಾರ್ವಕಾಲಿಕ ಕನಿಷ್ಠ ಮಟ್ಟದಿಂದ 49 ಪೈಸೆ ಏರಿಕೆಯಾಗಿ ಯುಎಸ್ ಡಾಲರ್ ವಿರುದ್ಧ 96.37 ಕ್ಕೆ ಸ್ಥಿರವಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



