ವೃತ್ತಿ & ಉದ್ಯೋಗ ಅವಕಾಶಗಳು

ಪರೀಕ್ಷೆ ಇಲ್ಲದೆ ಅರಣ್ಯ ಇಲಾಖೆಯಲ್ಲಿ ಸರ್ಕಾರಿ ಕೆಲಸ; 750 ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ; 10th ಪಾಸಾಗಿದ್ದರೆ ಸಾಕು!

ಕರ್ನಾಟಕ ಅರಣ್ಯ ಇಲಾಖೆ 750 ಅರಣ್ಯ ವೀಕ್ಷಕ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕೇವಲ 10ನೇ ತರಗತಿ ಪಾಸಾದವರೂ ಕೂಡ ಮೂಲಕ ಅರ್ಜಿ ಸಲ್ಲಿಸಬಹುದು. ಆ ಕುರಿತ ವರದಿ ಇಲ್ಲಿದೆ:

ಪರೀಕ್ಷೆ ಇಲ್ಲದೆ ಅರಣ್ಯ ಇಲಾಖೆಯಲ್ಲಿ ಸರ್ಕಾರಿ ಕೆಲಸ; 750 ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ; 10th ಪಾಸಾಗಿದ್ದರೆ ಸಾಕು!
ಅರಣ್ಯ ವೀಕ್ಷಕ — Online Desk
Published On :

KFD Recruitment 2026: ಪದವಿ ಇಲ್ಲ, PU ಕೂಡ ಓದಿಲ್ಲ, ಆದರೂ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವವರಿಗೆ ಕರ್ನಾಟಕ ಅರಣ್ಯ ಇಲಾಖೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಹೌದು, 750 ಅರಣ್ಯ ವೀಕ್ಷಕ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕೇವಲ 10ನೇ ತರಗತಿ ಪಾಸಾದವರೂ ಕೂಡ ಮೂಲಕ ಅರ್ಜಿ ಸಲ್ಲಿಸಬಹುದು. ಆ ಕುರಿತ ವರದಿ ಇಲ್ಲಿದೆ:

ಹುದ್ದೆಯ ವಿವರ:

ಒಟ್ಟು 750 ಅರಣ್ಯ ವೀಕ್ಷಕ (Forest Watcher) ಹುದ್ದೆ

  • ಮೈಸೂರು ವಲಯ: 75 ಹುದ್ದೆಗಳು

  • ಮಂಗಳೂರು ವಲಯ: 55 ಹುದ್ದೆಗಳು

  • ಕೊಡಗು (ಮಡಿಕೇರಿ) ವಲಯ: 70 ಹುದ್ದೆಗಳು

  • ಶಿವಮೊಗ್ಗ ವಲಯ: 80 ಹುದ್ದೆಗಳು

  • ಬೆಂಗಳೂರು ವಲಯ: 65 ಹುದ್ದೆಗಳು

  • ಉತ್ತರ ಕನ್ನಡ (ಶಿರಸಿ) ವಲಯ: 60 ಹುದ್ದೆಗಳು

  • ಚಾಮರಾಜನಗರ ವಲಯ: 85 ಹುದ್ದೆಗಳು

  • ಚಿಕ್ಕಮಗಳೂರು ವಲಯ: 60 ಹುದ್ದೆಗಳು

  • ಹಾಸನ ವಲಯ: 45 ಹುದ್ದೆಗಳು

  • ಬಳ್ಳಾರಿ ವಲಯ: 40 ಹುದ್ದೆಗಳು

  • ಬೆಳಗಾವಿ ವಲಯ: 50 ಹುದ್ದೆಗಳು

  • ಕಲಬುರಗಿ ವಲಯ: 35 ಹುದ್ದೆಗಳು

  • ಧಾರವಾಡ ವಲಯ: 30 ಹುದ್ದೆಗಳು

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ: ಆಗಸ್ಟ್ 1, 2026

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 31, 2026

  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಸೆಪ್ಟೆಂಬರ್ 2, 2026

ಸಂಬಳ:

₹29,600 ರಿಂದ ₹52,800

ಅರ್ಹತೆ:

  • ವಿದ್ಯಾರ್ಹತೆ: ಮಾನ್ಯತೆ ಪಡೆದ ಮಂಡಳಿಯಿಂದ ಕಡ್ಡಾಯವಾಗಿ SSLC ಉತ್ತೀರ್ಣರಾಗಿರಬೇಕು.

  • ವಯೋಮಿತಿ: ಕನಿಷ್ಠ 18 ವರ್ಷ ತುಂಬಿರಬೇಕು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗಕ್ಕೆ 40 ವರ್ಷ ಹಾಗೂ ಮೀಸಲಾತಿ ವರ್ಗದವರಿಗೆ ನಿಯಮಾನುಸಾರ ಸಡಿಲಿಕೆ ಇರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗಳಾದ ಕರ್ನಾಟಕ ಅರಣ್ಯ ಇಲಾಖೆ (aranya.gov.in) ಅಥವಾ KFD ನೇಮಕಾತಿ ಪೋರ್ಟಲ್ (https://kfdrecruitment.in/) ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.

ಆಯ್ಕೆ ವಿಧಾನ:

  • ಈ ಹುದ್ದೆಗಳಿಗೆ ಯಾವುದೇ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಇರುವುದಿಲ್ಲ.

  • SSLC ಅಂಕಗಳ ಮೆರಿಟ್ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ.

  • ದೈಹಿಕ ಸಾಮರ್ಥ್ಯ ಮತ್ತು ದೈಹಿಕ ಸಹಿಷ್ಣುತೆ ಪರೀಕ್ಷೆ (Physical Test).

  • ವೈದ್ಯಕೀಯ ತಪಾಸಣೆ ಮತ್ತು ಮೂಲ ದಾಖಲಾತಿಗಳ ಪರಿಶೀಲನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.