UPSC: ಕೇಂದ್ರ ಸರ್ಕಾರದಲ್ಲಿ ಬಂಪರ್ ಉದ್ಯೋಗಾವಕಾಶ; 450 ಗೆಜೆಟೆಡ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಯುಪಿಎಸ್ಸಿ ದೊಡ್ಡ ಅವಕಾಶ ನೀಡಿದೆ. UPSC 450 ಗ್ರೂಪ್ ಎ ಮತ್ತು ಗ್ರೂಪ್ ಬಿ ಗೆಜೆಟೆಡ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಆ ಕುರಿತ ವರದಿ ಇಲ್ಲಿದೆ.

ಕೇಂದ್ರ ಸರ್ಕಾರಿ ಉದ್ಯೋಗವನ್ನು (Central Govt Jobs) ಬಯಸುವ ದೇಶದ ಯುವಜನತೆಗೆ ಕೇಂದ್ರ ಲೋಕಸೇವಾ ಆಯೋಗವು (UPSC) ಸುವರ್ಣಾವಕಾಶವೊಂದನ್ನು ನೀಡಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 450 ಗ್ರೂಪ್ 'A' ಮತ್ತು ಗ್ರೂಪ್ 'B' ಗೆಜೆಟೆಡ್ ಹುದ್ದೆಗಳ ಭರ್ತಿಗಾಗಿ ಹೊಸ ನಿಯೋಜನಾ ಅಧಿಸೂಚನೆ ಪ್ರಕಟಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ.
ಹುದ್ದೆ ವಿವರ:
ಈ ನೇಮಕಾತಿ ಪ್ರಕ್ರಿಯೆಯು ಡ್ರಗ್ ಇನ್ಸ್‌ಪೆಕ್ಟರ್, ಕಂಪನಿ ಪ್ರಾಸಿಕ್ಯೂಟರ್, ಸಹಾಯಕ ಎಂಜಿನಿಯರ್, ಕಾನೂನು ಅಧಿಕಾರಿ, ಏರೋನಾಟಿಕಲ್ ಅಧಿಕಾರಿ, ಸ್ಪೆಷಲಿಸ್ಟ್ ಗ್ರೇಡ್ 3 ಸಹಾಯಕ ಪ್ರಾಧ್ಯಾಪಕರು ಸೇರಿದಂತೆ ವಿವಿಧ ಹುದ್ದೆಗಳನ್ನು ಒಳಗೊಂಡಿದೆ.
ಅರ್ಹತೆ:
ಡ್ರಗ್ ಇನ್ಸ್‌ಪೆಕ್ಟರ್ ಹುದ್ದೆಗಳು: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಫಾರ್ಮಸಿ, ಫಾರ್ಮಾಸ್ಯುಟಿಕಲ್ ಸೈನ್ಸಸ್ ಅಥವಾ ಕ್ಲಿನಿಕಲ್ ಫಾರ್ಮಕಾಲಜಿ/ಮೈಕ್ರೋಬಯಾಲಜಿ ಸ್ಪೆಷಲೈಸೇಶನ್ ಹೊಂದಿರುವ ಮೆಡಿಸಿನ್ (MBBS) ಪದವಿ ಪಡೆದಿರಬೇಕು. ಈ ಹುದ್ದೆಗೆ ಯಾವುದೇ ಪೂರ್ವ ಅನುಭವದ ಅಗತ್ಯವಿರುವುದಿಲ್ಲ.
ಸ್ಪೆಷಲಿಸ್ಟ್ ಗ್ರೇಡ್-III ಹುದ್ದೆಗಳು: ಸಂಬಂಧಪಟ್ಟ ವೈದ್ಯಕೀಯ ವಿಭಾಗದಲ್ಲಿ MBBS ಹಾಗೂ ಸ್ನಾತಕೋತ್ತರ ಪದವಿ (MD/MS/DNB) ಮುಗಿಸಿರಬೇಕು.
