ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣ ಅವಕಾಶ! ಯಾವುದೇ ಪರೀಕ್ಷೆ ಇಲ್ಲದೆ ಕೇಂದ್ರ ಸರ್ಕಾರದಲ್ಲಿ ಕೆಲಸ; 34 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ UPSC
ಕೇಂದ್ರ ಸರ್ಕಾರಿ ಕೆಲಸ ಹುಡುಕುತ್ತಿರುವಿರಾ? ನಿಮಗೆ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಗುಡ್ ನ್ಯೂಸ್ ನೀಡಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 34 ಪ್ರಮುಖ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

UPSC Recruitment 2026: ಕೇಂದ್ರ ಸರ್ಕಾರಿ ಕೆಲಸ ಹುಡುಕುತ್ತಿರುವಿರಾ? ನಿಮಗೆ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಗುಡ್ ನ್ಯೂಸ್ ನೀಡಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 34 ಪ್ರಮುಖ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:
ಹುದ್ದೆಗಳ ವಿವರ:
ಕೇಂದ್ರ ಸರ್ಕಾರದ ಇಲಾಖೆಗಳಲ್ಲಿನ ಹುದ್ದೆಗಳು (ಒಟ್ಟು 19 ಹುದ್ದೆಗಳು)
ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ (ಸಿವಿಲ್): ಒಟ್ಟು 02 ಹುದ್ದೆಗಳು
ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ (ಎಲೆಕ್ಟ್ರಾನಿಕ್ಸ್): ಒಟ್ಟು 02 ಹುದ್ದೆಗಳು
ಅಸಿಸ್ಟೆಂಟ್ ಡೈರೆಕ್ಟರ್ (ಇಂಜಿನಿಯರಿಂಗ್): ಒಟ್ಟು 13 ಹುದ್ದೆಗಳು
ರಿಸರ್ಚ್ ಆಫೀಸರ್: ಒಟ್ಟು 01 ಹುದ್ದೆ
ಸೂಪರಿಂಟೆಂಡೆಂಟ್ ಟ್ರಾನ್ಸ್ಲೇಶನ್ (ಹಿಂದಿ): ಒಟ್ಟು 01 ಹುದ್ದೆ
ಲಡಾಖ್ ಆಡಳಿತ ವ್ಯಾಪ್ತಿಯ ಹುದ್ದೆಗಳು (ಒಟ್ಟು 15 ಹುದ್ದೆಗಳು)
ಕೇಂದ್ರಾಡಳಿತ ಪ್ರದೇಶವಾದ ಲಡಾಖ್ನ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳಲ್ಲಿ..
ಹಾರ್ಟಿಕಲ್ಚರ್ ಡೆವಲಪ್ಮೆಂಟ್ ಆಫೀಸರ್ (ತೋಟಗಾರಿಕೆ ಅಭಿವೃದ್ಧಿ ಅಧಿಕಾರಿ): ಒಟ್ಟು 08 ಹುದ್ದೆಗಳು.
ಸಾಯಿಲ್ ಕನ್ಸರ್ವೇಶನ್ ಅಸಿಸ್ಟೆಂಟ್ (ಮಣ್ಣು ಸಂರಕ್ಷಣಾ ಸಹಾಯಕ): ಒಟ್ಟು 07 ಹುದ್ದೆಗಳು.
ಒಟ್ಟು 34 ಹುದ್ದೆಗಳು
ಅರ್ಹತೆಗಳು:
ಶೈಕ್ಷಣಿಕ ಅರ್ಹತೆ: ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಪಟ್ಟ ವಿಷಯಗಳಲ್ಲಿ ಇಂಜಿನಿಯರಿಂಗ್ ಪದವಿ (Civil/Electronics), ಕೃಷಿ ಪದವಿ, ಸ್ನಾತಕೋತ್ತರ ಪದವಿ ಅಥವಾ ಕಾನೂನು ಪದವಿ ಪಡೆದಿರಬೇಕು.
ಅನುಭವ: ಕೆಲವು ತಾಂತ್ರಿಕ ಮತ್ತು ಇಂಜಿನಿಯರಿಂಗ್ ಹುದ್ದೆಗಳಿಗೆ ಕನಿಷ್ಠ 2 ವರ್ಷಗಳ ಕೆಲಸದ ಅನುಭವದ ಅಗತ್ಯವಿರುತ್ತದೆ.
