LPG ಗ್ರಾಹಕರಿಗೆ ಭರ್ಜರಿ ರಿಲೀಫ್: ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಕ್ಕೆ ಮತ್ತೊಂದು ಸಿಲಿಂಡರ್!
ಇರಾನ್ ಹಾಗೂ ಅಮೆರಿಕ ನಡುವಿನ ಯುದ್ದದ ಕಾವು ಸ್ವಲ್ಪ ಕಡಿಮೆ ಆಗಿದ್ದೇ ತಡ, ಕೇಂದ್ರ ಸರ್ಕಾರವು ಗ್ರಾಮೀಣ ಭಾಗದ ಗೃಹಬಳಕೆಯ ಎಲ್‌ಪಿಜಿ ಗ್ರಾಹಕರಿಗೆ ದೊಡ್ಡ ರಿಲೀಫ್ ನೀಡಿದ್ದು, ಎರಡು ಸಿಲಿಂಡರ್ ಬುಕಿಂಗ್ ನಡುವೆ ಇದ್ದ ಕಡ್ಡಾಯ 45 ದಿನಗಳ ಗಡುವನ್ನು 25 ದಿನಗಳಿಗೆ ಇಳಿಕೆ ಮಾಡಿದೆ. ಆ ಕುರಿತ ವರದಿ ಇಲ್ಲಿದೆ:

ನವದೆಹಲಿ: ಇರಾನ್ ಹಾಗೂ ಅಮೆರಿಕ ನಡುವಿನ ಯುದ್ದದ ಕಾವು ಸ್ವಲ್ಪ ಕಡಿಮೆ ಆಗಿದ್ದೇ ತಡ, ಕೇಂದ್ರ ಸರ್ಕಾರವು ಗ್ರಾಮೀಣ ಭಾಗದ ಗೃಹಬಳಕೆಯ ಎಲ್‌ಪಿಜಿ ಗ್ರಾಹಕರಿಗೆ ದೊಡ್ಡ ರಿಲೀಫ್ ನೀಡಿದ್ದು, ಎರಡು ಸಿಲಿಂಡರ್ ಬುಕಿಂಗ್ ನಡುವೆ ಇದ್ದ ಕಡ್ಡಾಯ 45 ದಿನಗಳ ಗಡುವನ್ನು 25 ದಿನಗಳಿಗೆ ಇಳಿಕೆ ಮಾಡಿ ಗುಡ್ ನ್ಯೂಸ್ ನೀಡಿದೆ. ಅದರಲ್ಲೂ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಇಂಡಿಯನ್ ಆಯಿಲ್, ಬಿಪಿಸಿಎಲ್ ಮತ್ತು ಎಚ್‌ಪಿಸಿಎಲ್ ನಂತಹ ತೈಲ ಮಾರಾಟ ಕಂಪನಿಗಳಿಗೆ ಈ ನಿಯಮವನ್ನು ತಕ್ಷಣದಿಂದಲೇ ಜಾರಿಗೆ ತರುವಂತೆ ಅಧಿಕೃತ ಆದೇಶ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:
2026 ರ ಮಾರ್ಚ್ ತಿಂಗಳಲ್ಲಿ ಮಧ್ಯಪ್ರಾಚ್ಯದಲ್ಲಿ ಅಮೆರಿಕ ಹಾಗೂ ಇರಾನ್ ನಡುವೆ ಉಂಟಾಗಿದ್ದ ಯುದ್ಧದ ಪರಿಣಾಮ ಹಾಗೂ ಹೊರ್ಮುಜ್ ಜಲಸಂಧಿಯ ದಿಗ್ಬಂಧನದಿಂದಾಗಿ ಜಾಗತಿಕವಾಗಿ ಇಂಧನ ಸರಬರಾಜಿನಲ್ಲಿ ಭಾರಿ ವ್ಯತ್ಯಯ ಉಂಟಾಗಿತ್ತು. ಹಾಗಾಗಿ, ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಅಕ್ರಮ ದಾಸ್ತಾನು ಮತ್ತು ದುರ್ಬಳಕೆಯನ್ನು ತಡೆಯಲು ಸರ್ಕಾರವು ಕಠಿಣ ನಿಯಮಗಳನ್ನು ಜಾರಿಗೆ ತಂದಿತ್ತು. ಈ ವೇಳೆ ನಗರ ಪ್ರದೇಶಗಳಲ್ಲಿ ಬುಕಿಂಗ್ ಅವಧಿಯನ್ನು 25 ದಿನಗಳಿಗೆ ಹಾಗೂ ಗ್ರಾಮೀಣ ಭಾಗಗಳಲ್ಲಿ 45 ದಿನಗಳಿಗೆ ಹೆಚ್ಚಿಸಲಾಗಿತ್ತು. ಇದರಿಂದಾಗಿ ಹಳ್ಳಿಗಳ ಜನರಿಗೆ ಹಾಗೂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ತೀವ್ರ ತೊಂದರೆಯಾಗಿತ್ತು. ಆದರೆ, ಪ್ರಸ್ತುತ ದೇಶದಲ್ಲಿ ಎಲ್‌ಪಿಜಿ ಪೂರೈಕೆ ಪರಿಸ್ಥಿತಿ ಸಂಪೂರ್ಣ ಸುಧಾರಿಸಿದೆ ಮತ್ತು ಸಿಲಿಂಡರ್ ರಿಫಿಲ್ ಬಾಕಿ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಹಾಗಾಗಿ ಸರ್ಕಾರವು ಗ್ರಾಮೀಣ ಪ್ರದೇಶದ ನಿಯಮವನ್ನು ಸಡಿಲಗೊಳಿಸಿದೆ.
ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಅವರು, "ಇನ್ನು ಮುಂದೆ ನಗರ ಅಥವಾ ಗ್ರಾಮೀಣ ಎಂಬ ಭೇದವಿಲ್ಲದೆ, ದೇಶದ ಯಾವುದೇ ಭಾಗದ ದೇಶೀಯ ಎಲ್‌ಪಿಜಿ ಗ್ರಾಹಕರು ಕೇವಲ 25 ದಿನಗಳ ಅಂತರದಲ್ಲೇ ಮತ್ತೊಂದು ಸಿಲಿಂಡರ್ ಅನ್ನು ಮರು ಬುಕಿಂಗ್ ಮಾಡಿಕೊಳ್ಳಬಹುದು" ಎಂದು ತಿಳಿಸಿದ್ದಾರೆ. ಅದರಂತೆ, ಸರ್ಕಾರದ ಈ ನಿರ್ಧಾರದಿಂದಾಗಿ ಗ್ರಾಮೀಣ ಭಾಗದ ಕೋಟ್ಯಂತರ ಕುಟುಂಬಗಳಿಗೆ, ವಿಶೇಷವಾಗಿ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ದೊಡ್ಡ ಮಟ್ಟದ ಆರ್ಥಿಕ ಹಾಗೂ ಸಾಮಾಜಿಕ ರಿಲೀಫ್ ಸಿಕ್ಕಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




