ದ್ವಿತೀಯ PU ಪಾಸಾದವರಿಗೆ ಕೋರ್ಟ್ ಉದ್ಯೋಗದ ಸುವರ್ಣಾವಕಾಶ; 21 ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು ಗ್ರಾಮಾಂತರ ಪ್ರಧಾನ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು ಗ್ರಾಮಾಂತರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಗ್ರೇಡ್ 3 ಅಂದರೆ ಸ್ಟೆನೋಗ್ರಾಫರ್ ಗ್ರೇಡ್ 3 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಪ್ರಕ್ರಿಯೆಯು ಸಂಪೂರ್ಣವಾಗಿ ಕೌಶಲ್ಯ ಪರೀಕ್ಷೆಯ ಆಧಾರದ ಮೇಲೆ ನಡೆಯಲಿದ್ದು ಕಾಯಂ ಸರ್ಕಾರಿ ಉದ್ಯೋಗ ಪಡೆಯಲು ಇದೊಂದು ಉತ್ತಮ ಅವಕಾಶವಾಗಿದೆ. ಆ ಕುರಿತ ವರದಿ ಇಲ್ಲಿದೆ:
ಹುದ್ದೆಯ ವಿವರ:
ಹುದ್ದೆಯ ಹೆಸರು: ಶೀಘ್ರಲಿಪಿಗಾರರು ಗ್ರೇಡ್-III
ಒಟ್ಟು ಹುದ್ದೆಗಳು: 21
ಉದ್ಯೋಗ ಸ್ಥಳ: ಬೆಂಗಳೂರು ಗ್ರಾಮಾಂತರ ಜಿಲ್ಲೆ
ವೇತನ ಶ್ರೇಣಿ: ಪ್ರತಿ ತಿಂಗಳು ರೂ. 27,650 ರಿಂದ ರೂ. 52,650
ಅರ್ಹತೆ:
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ದ್ವಿತೀಯ ಪಿಯುಸಿ (12ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಇದರೊಂದಿಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಹಿರಿಯ ದರ್ಜೆ ಶೀಘ್ರಲಿಪಿ ಮತ್ತು ಹಿರಿಯ ದರ್ಜೆ ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆಯಾಗಿರಬೇಕು. ಅಥವಾ ತತ್ಸಮಾನ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ: ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ತುಂಬಿರಬೇಕು. ಗರಿಷ್ಠ ವಯೋಮಿತಿ 35 ವರ್ಷ (ಪ್ರವರ್ಗ 2A, 2B, 3A, 3B ಗೆ 3 ಹಾಗೂ SC/ST ಮತ್ತು ಪ್ರವರ್ಗ-1ಕ್ಕೆ 5 ವರ್ಷಗಳ ಸಡಲಿಕೆ ಇರಲಿದೆ).
ಅರ್ಜಿ ಶುಲ್ಕ
ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳು: ರೂ. 200
SC / ST / ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳು: ರೂ. 100
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 23, 2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 25, 2026
ಅರ್ಜಿ ಸಲ್ಲಿಕೆ ವಿಧಾನ:
ಇ-ಕೋರ್ಟ್ಸ್ ಅಧಿಕೃತ ಪೋರ್ಟಲ್ಗೆ ಭೇಟಿ ನೀಡಿ (https://bengalururural.dcourts.gov.in/online-recruitment/)
Notification ಲಿಂಕ್ ಮೇಲೆ ಕ್ಲಿಕ್ ಮಾಡಿ.
ಮೊದಲ ಬಾರಿಗೆ ಅರ್ಜಿ ಸಲ್ಲಿಸುತ್ತಿದ್ದರೆ, New Registration ಮೇಲೆ ಕ್ಲಿಕ್ ಮಾಡಿ.
ನಿಮ್ಮ ಹೆಸರು, ಮೊಬೈಲ್ ಸಂಖ್ಯೆ, ಇಮೇಲ್ ಐಡಿ ಮತ್ತು ಮೂಲ ವಿವರಗಳನ್ನು ನಮೂದಿಸಿ ನೋಂದಣಿ ಮಾಡಿಕೊಳ್ಳಿ. ನಿಮ್ಮ ಮೊಬೈಲ್ಗೆ ಯೂಸರ್ ಐಡಿ ಮತ್ತು ಪಾಸ್ವರ್ಡ್ ಬರಲಿದೆ.
ಯೂಸರ್ ಐಡಿ ಬಳಸಿ ಲಾಗಿನ್ ಆಗಿ.
ನಿಮ್ಮ ತಂದೆ/ತಾಯಿಯ ಹೆಸರು, ಜನ್ಮ ದಿನಾಂಕ, ಲಿಂಗ ಮತ್ತು ವಿಳಾಸವನ್ನು ಸರಿಯಾಗಿ ಟೈಪ್ ಮಾಡಿ.
ನಿಮ್ಮ ವಿದ್ಯಾರ್ಹತೆಯ ಅಂಕಗಳು ಮತ್ತು ತೇರ್ಗಡೆಯಾದ ವರ್ಷದ ವಿವರಗಳನ್ನು ನಮೂದಿಸಿ. ವಿಶೇಷವಾಗಿ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯ ಅಂಕಗಳನ್ನು ನಿಖರವಾಗಿ ತುಂಬಿ.
ದಾಖಲೆಗಳನ್ನು ಅಪ್ಲೋಡ್ ಮಾಡಿ
ಅರ್ಜಿ ಪೂರ್ತಿ ಭರ್ತಿಯಾದ ನಂತರ "Preview" ಬಟನ್ ಒತ್ತಿ, ನೀವು ನಮೂದಿಸಿರುವ ಎಲ್ಲಾ ಮಾಹಿತಿ ಸರಿಯಾಗಿದೆಯೇ ಎಂದು ಮತ್ತೊಮ್ಮೆ ಪರಿಶೀಲಿಸಿಕೊಳ್ಳಿ.
ಎಲ್ಲವೂ ಸರಿಯಾಗಿದ್ದರೆ "Submit" ಬಟನ್ ಕ್ಲಿಕ್ ಮಾಡಿ. ಆಗ ನಿಮಗೆ ಒಂದು 'ಅಪ್ಲಿಕೇಶನ್ ನಂಬರ್' (Application Number) ಸಿಗುತ್ತದೆ.
ಅರ್ಜಿ ಸಲ್ಲಿಸಿದ ನಂತರ ಶುಲ್ಕ ಪಾವತಿಸಲು ಆನ್ಲೈನ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಅಥವಾ ಯುಪಿಐ (UPI) ಮುಖಾಂತರ ಅವಕಾಶವಿರುತ್ತದೆ.
ಶುಲ್ಕ ಪಾವತಿ ಯಶಸ್ವಿಯಾದ ನಂತರ, ನಿಮ್ಮ ಭರ್ತಿ ಮಾಡಿದ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಪ್ರಿಂಟ್ ತೆಗೆದಿಟ್ಟುಕೊಳ್ಳಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