ವಯೋಮಿತಿ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 30 ರಿಂದ 35 ವರ್ಷ, ಹಿಂದುಳಿದ ವರ್ಗ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾವಳಿಗಳ ಪ್ರಕಾರ ವಯೋಮಿತಿ ಸಡಲಿಿಕೆ ಇರಲಿದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 08 ಆಗಸ್ಟ್ 2026.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28 ಆಗಸ್ಟ್ 2026 (ಸಂಜೆ 6:00 ಗಂಟೆಯವರೆಗೆ).
ಲಡಾಖ್ ಪ್ರಾಂತ್ಯದ ಹುದ್ದೆಗಳಿಗೆ ಕೊನೆಯ ದಿನಾಂಕ: 04 ಸೆಪ್ಟೆಂಬರ್ 2026.
ಸಂಬಳ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ 7ನೇ ವೇತನ ಆಯೋಗದ ನಿಯಮಾವಳಿಗಳ ಪ್ರಕಾರ ಲೆವೆಲ್ 7, ಲೆವೆಲ್ 8 ಮತ್ತು ಲೆವೆಲ್ 10 ರ ಮ್ಯಾಟ್ರಿಕ್ಸ್ ಅಡಿಯಲ್ಲಿ ಹುದ್ದೆಗಳ ಅನುಸಾರ ಮಾಸಿಕ ₹44,900 ರಿಂದ ₹1,77,500 ವರೆಗೆ ವೇತನ ಹಾಗೂ ಇತರೆ ಭತ್ಯೆಗಳನ್ನು ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಇದು ನೇರ ನೇಮಕಾತಿಯಾಗಿದ್ದು, ಸಾಂಪ್ರದಾಯಿಕ ಸಿವಿಲ್ ಸರ್ವಿಸಸ್ ಲಿಖಿತ ಪರೀಕ್ಷೆಗಳಿರುವುದಿಲ್ಲ. ಆನ್ಲೈನ್ ಅರ್ಜಿಗಳ ಪರಿಶೀಲನೆ ಮತ್ತು ಶಾರ್ಟ್ಲಿಸ್ಟ್ ಮಾಡುವುದು. ಶಾರ್ಟ್ಲಿಸ್ಟ್ ಆದ ಅಭ್ಯರ್ಥಿಗಳಿಗೆ ಸಂದರ್ಶನ / ವ್ಯಕ್ತಿತ್ವ ಪರೀಕ್ಷೆ ನಡೆಸಿ ಅಂತಿಮವಾಗಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.
ಮೊದಲಿಗೆ UPSC ಆನ್ಲೈನ್ ಅಪ್ಲಿಕೇಶನ್ ಪೋರ್ಟಲ್ ಗೆ ಭೇಟಿ ನೀಡಿ.
ನಿಮ್ಮ ಒನ್ ಟೈಮ್ ರಿಜಿಸ್ಟ್ರೇಷನ್ (OTR) ಪ್ರೊಫೈಲ್ ಅನ್ನು ಪೂರ್ಣಗೊಳಿಸಿ.
ಲಾಗಿನ್ ಆದ ನಂತರ, ನಿಗದಿತ ಹುದ್ದೆಯನ್ನು ಆಯ್ಕೆ ಮಾಡಿ ವಿವರಗಳನ್ನು ಭರ್ತಿ ಮಾಡಿ.
ನಿಮ್ಮ ಇತ್ತೀಚಿನ ಭಾವಚಿತ್ರ, ಸಹಿ ಮತ್ತು ಅಗತ್ಯ ದಾಖಲೆಗಳನ್ನು (ವಯಸ್ಸು, ವಿದ್ಯಾರ್ಹತೆ, ಅನುಭವದ ಪ್ರಮಾಣಪತ್ರ) ಅಪ್ಲೋಡ್ ಮಾಡಿ.
ನಿಗದಿತ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ (SC/ST/PwBD ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ).
ಅರ್ಜಿಯನ್ನು ಸಲ್ಲಿಸಿದ ನಂತರ, ಮುಂದಿನ ಉಲ್ಲೇಖಕ್ಕಾಗಿ ಪ್ರಿಂಟೌಟ್ ತೆಗೆದುಕೊಳ್ಳಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




