BAMS ಪದವೀಧರರಿಗೆ ಗುಡ್ ನ್ಯೂಸ್; ಕರ್ನಾಟಕ ಸರ್ಕಾರಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಸುವುದು ಹೇಗೆ?
ವೈದ್ಯಕೀಯ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಯುಷ್ ಪದವೀಧರರಿಗೆ ಸುವರ್ಣಾವಕಾಶ. ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಯ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಬಿದ್ದಿದೆ. ಆ ಕುರಿತ ವರದಿ ಇಲ್ಲಿದೆ:

ಚಿಕ್ಕಬಳ್ಳಾಪುರ: ವೈದ್ಯಕೀಯ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಯುಷ್ ಪದವೀಧರರಿಗೆ ಸುವರ್ಣಾವಕಾಶ ಒಲಿದು ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಯ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಬಿದ್ದಿದ್ದು, ಅರ್ಹ ಅಭ್ಯರ್ಥಿಗಳಿಗೆ ಇದು ಉತ್ತಮ ವೇದಿಕೆಯಾಗಿದೆ. ಹಾಗಾಗಿ, ನೇಮಕಾತಿ ಕುರಿತ ಸಂಪೂರ್ಣ ಮಾಹಿತಿ ಈ ವರದಿಯಲ್ಲಿದೆ:
ಹುದ್ದೆಯ ವಿವರ:
ಹುದ್ದೆಯ ಹೆಸರು: ಸಮುದಾಯ ಆರೋಗ್ಯ ಅಧಿಕಾರಿ
ಖಾಲಿ ಇರುವ ಹುದ್ದೆ: 01
ಉದ್ಯೋಗದ ಸ್ಥಳ: ಆಯುಷ್ ಆರೋಗ್ಯ ಮಂದಿರ, ಸೋಮೇನಹಳ್ಳಿ, ಗುಡಿಬಂಡೆ ತಾಲೂಕು, ಚಿಕ್ಕಬಳ್ಳಾಪುರ ಜಿಲ್ಲೆ
ನೇಮಕಾತಿ ವಿಧಾನ: ಸಂಪೂರ್ಣ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 31, 2026
ಅರ್ಹತೆ:
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಎಂಎಸ್ ಪದವಿ ಅಥವಾ ನಿಗದಿಪಡಿಸಿದ ಆಯುಷ್ ವೈದ್ಯಕೀಯ ಪದವಿ ಹೊಂದಿರಬೇಕು ಹಾಗೂ ಕಡ್ಡಾಯವಾಗಿ ನೋಂದಣಿ ಮಾಡಿಸಿರಬೇಕು.
ವಯೋಮಿತಿ: ಆಗಸ್ಟ್ 13, 2026 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ಗರಿಷ್ಠ ವಯಸ್ಸು 40 ವರ್ಷ ಮೀರಿರಬಾರದು. ಸರ್ಕಾರದ ನಿಯಮಾನುಸಾರ ವಯೋಮಿತಿಯಲ್ಲಿ ಕ್ಯಾಟ್ 2A, 2B, 3A, 3B ಅಭ್ಯರ್ಥಿಗಳಿಗೆ: 3 ವರ್ಷಗಳು, SC/ST/ಕ್ಯಾಟ್-1 ಅಭ್ಯರ್ಥಿಗಳಿಗೆ: 5 ವರ್ಷಗಳು, ವಿಕಲಚೇತನ (PH) ಅಭ್ಯರ್ಥಿಗಳಿಗೆ: 10 ವರ್ಷಗಳ ಸಡಲಿಲಿಕೆ ನೀಡಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಆಫ್ಲೈನ್ (Offline) ಮೂಲಕವೇ ಅರ್ಜಿ ಸಲ್ಲಿಸಬೇಕು:ಚಿಕ್ಕಬಳ್ಳಾಪುರ ಜಿಲ್ಲೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
ನಿಮ್ಮ ಶೈಕ್ಷಣಿಕ ದಾಖಲಾತಿಗಳು, ವಯಸ್ಸಿನ ಪುರಾವೆ ಮತ್ತು ಅನುಭವದ ಪ್ರಮಾಣಪತ್ರಗಳ ನಕಲು ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಿ.
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ "ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ, ಚಿಕ್ಕಬಳ್ಳಾಪುರ" ಈ ವಿಳಾಸಕ್ಕೆ ಕೊನೆಯ ದಿನಾಂಕದ ಒಳಗಾಗಿ ತಲುಪಿಸಬೇಕು.
ಈ ಹುದ್ದೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




