ವೃತ್ತಿ & ಉದ್ಯೋಗ ಅವಕಾಶಗಳು

VAO ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್; 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡಿದ KEA

ಕಂದಾಯ ಇಲಾಖೆಯು ಖಾಲಿ ಇರುವ 572 ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳಿಗೆ KEA ಮೂಲಕ ಅಧಿಸೂಚನೆ ಬಿಡುಗಡೆ ಮಾಡಿ, ಅರ್ಜಿ ಸಲ್ಲಿಸಲು ಜುಲೈ 30, 2026 ಅನ್ನು ಕೊನೆಯ ದಿನಾಂಕ ಎಂದು ಘೋಷಿಸಿತ್ತು. ಆದ್ರೆ, ಇದೀಗ ಅರ್ಜಿ ಸಲ್ಲಿಸಲು ಆಗಸ್ಟ್ 07, 2026ರವರೆಗೆ ವಿಸ್ತರಿಸಿ ಆದೇಶಿಸಿದೆ.

VAO ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್; 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡಿದ KEA
VAO ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ — Online Desk
Published On :

ಬೆಂಗಳೂರು: ಹಲವು ವರ್ಷಗಳ ನಂತರ ಕರ್ನಾಟಕ ಸರ್ಕಾರವು 72,186 ಕ್ಕೂ ಹೆಚ್ಚು ಖಾಲಿ ಹುದ್ದೆಗಳ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಪ್ರಾಧಿಕಾರಗಳಾದ KPSC ಮತ್ತು KEA ಮೂಲಕ ನೇಮಕಾತಿ ನಡೆಸಲು ಮುಂದಾಗಿದೆ. ಅದರಂತೆ, ಒಟ್ಟು 750 ಹುದ್ದೆಗಳ ಭೂಮಾಪಕರು, 945 ಕೃಷಿ ಅಧಿಕಾರಿಗಳು, ಕರ್ನಾಟಕ ಅರಣ್ಯ ಇಲಾಖೆಯಲ್ಲಿ 2,403+ ಹುದ್ದೆಗಳು ಜೊತೆಗೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 7,900ಕ್ಕೂ ಹೆಚ್ಚು ವಿವಿಧ ಹುದ್ದೆಗಳ ಬೃಹತ್ ನೇಮಕಾತಿ ಪ್ರಕ್ರಿಯೆಗಳು ನಡೆಯುತ್ತಿದೆ.

ಇದರೊಂದಿಗೆ, ಕಂದಾಯ ಇಲಾಖೆಯು ಖಾಲಿ ಇರುವ 572 ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳಿಗೆ KEA ಮೂಲಕ ಅಧಿಸೂಚನೆ ಬಿಡುಗಡೆ ಮಾಡಿ, ಅರ್ಜಿ ಸಲ್ಲಿಸಲು ಜುಲೈ 30, 2026 ಅನ್ನು ಕೊನೆಯ ದಿನಾಂಕ ಎಂದು ಘೋಷಿಸಿತ್ತು. ಆದ್ರೆ, ಇದೀಗ ಅರ್ಜಿ ಸಲ್ಲಿಸಲು ಆಗಸ್ಟ್ 07, 2026ರವರೆಗೆ ವಿಸ್ತರಿಸಿ ಆದೇಶಿಸಿದೆ. ಇದರೊಂದಿಗೆ, ಅರ್ಜಿ ಶುಲ್ಕ ಪಾವತಿಸಲು ಆಗಸ್ಟ್ 10, 2026ರವರೆಗೆ ಕೊನೆಯ ದಿನಾಂಕವನ್ನ ವಿಸ್ತರಿಸಿದೆ.

ಮುಂದುವರೆದು, ಈ ನೇಮಕಾತಿಯಲ್ಲಿ ಕರ್ನಾಟಕ ಸರ್ಕಾರ 572 ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿದ್ದು, ಅದರಲ್ಲಿ 67 ಹುದ್ದೆಗಳನ್ನು ಕಲ್ಯಾಣ ಕರ್ನಾಟಕಕ್ಕೆ ಹಾಗೂ 505 ಹುದ್ದೆಗಳನ್ನು ಉಳಿದ ಮೂಲ ವೃಂದಕ್ಕೆ ನೀಡಲಾಗಿದೆ. ಇನ್ನು, ದ್ವಿತೀಯ ಪಿಯುಸಿ (12ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವವರು ಅರ್ಜಿ ಸಲ್ಲಿಸಬಹುದು.

ಏತನ್ಮಧ್ಯೆ, 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅಧಿಸೂಚನೆ, ಅರ್ಹತೆ ಮತ್ತು ವಯೋಮಿತಿ, ಅರ್ಜಿ ಶುಲ್ಕ, ವೇತನ, ಲಿಖಿತ ಪರೀಕ್ಷೆ ನಡೆಯುವ ದಿನಾಂಕ ಸೇರಿದಂತೆ ಹಲವು ಮಾಹಿತಿಗಳಿಗಾಗಿ ಈ ಕೆಳಗಿನ ಲಿಂಕ್ ನೋಡಿ:

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.