ಬ್ಯಾಂಕ್ ಮುಷ್ಕರದ ನಡುವೆ ಗ್ರಾಹಕರಿಗೆ ಬಿಗ್ ರಿಲೀಫ್: ಎಟಿಎಂ ವಹಿವಾಟು ಶುಲ್ಕ ಸಂಪೂರ್ಣ ರದ್ದು; ಎಷ್ಟು ಬಾರಿಯಾದರೂ ಉಚಿತವಾಗಿ ಹಣ ಡ್ರಾ ಮಾಡಿ
Bank Strike: ಬ್ಯಾಂಕ್ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಗ್ರಾಹಕರಿಗೆ ತೊಂದರೆಯಾಗದಂತೆ ತಡೆಯಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ಹಲವು ಸಾರ್ವಜನಿಕ ವಲಯದ ಬ್ಯಾಂಕುಗಳು ಎಟಿಎಂ ವಹಿವಾಟು ಶುಲ್ಕವನ್ನು ಸಂಪೂರ್ಣವಾಗಿ ಮನ್ನಾ ಮಾಡಿವೆ. ಆ ಕುರಿತ ವರದಿ ಇಲ್ಲಿದೆ:

ಮುಂಬೈ: ಬ್ಯಾಂಕ್ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಗ್ರಾಹಕರಿಗೆ ತೊಂದರೆಯಾಗದಂತೆ ತಡೆಯಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ಹಲವು ಸಾರ್ವಜನಿಕ ವಲಯದ ಬ್ಯಾಂಕುಗಳು ಎಟಿಎಂ ವಹಿವಾಟು ಶುಲ್ಕವನ್ನು ಸಂಪೂರ್ಣವಾಗಿ ಮನ್ನಾ ಮಾಡಿವೆ. ವಾರಕ್ಕೆ 5 ದಿನಗಳ ಕೆಲಸದ ಅವಧಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರ ಸಂಘಟನೆಗಳು 3 ದಿನಗಳು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. ಈ ಅವಧಿಯಲ್ಲಿ ಗ್ರಾಹಕರು ನಗದು ಕೊರತೆ ಎದುರಿಸಬಾರದು ಎಂಬ ಉದ್ದೇಶದಿಂದ ಬ್ಯಾಂಕುಗಳು ಈ ಮಹತ್ವದ ನಿರ್ಧಾರ ಕೈಗೊಂಡಿವೆ. ಆ ಕುರಿತ ವರದಿ ಇಲ್ಲಿದೆ:
ಸಾಮಾನ್ಯವಾಗಿ ತಿಂಗಳಿಗೆ ನಿಗದಿತ ಮಿತಿಗಿಂತ ಹೆಚ್ಚು ಬಾರಿ ಬೇರೆ ಬ್ಯಾಂಕಿನ ಎಟಿಎಂ ಬಳಸಿದರೆ ಶುಲ್ಕ ವಿಧಿಸಲಾಗುತ್ತದೆ. ಆದರೆ, ಮುಷ್ಕರದ ದಿನಗಳಾದ ಸೆಪ್ಟೆಂಬರ್ 28 ರಿಂದ ಸೆಪ್ಟೆಂಬರ್ 30 ರವರೆಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಬ್ಯಾಂಕ್, ಯೂನಿಯನ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಸೇರಿದಂತೆ ಹಲವು ಸಾರ್ವಜನಿಕ ವಲಯದ ಬ್ಯಾಂಕುಗಳು ಮತ್ತು ಪ್ರಾದೇಶಿಕ ಬ್ಯಾಂಕುಗಳು ಗ್ರಾಮೀಣ ಬ್ಯಾಂಕುಗಳು ಈ ವಿನಾಯಿತಿಯನ್ನು ಘೋಷಿಸಿದೆ. ಅದರಂತೆ, ಈ 3 ದಿನಗಳ ಕಾಲ ಗ್ರಾಹಕರು ದೇಶದ ಯಾವುದೇ ಬ್ಯಾಂಕಿನ ಎಟಿಎಂನಿಂದ ಎಷ್ಟು ಬಾರಿಯಾದರೂ ಸಂಪೂರ್ಣ ಉಚಿತವಾಗಿ ಹಣವನ್ನು ಡ್ರಾ ಮಾಡಿಕೊಳ್ಳಬಹುದು.
ಏತನ್ಮಧ್ಯೆ, ಮುಷ್ಕರಕ್ಕೂ ಮುನ್ನ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ, ಸರ್ಕಾರದ ನಿರ್ದೇಶನದಂತೆ ಸಾರ್ವಜನಿಕ ವಲಯದ ಬ್ಯಾಂಕುಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು (RRBs) ಸೆಪ್ಟೆಂಬರ್ 27ರ ಭಾನುವಾರದಂದು ತೆರೆದಿರಲಿವೆ. ಜೊತೆಗೆ, ಮುಷ್ಕರದ ಅವಧಿಯಲ್ಲಿ ಇಂಟರ್ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್ ಸೇರಿದಂತೆ UPI, IMPS, RTGS ಮತ್ತು NEFT ನಂತಹ ಡಿಜಿಟಲ್ ಪಾವತಿ ಸೇವೆಗಳು ಎಂದಿನಂತೆ ಯಾವುದೇ ಅಡಚಣೆಯಿಲ್ಲದೆ ಕಾರ್ಯನಿರ್ವಹಿಸಲಿವೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



