ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ; ಬೆಂಗಳೂರಿನಲ್ಲಿ ಎಷ್ಟಿದೆ ಗೊತ್ತಾ?
ಸ್ಥಳೀಯ ವ್ಯಾಪಾರಿಗಳ ಪ್ರಕಾರ, ಶುದ್ಧ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 2,700 ರೂ.ಗಳಷ್ಟು ಇಳಿಕೆಯಾಗಿದ್ದು ಎಲ್ಲಾ ತೆರಿಗೆಗಳನ್ನು ಒಳಗೊಂಡಂತೆ ರೂ. 1,55,900 ಗೆ ತಲುಪಿದೆ.

ನವದೆಹಲಿ: ಆಭರಣ ಪ್ರಿಯರಿಗೆ ಸಿಹಿ ಸುದ್ದಿ. ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಶುಕ್ರವಾರ ರಾಷ್ಟ್ರ ರಾಜಧಾನಿಯಲ್ಲಿ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 2,700 ರೂ.ಗಳಷ್ಟು ಕಡಿಮೆಯಾಗಿದ್ದು, 1.55 ಲಕ್ಷ ರೂ.ಗೆ ತಲುಪಿದರೆ, ಬೆಳ್ಳಿ ಬೆಲೆ ಪ್ರತಿ ಕೆಜಿಗೆ 10,000 ರೂ.ಗಳಷ್ಟು ಕುಸಿದೊಂದಿಗೆ 2.34 ಲಕ್ಷ ರೂ.ಗೆ ತಲುಪಿದೆ.
ಸ್ಥಳೀಯ ವ್ಯಾಪಾರಿಗಳ ಪ್ರಕಾರ, ಶುದ್ಧ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 2,700 ರೂ.ಗಳಷ್ಟು ಇಳಿಕೆಯಾಗಿದ್ದು ಎಲ್ಲಾ ತೆರಿಗೆಗಳನ್ನು ಒಳಗೊಂಡಂತೆ ರೂ. 1,55,900 ಗೆ ತಲುಪಿದೆ. ಗುರುವಾರ ಇದರ ಬೆಲೆ ಪ್ರತಿ 10 ಗ್ರಾಂಗೆ 1,58,600 ರೂ.ಗಳಷ್ಟಿತ್ತು. ಹಾಗೆಯೇ, ಬೆಳ್ಳಿ ಬೆಲೆಯೂ ಪ್ರತಿ ಕೆಜಿಗೆ 10,000 ರೂ.ಗಳಷ್ಟು ಇಳಿಕೆಯಾಗಿದ್ದು 2,34,600 ರೂ.ಗೆ ತಲುಪಿದೆ. ಇದು ನಿನ್ನೆ ದಿನ ಪ್ರತಿ ಕೆಜಿಗೆ 2,44,600 ರೂ.ಗಳಷ್ಟಿತ್ತು.
ಇತ್ತೀಚಿನ ಏರಿಕೆಯ ನಂತರ ಸ್ಥಳೀಯ ಮಾರುಕಟ್ಟೆಯಲ್ಲಿ ಕಂಡುಬಂದ ಮಾರಾಟದ ಒತ್ತಡವೇ ದೇಶೀಯ ಮಾರುಕಟ್ಟೆಯಲ್ಲಿನ ಈ ಬೆಲೆ ಕುಸಿತಕ್ಕೆ ಕಾರಣ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಇದರಿಂದಾಗಿ ಎರಡೂ ಅಮೂಲ್ಯ ಲೋಹಗಳ ಬೆಲೆಗಳು ಕುಸಿತ ಕಂಡಿವೆ.
ವಿದೇಶಿ ವಹಿವಾಟಿನಲ್ಲಿ ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಚೇತರಿಸಿಕೊಂಡರೂ ಒತ್ತಡದಲ್ಲೇ ಮುಂದುವರಿದಿದೆ ಮತ್ತು ಸತತ ಮೂರನೇ ವಾರವೂ ಬೆಲೆ ಇಳಿಕೆಯ ಹಾದಿಯಲ್ಲಿದೆ ಎಂದು ಎಚ್ಡಿಎಫ್ಸಿ ಸೆಕ್ಯುರಿಟೀಸ್ನ ಸರಕು ಮಾರುಕಟ್ಟೆ ವಿಭಾಗದ ಹಿರಿಯ ವಿಶ್ಲೇಷಕ ಸೌಮಿಲ್ ಗಾಂಧಿ ತಿಳಿಸಿದ್ದಾರೆ.
ಇನ್ನೂ ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ದರದಲ್ಲಿ ಇಳಿಕೆಯಾಗಿದ್ದು, ಪ್ರತಿ ಗ್ರಾಂಗೆ ಸುಮಾರು ₹15,289 ಮತ್ತು 22-ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ₹14,015 ರಷ್ಟಿದೆ. ಇನ್ನೂ ಬೆಳ್ಳಿ ದರವು ಪ್ರತಿ ಗ್ರಾಂಗೆ ಸುಮಾರು ₹245 ರಿಂದ ₹255 ರಷ್ಟಿದ್ದು, ಒಂದು ಕೆಜಿ ಬೆಳ್ಳಿ ಬೆಲೆ ₹2,45,000 ರಷ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



