Bangalore University: ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ; ಭರ್ಜರಿ ಸಂಬಳ
ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವೃತ್ತಿ ರೂಪಿಸಿಕೊಳ್ಳಲು ಬಯಸುವವರಿಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಗುಡ್ ನ್ಯೂಸ್; ಯಾಕಂದ್ರೆ, ವಿಶ್ವವಿದ್ಯಾಲಯವು ತನ್ನ ವಿವಿಧ ಸ್ನಾತಕೋತ್ತರ ವಿಭಾಗಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಬೆಂಗಳೂರು: ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವೃತ್ತಿ ರೂಪಿಸಿಕೊಳ್ಳಲು ಬಯಸುವವರಿಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಗುಡ್ ನ್ಯೂಸ್; ಯಾಕಂದ್ರೆ, ವಿಶ್ವವಿದ್ಯಾಲಯವು ತನ್ನ ವಿವಿಧ ಸ್ನಾತಕೋತ್ತರ ವಿಭಾಗಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆ ಕುರಿತ ವರದಿ ಇಲ್ಲಿದೆ:
ಅರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ವಿಷಯದಲ್ಲಿ ಕನಿಷ್ಠ 55 ಪ್ರತಿಶತ ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಇದರೊಂದಿಗೆ ಕಡ್ಡಾಯವಾಗಿ NET ಅಥವಾ SLET SET ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಅಥವಾ UGC ನಿಯಮಾವಳಿಗಳ ಪ್ರಕಾರ PhD ಪದವಿ ಹೊಂದಿರಬೇಕು.
ಉನ್ನತ ಶೈಕ್ಷಣಿಕ ಹಿನ್ನೆಲೆ ಮತ್ತು ಬೋಧನಾ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆಯ್ಕೆಯಲ್ಲಿ ಆದ್ಯತೆ ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ: ಆಗಸ್ಟ್ 5, 2026 (ಈಗಾಗಲೇ ಪ್ರಾರಂಭವಾಗಿದೆ)
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 21, 2026 (ಕೊನೆಯ ದಿನದ ತನಕ ಕಾಯಬೇಡಿ)
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಬೆಂಗಳೂರು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ಗೆ (bangaloreuniversitykarnataka.gov.in) ಭೇಟಿ ನೀಡಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು.
ಭರ್ತಿ ಮಾಡಿದ ಅರ್ಜಿಯೊಂದಿಗೆ ದೃಢೀಕೃತ ದಾಖಲೆಗಳ ನಕಲು ಪ್ರತಿಗಳನ್ನು ಜೋಡಿಸಬೇಕು.
ಭರ್ತಿ ಮಾಡಿದ ಹಾರ್ಡ್ ಪ್ರತಿಯನ್ನು ವಿಶ್ವವಿದ್ಯಾಲಯದ ಆಯಾ ವಿಭಾಗದ ಮುಖ್ಯಸ್ಥರ ಕಚೇರಿಗೆ ಆಗಸ್ಟ್ 21, 2026ರ್ ರೊದೊಳಗೆ ತಲುಪಿಸಬೇಕಾಗುತ್ತದೆ.
ಯಾವ ದಾಖಲೆಗಳು ಬೇಕು?
ಎಲ್ಲಾ ಶೈಕ್ಷಣಿಕ ಅಂಕಪಟ್ಟಿಗಳು ಮತ್ತು ಪದವಿ ಪ್ರಮಾಣಪತ್ರಗಳು
ಜಾತಿ ಪ್ರಮಾಣಪತ್ರ
NET ಅಥವಾ SLET ಪಾಸ್ ಸರ್ಟಿಫಿಕೇಟ್ ಅಥವಾ PhD ಪ್ರಮಾಣಪತ್ರ
ಅನುಭವದ ಪ್ರಮಾಣಪತ್ರಗಳು ಇದ್ದರೆ
ಆಯ್ಕೆ ವಿಧಾನ:
ಅತಿಥಿ ಉಪನ್ಯಾಸಕರ ಆಯ್ಕೆಯನ್ನು ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ನೇರವಾಗಿ ಸಂದರ್ಶನದ ಮೂಲಕ ಮಾಡಲಾಗುತ್ತದೆ.
ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ, ಶೈಕ್ಷಣಿಕ ಮೆರಿಟ್ ಆಧಾರದ ಮೇಲೆ ಅರ್ಹರನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ.
ಆಯ್ಕೆಯಾದ ಉಪನ್ಯಾಸಕರಿಗೆ ವಿಶ್ವವಿದ್ಯಾಲಯದ ಮತ್ತು ಸರ್ಕಾರದ ನಿಯಮಾವಳಿಗಳ ಪ್ರಕಾರ ಮಾಸಿಕ ಗೌರವ ಧನವನ್ನು ನೀಡಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