ಇತರ ಇಂಜಿನಿಯರಿಂಗ್/ತಾಂತ್ರಿಕ ಹುದ್ದೆಗಳು: ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಬಿ.ಇ / ಬಿ.ಟೆಕ್ ಅಥವಾ ಮಾಸ್ಟರ್ಸ್ ಪದವಿ ಹೊಂದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನ್ವಯವಾಗುವಂತೆ, ಗರಿಷ್ಠ ವಯೋಮಿತಿ 30 ವರ್ಷಗಳು. ಇದರೊಂದಿಗೆ ಹುದ್ದೆಯ ಸ್ವರೂಪಕ್ಕೆ ಅನುಗುಣವಾಗಿ ವಯೋಮಿತಿ ಬದಲಾಗಲಿದೆ. ಜೊತೆಗೆ ವರ್ಗಗಳಿಗೆ ಅನುಸಾರ ವಯೋಮಿತಿ ಸಡಿಲಿಕೆ ಇದೆ.
ಸಂಬಳ:
ಡ್ರಗ್ ಇನ್ಸ್‌ಪೆಕ್ಟರ್ / ಗ್ರೂಪ್ 'ಬಿ' ಹುದ್ದೆಗಳಿಗೆ 47,600 ರಿಂದ 1,51,100 ರವರೆಗೆ ವೇತನ ಇರಲಿದೆ.
ಸ್ಪೆಷಲಿಸ್ಟ್ / ಗ್ರೂಪ್ 'ಎ' ಹುದ್ದೆಗಳಿಗೆ Level-11 ರ ಶ್ರೇಣಿಯಲ್ಲಿ ವೇತನ ಇರಲಿದೆ.
ಇದರೊಂದಿಗೆ DA, HRA ಸೇರಿದಂತೆ ಕೇಂದ್ರ ಸರ್ಕಾರದ ಎಲ್ಲಾ ಭತ್ಯೆಗಳು ಲಭ್ಯವಿರುತ್ತವೆ.
ಕೊನೆಯ ದಿನಾಂಕ:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಜುಲೈ 17, 2026ರ ಸಂಜೆ 6:00 ಗಂಟೆಯವರೆಗೆ ಮಾತ್ರ ಅವಕಾಶವಿದೆ.
ಅರ್ಜಿ ಸಲ್ಲಿಸುವ ವಿಧಾನ ಮತ್ತು ಶುಲ್ಕ:
ಯುಪಿಎಸ್‌ಸಿಯ ಅಧಿಕೃತ ಆನ್‌ಲೈನ್ ಪೋರ್ಟಲ್ UPSC Online ಭೇಟಿ ನೀಡಿ, ಒನ್-ಟೈಮ್ ರಿಜಿಸ್ಟ್ರೇಷನ್ (OTR) ಪ್ರಕ್ರಿಯೆ ಪೂರ್ಣಗೊಳಿಸಿ ಅರ್ಜಿ ಸಲ್ಲಿಸಬೇಕು. ಇನ್ನು, ಸಾಮಾನ್ಯ, OBC ಮತ್ತು EWS ವರ್ಗದ ಅಭ್ಯರ್ಥಿಗಳಿಗೆ 25 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ಇನ್ನು, ಮಹಿಳೆಯರು, ಎಸ್‌ಸಿ, ಎಸ್‌ಟಿ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳ ಆಯ್ಕೆಯನ್ನು ಮೊದಲು ಅರ್ಜಿಗಳ ಪರಿಶೀಲನೆ ಮತ್ತು ಶಾರ್ಟ್‌ಲಿಸ್ಟಿಂಗ್ ಮೂಲಕ ನಡೆಸಲಾಗುತ್ತದೆ. ಅಗತ್ಯವಿದ್ದರೆ ನೇಮಕಾತಿ ಪರೀಕ್ಷೆ ನಡೆಸಲಾಗುತ್ತದೆ. ನಂತರ ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಯಲಿದ್ದು, ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




